
ನಿನ್ನೆ ( ಮೇ 21 ) ನಡೆದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟನ್ಸ್ ವಿರುದ್ಧ ಸೋಲುವ ಮೂಲಕ ಪ್ಲೇಆಫ್ ಪ್ರವೇಶಿಸಲು ಇದ್ದ ಕೊನೆಯ ಅವಕಾಶವನ್ನು ಕೈತಪ್ಪಿಸಿಕೊಂಡಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ಹಾಗೂ ಅಬ್ಬರದ ಶತಕದ ನೆರವಿನಿಂದ 20 ಓವರ್‌ಗಳಲ್ಲಿ ವಿಕೆಟ್ 5 ನಷ್ಟಕ್ಕೆ 197 ರನ್ ಕಲೆಹಾಕಿ ಎದುರಾಳಿ ಗುಜರಾತ್ ಟೈಟನ್ಸ ತಂಡಕ್ಕೆ ಗೆಲ್ಲಲು 198 ರನ್‌ಗಳ ಗುರಿಯನ್ನು ನೀಡಿತ್ತು.
ಈ ಗುರಿಯನ್ನು ಬೆನ್ನತ್ತುವಲ್ಲಿ ಯಶಸ್ವಿಯಾದ ಗುಜರಾತ್ ಟೈಟನ್ಸ್ ಶುಬ್‌ಮನ್ ಗಿಲ್ ಭರ್ಜರಿ ಶತಕದ ನೆರವಿನಿಂದ 19.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 198 ರನ್ ಕಲೆಹಾಕಿ ಭರ್ಜರಿ ಗೆಲುವು ಸಾಧಿಸಿ 7 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.
ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು 2008ರಿಂದ 2023ರವರೆಗಿನ ಎಲ್ಲಾ 16 ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯಾವ ಹಂತದಲ್ಲಿ ಟೂರ್ನಿಯಿಂದ ಹೊರಬಿತ್ತು ಎಂಬ ಮಾಹಿತಿ ಈ ಕೆಳಕಂಡಂತಿದೆ..
* 2008ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಟೂರ್ನಿಯಿಂದ ಹೊರಬಿದ್ದಿತ್ತು.
* 2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪಂದ್ಯದಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ ಸೋತು ರನ್ನರ್ ಅಪ್ ಆಗಿ ಹೊರಹೊಮ್ಮಿತ್ತು.
* 2010ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಮಿ ಫೈನಲ್‌ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿತ್ತು.
* 2011ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಫೈನಲ್‌ನಲ್ಲಿ ಸೋತು ರನ್ನರ್ ಅಪ್ ಆಗಿ ಹೊರಹೊಮ್ಮಿತ್ತು.
* 2012ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸ್ಥಾನ ಪಡೆದುಕೊಂಡು ಟೂರ್ನಿಯಿಂದ ಹೊರಬಿದ್ದಿತ್ತು.
* 2013ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸ್ಥಾನ ಪಡೆದುಕೊಂಡು ಟೂರ್ನಿಯಿಂದ ಹೊರಬಿದ್ದಿತ್ತು.
* 2014ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 7ನೇ ಸ್ಥಾನ ಪಡೆದುಕೊಂಡು ಟೂರ್ನಿಯಿಂದ ಹೊರಬಿದ್ದಿತ್ತು.
* 2015ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡನೇ ಕ್ವಾಲಿಫಯರ್ ಪಂದ್ಯ ಸೋತು ಟೂರ್ನಿಯಿಂದ ಹೊರಬಿದ್ದಿತ್ತು.
* 2016ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಫೈನಲ್ ಪಂದ್ಯದಲ್ಲಿ ಸೋತು ರನ್ನರ್ ಅಪ್ ಆಗಿ ಹೊರಬಿದ್ದಿತ್ತು.
* 2017ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊನೆಯ ಸ್ಥಾಸವನ್ನು ಪಡೆದುಕೊಂಡು ಟೂರ್ನಿಯಿಂದ ಹೊರಬಿದ್ದಿತ್ತು.
* 2018ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರನೇ ಸ್ಥಾನವನ್ನು ಪಡೆದುಕೊಂಡು ಟೂರ್ನಿಯಿಂದ ಹೊರಬಿತ್ತು.
* 2019ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊನೆಯ ಸ್ಥಾಸವನ್ನು ಪಡೆದುಕೊಂಡು ಟೂರ್ನಿಯಿಂದ ಹೊರಬಿದ್ದಿತ್ತು.
* 2020ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲಿಮಿನೇಟರ್ ಪಂದ್ಯದಲ್ಲಿ ಟೂರ್ನಿಯಿಂದ ಹೊರಬಿದ್ದಿತ್ತು.
* 2021ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲಿಮಿನೇಟರ್ ಪಂದ್ಯದಲ್ಲಿ ಟೂರ್ನಿಯಿಂದ ಹೊರಬಿದ್ದಿತ್ತು.
* 2022ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಟೂರ್ನಿಯಿಂದ ಹೊರಬಿದ್ದಿತ್ತು.
* 2023ರ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಆರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಟೂರ್ನಿಯಿಂದ ಹೊರಬಿದ್ದಿದೆ.