KKR vs RCB: ಕಾಲು ಮುಟ್ಟಿದ ರಿಂಕು ಸಿಂಗ್ ಅನ್ನು ಕಡೆಗಣಿಸಿದ್ರಾ ಕೊಹ್ಲಿ? ಸತ್ಯಾಂಶ ಬೇರೇನೇ ಇದೆ!

ನಿನ್ನೆ ( ಏಪ್ರಿಲ್ 26 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾದವು.
ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತವರು ನೆಲದಲ್ಲಿಯೇ ಸೋಲಿಸಿ ಟೂರ್ನಿಯಲ್ಲಿ ತನ್ನ ಮೂರನೇ ಗೆಲುವನ್ನು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 201 ರನ್‌ಗಳ ಗುರಿಯನ್ನು ನೀಡಿತು.
ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 179 ರನ್ ಕಲೆಹಾಕಿದ್ದು 21 ರನ್‌ಗಳ ಅಂತರದಿಂದ ಹೀನಾಯ ಸೋಲು ಕಂಡಿದೆ. ಈ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಲ್ಕತ್ತಾ ನೈಟರ್ ರೈಡರ್ಸ್ ವಿರುದ್ಧ ಎರಡನೇ ಬಾರಿಗೆ ಶರಣಾಗಿದೆ.
ಹೌದು, ಏಪ್ರಿಲ್ 9ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆದಿದ್ದ ಮೊದಲ ಮುಖಾಮುಖಿ ಪಂದ್ಯದಲ್ಲಿ 81 ರನ್‌ಗಳ ಹೀನಾಯ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಪಂದ್ಯ ಸೇಡು ತೀರಿಸಿಕೊಳ್ಳಲು ಇರುವ ವೇದಿಕೆ ಎಂದೇ ಹೇಳಲಾಗಿತ್ತು. ಆದರೆ ಇದನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ರಾಯಲ್ ಚಾಲೆಂಜರ್ಸ್ ಎಡವಿ ಮತ್ತೆ ಸೋತಿದ್ದಾರೆ.
ಕಳೆದೆರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವನ್ನು ಕಂಡಿತ್ತು. ಅದೇ ರೀತಿ ನಿನ್ನೆ ನಡೆದ ಪಂದ್ಯದಲ್ಲಿಯೂ ಸಹ ಕೊಹ್ಲಿ ನಾಯಕತ್ವದಲ್ಲಿಯೇ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹ್ಯಾಟ್ರಿಕ್ ಗೆಲುವಿನ ಕನಸು ಕನಸಾಗಿಯೇ ಉಳಿದಿದೆ.
ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ನಾಯಕನಾಗಿ ವಿರಾಟ್ ಕೊಹ್ಲಿ ಸೋತಿದ್ದಾರೆ. ಹೀಗೆ ಈ ಪಂದ್ಯ ಮುಕ್ತಾಯವಾದ ಬೆನ್ನಲ್ಲೇ ವಿರಾಟ್ ಕೊಹ್ಲಿ ಸಾಕಷ್ಟು ಸುದ್ದಿಗೊಳಗಾದರು. ಪಂದ್ಯ ಸೋತದ್ದರ ಬಗ್ಗೆ ಪ್ರತಿಕ್ರಿಯಿಸಿದ ರೀತಿ ಹಾಗೂ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಸುದ್ದಿಗಳ ಜತೆಗೆ ಪಂದ್ಯ ಮುಕ್ತಾಯವಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಯುವ ಆಟಗಾರ ರಿಂಕು ಸಿಂಗ್ ಪಾದ ಮುಟ್ಟಿದರು ಎಂಬ ಸುದ್ದಿಗೂ ಸಹ ಕೊಹ್ಲಿ ಒಳಗಾದರು.
ಹೌದು, ಎದುರಿಗೆ ಬರುತ್ತಿದ್ದ ವಿರಾಟ್ ಕೊಹ್ಲಿಗೆ ಕಾಲಿಗೆ ರಿಂಕು ಸಿಂಗ್ ಮೈದಾನದಲ್ಲಿಯೇ ನಮಸ್ಕರಿಸಿದ್ದಾರೆ ಎಂಬ ಫೋಟೊವೊಂದು ಹರಿದಾಡಿತು. ಈ ಫೋಟೊದಲ್ಲಿ ವಿರಾಟ್ ಕೊಹ್ಲಿ ಕಾಲಿಗೆ ರಿಂಕು ಸಿಂಗ್ ನಮಸ್ಕರಿಸುವ ಹಾಗೆ ಇತ್ತು ಹಾಗೂ ಇದರಲ್ಲಿ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದ ರಿಂಕು ಸಿಂಗ್ ಅವರನ್ನು ಕಡೆಗಣಿಸಿದ್ದಾರೆ ಎಂಬ ಆರೋಪವೂ ಸಹ ಕೇಳಿಬಂದಿತ್ತು.
ಆದರೆ ವಿಷಯ ಬೇರೆಯದ್ದೇ ಇದೆ. ಅದೇನೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಮುಗಿದ ಬಳಿಕ ರಿಂಕು ಸಿಂಗ್ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದೇ ಇಲ್ಲ ಎಂಬುದು. ಹೌದು, ಇದೊಂದು ನಕಲಿ ಫೋಟೊ. ವಿರಾಟ್ ಕೊಹ್ಲಿಯ ಫೋಟೊವನ್ನು ಕತ್ತರಿಸಿ ರಿಂಕು ಸಿಂಗ್ ನೆಲಕ್ಕೆ ಬಾಗಿದ್ದ ಜಾಗದಲ್ಲಿ ಹಾಕಿ ಎಡಿಟ್ ಮಾಡಲಾಗಿತ್ತು.
ಇದು ಎಡಿಟ್ ಎಂದು ಅರಿಯದ ಅನೇಕ ವಿರಾಟ್ ಕೊಹ್ಲಿ ಅಭಿಮಾನಿಗಳು ರಿಂಕು ಸಿಂಗ್ ಕೊಹ್ಲಿ ಕಾಲಿಗೆ ನಮಸ್ಕರಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇದಕ್ಕೆ ಉತ್ತರವಾಗಿ ನೆಟ್ಟಿಗರು ಇದನ್ನು ಟ್ರೋಲ್ ಮಾಡಿದ್ದು, ಇಂತಹ ಕೆಟ್ಟ ಯೋಚನೆಗಳಲ್ಲಿ ಎಡಿಟ್ ಮಾಡುವವರು ಕಿಡಿಗೇಡಿಗಳು ಎಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications