ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2023: ಐಪಿಎಲ್‌ನಲ್ಲಿ ಈ ವಿಚಾರದಲ್ಲಿ ಧೋನಿಯನ್ನು ಹಿಂದಿಕ್ಕಿದ ರೋಹಿತ್ ಶರ್ಮಾ

IPL 2023: Rohit Sharma Surpass MS Dhoni In IPL Total Earnings

ರೋಹಿತ್ ಶರ್ಮಾ ಮತ್ತು ಮಹೇಂದ್ರ ಸಿಂಗ್ ಧೋನಿ ಇಬ್ಬರೂ ಐಪಿಎಲ್‌ನಲ್ಲಿ ಅತ್ಯಂತ ಯಶಸ್ವೀ ನಾಯಕರಾಗಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ 5 ಬಾರಿ ಐಪಿಎಲ್ ಚಾಂಪಿಯನ್ ಎನಿಸಿಕೊಂಡಿದೆ, ಎಂಎಸ್ ಧೋನಿ ನೇತೃತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4 ಬಾರಿ ಕಪ್ ಗೆದ್ದಿದೆ.

ಇವರಿಬ್ಬರೂ ಐಪಿಎಲ್‌ನಲ್ಲಿ ಕೋಟಿಗಟ್ಟಲೆ ಹಣ ಪಡೆಯುವ ಆಟಗಾರರಾಗಿದ್ದಾರೆ. ಎಂಎಸ್‌ ಧೋನಿ ಈವರೆಗೆ ಐಪಿಎಲ್‌ನಲ್ಲಿ ಹೆಚ್ಚು ಸಂಭಾವನೆ ಪಡೆದ ಆಟಗಾರ ಎನಿಸಿಕೊಂಡಿದ್ದರು. ಆದರೆ, ರೋಹಿತ್ ಶರ್ಮಾ ಈಗ ಧೋನಿಯನ್ನು ಆದಾಯದ ವಿಚಾರದಲ್ಲಿ ಹಿಂದಿಕ್ಕಿದ್ದಾರೆ.

ಕಳೆದ 16 ವರ್ಷಗಳಲ್ಲಿ 178.6 ಕೋಟಿ ರುಪಾಯಿ ಸಂಭಾವನೆ ಪಡೆಯುವ ಮೂಲಕ ಎಂಎಸ್ ಧೋನಿಯನ್ನು ಹಿಂದಿಕ್ಕಿ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

WTC Points Table: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿ?WTC Points Table: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿ?

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಚೊಚ್ಚಲ ಹರಾಜಿನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಹರಾಜಾದ ಆಟಗಾರ. ಅವರ ಮೊದಲ ಸಂಭಾವನೆ 6 ಕೋಟಿ ರುಪಾಯಿ, 2011ರಲ್ಲಿ 8.28 ಕೋಟಿ, 2014ರಲ್ಲಿ 12.5 ಕೋಟಿ ರುಪಾಯಿ, 2018 ರಲ್ಲಿ 15 ಕೋಟಿ ರುಪಾಯಿ ಪಡೆದಿದ್ದಾರೆ. 2022ರಲ್ಲಿ ಧೋನಿ 12 ಕೋಟಿ ರುಪಾಯಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಐಪಿಎಲ್‌ನಲ್ಲಿ ಎಂಎಸ್ ಧೋನಿ ಒಟ್ಟು ಗಳಿಕೆ 176.84 ಕೋಟಿ ರುಪಾಯಿ.

IPL 2023: Rohit Sharma Surpass MS Dhoni In IPL Total Earnings

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ

ಐಪಿಎಲ್‌ ಟೂರ್ನಿಯ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ. ಮುಂಬೈ ಇಂಡಿಯನ್ಸ್ 5 ಬಾರಿ ಕಪ್ ಗೆಲ್ಲುವಲ್ಲಿ ರೋಹಿತ್ ಪಾತ್ರ ತುಂಬಾ ಮುಖ್ಯವಾಗಿದೆ. ಐಪಿಎಲ್ ಆರಂಭದ ಮೊದಲ ಮೂರು ಆವೃತ್ತಿಯಲ್ಲಿ ಅವರು ಡೆಕ್ಕನ್ ಚಾರ್ಜರ್ಸ್ ತಂಡದ ಬ್ಯಾಟರ್ ಆಗಿದ್ದರು. 2009ರಲ್ಲಿ ಡೆಕ್ಕನ್ ಚಾರ್ಜಸ್ ಐಪಿಎಲ್ ಕಪ್ ಗೆದ್ದ ತಂಡದ ಭಾಗವಾಗಿದ್ದರು.

