IPL 2023: ಐಪಿಎಲ್ ಇತಿಹಾಸದಲ್ಲಿಯೇ ಯಾರೂ ಮಾಡಿರದ ಕೆಟ್ಟ ದಾಖಲೆ ಬರೆದ ರೋಹಿತ್ ಶರ್ಮಾ!

ರೋಹಿತ್ ಶರ್ಮಾ.. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸ ಕಂಡ ಅತ್ಯಂತ ಯಶಸ್ವಿ ನಾಯಕ. ಕ್ಯಾಪ್ಟನ್ ಆಗಿ ಮುಂಬೈ ಇಂಡಿಯನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ನಾಯಕತ್ವದಡಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಒಟ್ಟು 5 ಬಾರಿ ಐಪಿಎಲ್ ಟ್ರೋಫಿಯನ್ನು ಗೆದ್ದಿದೆ.
ಹೀಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆ ಹೊಂದಿರುವ ರೋಹಿತ್ ಶರ್ಮಾ ಬ್ಯಾಟ್ಸ್‌ಮನ್ ಆಗಿಯೂ ಮಿಂಚಿದ್ದಾರೆ ಹಾಗೂ ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ವಿರಾಟ್ ಕೊಹ್ಲಿ, ಶಿಖರ್ ಧವನ್ ಹಾಗೂ ಡೇವಿಡ್ ವಾರ್ನರ್ ಬಳಿಕ ಅತಿಹೆಚ್ಚು ಐಪಿಎಲ್ ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿರುವ ರೋಹಿತ್ ಶರ್ಮಾ ಇತ್ತೀಚಿನ ದಿನಗಳಲ್ಲಿ ಸ್ಪೋಟಕ ಆಟವನ್ನಾಡುವಲ್ಲಿ ವಿಫಲಗೊಂಡಿದ್ದಾರೆ.
ಸಾಲು ಸಾಲು ಕೆಟ್ಟ ಇನ್ನಿಂಗ್ಸ್ ಆಡುತ್ತಿರುವ ರೋಹಿತ್ ಶರ್ಮಾ ಇಂದು ( ಮೇ 6 ) ನಡೆದ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದಲ್ಲಿಯೂ ತಮ್ಮ ಕಳಪೆ ಫಾರ್ಮ್ ಮುಂದುವರಿಸಿದ್ದಾರೆ.
ಹೌದು, ಕಳೆದ ಎರಡು ಪಂದ್ಯಗಳಲ್ಲಿ ಡಕ್ ಔಟ್ ಆಗಿದ್ದ ರೋಹಿತ್ ಶರ್ಮಾ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿಯೂ ಸಹ ಡಕ್ಔಟ್ ಆಗಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಸತತ ಮೂರು ಪಂದ್ಯಗಳಲ್ಲಿ ಡಕ್ ಔಟ್ ಆಗಿದ್ದು, ಈ ಡಕ್ ಔಟ್ ಮೂಲಕ ಬೇಡವಾದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಹೌದು, ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿಯೇ ಅತಿಹೆಚ್ಚು ಬಾರಿ ಡಕ್ ಔಟ್ ಆದ ಆಟಗಾರ ಎಂಬ ಕೆಟ್ಟ ದಾಖಲೆಯನ್ನು ರೋಹಿತ್ ಶರ್ಮಾ ನಿರ್ಮಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಒಟ್ಟು 16 ಬಾರಿ ಡಕ್ ಔಟ್ ಆಗಿರುವ ರೋಹಿತ್ ಶರ್ಮಾ ಅತಿಹೆಚ್ಚು ಬಾರಿ ಶೂನ್ಯ ಸುತ್ತಿದ ಆಟಗಾರ ಎನಿಸಿಕೊಂಡಿದ್ದಾರೆ.
ಈ ಪೈಕಿ 11 ಡಕ್ ಔಟ್‌ಗಳು ನಾಯಕನಾಗಿ ಆಗಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನಾಯಕನಾಗಿ ಅತಿಹೆಚ್ಚು ಬಾರಿ ಡಕ್ ಔಟ್ ಆದ ನಾಯಕ ಎಂಬ ಕೆಟ್ಟ ದಾಖಲೆಯನ್ನೂ ಸಹ ನಿರ್ಮಿಸಿದ್ದಾರೆ.
ಇನ್ನು ಸಾಲು ಸಾಲು ಪಂದ್ಯಗಳಲ್ಲಿ ವಿಫಲತೆ ಅನುಭವಿಸಿದ ಕಾರಣ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಓಪನರ್ ಆಗಿ ಕಣಕ್ಕಿಳಿಯುವ ಬದಲು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಪ್ರಯೋಗ ಮಾಡಿದ್ದರು. ಆದರೆ ಈ ಪ್ರಯೋಗವೂ ಸಹ ಕೈಗತ್ತಲಿಲ್ಲ. ಐದು ವರ್ಷಗಳ ಬಳಿಕ ಓಪನಿಂಗ್ ಸ್ಥಾನವನ್ನು ಬಿಟ್ಟು ಬೇರೆ ಕ್ರಮಾಂಕದಲ್ಲಿ ಕಣಕ್ಕಿಳಿದರೂ ರೋಹಿತ್ ಶರ್ಮಾ ಶೂನ್ಯ ಸುತ್ತುವುದರಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿಹೆಚ್ಚು ಡಕ್ಔಟ್ ಆದ ಬ್ಯಾಟ್ಸ್‌ಮನ್‌ಗಳು
1. ರೋಹಿತ್ ಶರ್ಮಾ - 16 ಬಾರಿ
2. ಸುನಿಲ್ ನರೇನ್ - 15 ಬಾರಿ
3. ಮನ್‌ದೀಪ್ ಸಿಂಗ್ - 15 ಬಾರಿ
4. ದಿನೇಶ್ ಕಾರ್ತಿಕ್ -15 ಬಾರಿ
5. ಅಂಬಾಟಿ ರಾಯುಡು - 14 ಬಾರಿ
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನಾಯಕನಾಗಿ ಅತಿಹೆಚ್ಚು ಬಾರಿ ಡಕ್ ಔಟ್ ಆದ ಆಟಗಾರರ ಪಟ್ಟಿ
1. ರೋಹಿತ್ ಶರ್ಮಾ - 11 ಬಾರಿ
2. ಗೌತಮ್ ಗಂಭೀರ್ - 10 ಬಾರಿ
3. ಆಡಮ್ ಗಿಲ್‌ಕ್ರಿಸ್ಟ್ - 7 ಬಾರಿ
4. ಶೇನ್ ವಾರ್ನ್ - 7 ಬಾರಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications