
ಬಹುನಿರೀಕ್ಷಿತ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತುವಿಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯದ ಮೂಲಕ ಚಾಲನೆ ಸಿಗಲಿದೆ.
ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲು ಎದುರು ನೋಡುತ್ತಿದೆ. ಈ ಮೊದಲು ಡೆಲ್ಲಿ ಡೇರ್‌ಡೆವಿಲ್ಸ್ ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದ ತಂಡವನ್ನು ಐಪಿಎಲ್ 2019ರ ನಂತರ ಡೆಲ್ಲಿ ಕ್ಯಾಪಿಟಲ್ಸ್ ಎಂದು ಬದಲಿಸಲು ಮಾಲೀಕರು ನಿರ್ಧರಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇತ್ತೀಚಿಗೆ ಗಮನಾರ್ಹ ಪ್ರದರ್ಶನ ನೀಡುತ್ತಿದೆ. ಆದರೆ, ಟ್ರೋಫಿ ಎತ್ತಿ ಹಿಡಿಯಲು ಮಾತ್ರ ಸಾಧ್ಯವಾಗುತ್ತಿಲ್ಲ. 2020ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಒಮ್ಮೆ ಮಾತ್ರ ಫೈನಲ್ ತಲುಪಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧ ಸೋತು ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟರು.
2023ರ ಐಪಿಎಲ್ ಋತುವಿಗೆ ಸಜ್ಜಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿ ಟ್ರೋಫಿ ಗೆಲ್ಲುವ ಭರವಸೆ ಹೊಂದಿದ್ದಾರೆ. ಆದರೆ, ಪಂದ್ಯಾವಳಿ ಆರಂಭಕ್ಕೂ ಮುನ್ನ ತಂಡಕ್ಕೆ ಹಿನ್ನಡೆ ಉಂಟಾಗಿದೆ. ಕಾರು ಅಪಘಾತದಲ್ಲಿ ಗಾಯಗೊಂಡಿರುವ ರಿಷಭ್ ಪಂತ್ ಟೂರ್ನಿಯಿಂದ ಹೊರಗುಳಿದಿದ್ದು, ಹೀಗಾಗಿ ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಪೃಥ್ವಿ ಶಾ ಮತ್ತು ಡೇವಿಡ್ ವಾರ್ನರ್ ಇನ್ನಿಂಗ್ಸ್ ಆರಂಭಿಸಲಿದ್ದರೆ, ಆಸ್ಟ್ರೇಲಿಯಾದ ಮತ್ತೊಬ್ಬ ಸ್ಟಾರ್ ಬ್ಯಾಟರ್ ಮಿಚೆಲ್ ಮಾರ್ಷ್ ಮಧ್ಯಮ ಕ್ರಮಾಂಕದಲ್ಲಿ ಶಕ್ತಿ ತುಂಬಲಿದ್ದಾರೆ.
ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿ ಯಾರು ವಹಿಸಲಿದ್ದಾರೆ ಎಂಬುದು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ. ಆದಾಗ್ಯೂ, ಫಿಲ್ ಸಾಲ್ಟ್ ಕೀಪಿಂಗ್ ಗ್ಲೌಸ್ ತೊಡುವ ಸಾಧ್ಯತೆ ಇದೆ. ಇದೂ ವಿದೇಶಿ ನಾಲ್ವರು ಆಟಗಾರರನ್ನು ಮಾತ್ರ ಆಡಿಸುವ ನಿಯಮದಿಂದ ತಂಡಕ್ಕೆ ಹಿನ್ನಡೆಯಾಗಲಿದೆ.
ವೇಗದ ಬೌಲಿಂಗ್ ವಿಭಾಗದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸ್ವಲ್ಪ ದುರ್ಬಲವಾಗಿದ್ದು, ದಕ್ಷಿಣ ಆಫ್ರಿಕಾದ ಸ್ಟಾರ್ ವೇಗಿ ಆನ್ರಿಚ್ ನಾರ್ಟ್ಜೆ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ಚೇತನ್ ಸಕಾರಿಯಾ ಮತ್ತು ಖಲೀಲ್ ಅಹ್ಮದ್ ಸಾಥ್ ನೀಡಲಿದ್ದಾರೆ. ಇನ್ನು ಸ್ಪಿನ್ನಿಂಗ್ ವಿಭಾಗದಲ್ಲಿ ಅಕ್ಷರ್ ಪಟೇಲ್, ಕುಲದೀಪ್ ಯಾದವ್ ಇದ್ದಾರೆ.

ಐಪಿಎಲ್ 2023: ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಬಲಿಷ್ಠ ಆಡುವ 11ರ ಬಳಗ
ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಷ್, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಲಲಿತ್ ಯಾದವ್, ಅಕ್ಷರ್ ಪಟೇಲ್ (ಉಪನಾಯಕ), ಕುಲದೀಪ್ ಯಾದವ್, ಆನ್ರಿಚ್ ನಾರ್ಟ್ಜೆ, ಚೇತನ್ ಸಕಾರಿಯಾ, ಖಲೀಲ್ ಅಹ್ಮದ್
ಐಪಿಎಲ್ 2023: ಡೆಲ್ಲಿ ಕ್ಯಾಪಿಟಲ್ಸ್ ವೇಳಾಪಟ್ಟಿ
ಏಪ್ರಿಲ್ 1: ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಲಕ್ನೋ
ಏಪ್ರಿಲ್ 4: ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಟೈಟನ್ಸ್, ದೆಹಲಿ
ಏಪ್ರಿಲ್ 8: ರಾಜಸ್ಥಾನ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಗುವಾಹಟಿ
ಏಪ್ರಿಲ್ 11: ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್, ದೆಹಲಿ
ಏಪ್ರಿಲ್ 15: ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಬೆಂಗಳೂರು
ಏಪ್ರಿಲ್ 20: ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ದೆಹಲಿ
ಏಪ್ರಿಲ್ 24: ಡೆಲ್ಲಿ ಕ್ಯಾಪಿಟಲ್ಸ್ vs ಸನ್‌ರೈಸರ್ಸ್ ಹೈದರಾಬಾದ್, ಹೈದರಾಬಾದ್
ಏಪ್ರಿಲ್ 29: ಡೆಲ್ಲಿ ಕ್ಯಾಪಿಟಲ್ಸ್ vs ಸನ್‌ರೈಸರ್ಸ್ ಹೈದರಾಬಾದ್, ದೆಹಲಿ
ಮೇ 2: ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಟೈಟನ್ಸ್, ಅಹಮದಾಬಾದ್
ಮೇ 6: ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ದೆಹಲಿ
ಮೇ 10: ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಚೆನ್ನೈ
ಮೇ 13: ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್, ದೆಹಲಿ
ಮೇ 17: ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್, ಧರ್ಮಶಾಲಾ
ಮೇ 20: ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