2011ರಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡರು. 2013ರಲ್ಲಿ ಅವರು ಕೆಲವು ಪಂದ್ಯಗಳ ನಂತರ ತಂಡದ ನಾಯಕತ್ವ ವಹಿಸಿಕೊಂಡರು, ಮುಂಬೈ ಇಂಡಿಯನ್ಸ್ ಕಪ್ ಗೆಲ್ಲುವಲ್ಲಿ ಸಹಾಯ ಮಾಡಿದರು. ಅದೇ ವರ್ಷ ಅವರು ಚಾಂಪಿಯನ್ಸ್‌ ಲೀಗ್‌ನಲ್ಲಿ ಕೂಡ ಮುಂಬೈ ಇಂಡಿಯನ್ಸ್ ಚಾಂಪಿಯನ್ ಎನಿಸಿಕೊಂಡಿತು.

2015ರ ಐಪಿಎಲ್ ಆವೃತ್ತಿಯಲ್ಲಿ ಮೊದಲ ಆರು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಮಾತ್ರ ಗೆದ್ದಿದ್ದ ಮುಂಬೈ ಇಂಡಿಯನ್ಸ್ ಆನಂತರ ಉಳಿದ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಚಾಂಪಿಯನ್ ಪಟ್ಟ ಅಲಂಕರಿಸಿತು. 2017 ಮತ್ತು 2019ರಲ್ಲಿ ಮುಂಬೈ ಇಂಡಿಯನ್ಸ್ ಮತ್ತೆ ಕಪ್ ಗೆಲ್ಲುವಲ್ಲಿ ಯಶಸ್ವಿಯಾಯಿತು. 2020ರಲ್ಲಿ ಕೂಡ ಕಪ್ ಗೆಲ್ಲುವ ಮೂಲಕ ಅವರು ಐದು ಬಾರಿ ಚಾಂಪಿಯನ್ ಎನಿಸಿಕೊಂಡ ಏಕೈಕ ತಂಡ ಎನ್ನುವ ಸಾಧನೆ ಮಾಡಿದರು.

IPL 2023: Rohit Sharma Surpass MS Dhoni In IPL Total Earnings

ಸಿಎಸ್‌ಕೆ ತಂಡದ ಆಧಾರಸ್ತಂಭ ಧೋನಿ

ಎಂಎಸ್‌ ಧೋನಿ ಮೊದಲನೇ ಆವೃತ್ತಿಯಿಂದ ಸಿಎಸ್‌ಕೆ ತಂಡದ ಭಾಗವಾಗಿದ್ದಾರೆ. ಸಿಎಸ್‌ಕೆ ತಂಡಕ್ಕೆ ಎರಡು ವರ್ಷ ನಿಷೇಧ ಹೇರಿದ ಸಮಯದಲ್ಲಿ ಮಾತ್ರ ಧೋನಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಪರವಾಗಿ ಆಡಿದ್ದರು. ನಂತರ ಸಿಎಸ್‌ಕೆ ತಂಡಕ್ಕೆ ಅವರು ವಾಪಸಾದರು.

ಧೋನಿ ನೇತೃತ್ವದಲ್ಲಿ ಸಿಎಸ್‌ಕೆ ಇದುವರೆಗೂ 4 ಬಾರಿ ಕಪ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಮುಂಬೈ ಇಂಡಿಯನ್ಸ್ ಬಳಿಕ ಅತಿ ಹೆಚ್ಚು ಬಾರಿ ಕಪ್ ಗೆದ್ದ ತಂಡ ಎನ್ನುವ ಖ್ಯಾತಿಗೆ ಪಾತ್ರವಾಗಿದೆ. 2020ರಲ್ಲಿ ಭಾರತ ತಂಡದಿಂದ ಧೋನಿ ನಿವೃತ್ತಿಯಾಗಿದ್ದಾರೆ. 2023ರ ಐಪಿಎಲ್‌ ನಂತರ ಅವರು ವಿದಾಯ ಹೇಳುವ ಸಾಧ್ಯತೆ ಇದೆ.

Story first published: Thursday, December 29, 2022, 14:15 [IST]
Other articles published on Dec 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X