RCB vs KKR IPL 2023: ಗುರ್ಬಾಜ್, ಶಾರ್ದೂಲ್ ಭರ್ಜರಿ ಅರ್ಧಶತಕ; ಆರ್‌ಸಿಬಿಗೆ ಬೃಹತ್ ಗುರಿ ನೀಡಿದ ಕೆಕೆಆರ್
ಗುರುವಾರ, ಏಪ್ರಿಲ್ 6ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ 2023ರ ಐಪಿಎಲ್‌ನ 9ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡ ರಹಮಾನುಲ್ಲಾ ಗುರ್ಬಾಜ್ ಮತ್ತು ಶಾರ್ದೂಲ್ ಠಾಕೂರ್ ಅವರ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಉತ್ತಮ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನಿತೀಶ್ ರಾಣಾ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್‌ಗಳನ್ನು ಗಳಿಸಿದ್ದು, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡಕ್ಕೆ 205 ರನ್‌ಗಳ ಗುರಿ ನೀಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಪರ ಬ್ಯಾಟಿಂಗ್ ಆರಂಭಿಸಿದ ರಹಮಾನುಲ್ಲಾ ಗುರ್ಬಾಜ್ ಮತ್ತು ವೆಂಕಟೇಶ್ ಅಯ್ಯರ್ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾದರು. ತಂಡದ ಮೊತ್ತ 3.2 ಓವರ್‌ಗಳಲ್ಲಿ 26 ರನ್‌ಗಳಾಗಿದ್ದಾಗ 3 ರನ್ ಗಳಿಸಿದ್ದ ವೆಂಕಟೇಶ್ ಅಯ್ಯರ್ ಡೇವಿಡ್ ವಿಲ್ಲಿ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಹೊರನಡೆದರು.
ನಂತರ ಬಂದ ಮನ್‌ದೀಪ್ ಸಿಂಗ್ ಎದುರಿಸಿದ ಮೊದಲ ಎಸೆತದಲ್ಲಿಯೇ ಡೇವಿಡ್ ವಿಲ್ಲಿಗೆ ವಿಕೆಟ್ ಒಪ್ಪಿಸಿದರು. ಇದೇ ವೇಳೆ ನಾಯಕ ನಿತೀಶ್ ರಾಣಾ ಅವರು ಮೈಕಲ್ ಬ್ರೆಸ್‌ವೆಲ್ ಅವರ ಬೌಲಿಂಗ್‌ನಲ್ಲಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್‌ಗೆ ಕ್ಯಾಚ್ ನೀಡಿ ಔಟಾದರು.
ಇನ್ನು ಉತ್ತಮವಾಗಿ ಆಡುತ್ತಿದ್ದ ರಹಮಾನುಲ್ಲಾ ಗುರ್ಬಾಜ್ 44 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಸಮೇತ 57 ರನ್ ಬಾರಿಸಿ ಔಟಾದರು. ನಂತರ ಬಂದ ಸ್ಫೋಟಕ ಬ್ಯಾಟ್ಸ್‌ಮನ್ ಆಂಡ್ರೆ ರಸೆಲ್ ಕೂಡ ಎದುರಿಸಿದ ಮೊದಲ ಎಸೆತದಲ್ಲಿಯೇ ಬೌಂಡರಿ ಲೈನ್‌ನಲ್ಲಿ ವಿರಾಟ್ ಕೊಹ್ಲಿಗೆ ಕ್ಯಾಚ್ ಪೆವಿಲಿಯನ್ ಸೇರಿದರು.

ಈ ವೇಳೆ ಜೊತೆಯಾದ ರಿಂಕು ಸಿಂಗ್ ಮತ್ತು ಶಾರ್ದೂಲ್ ಠಾಕೂರ್ 6ನೇ ವಿಕೆಟ್‌ಗೆ ಶತಕದ ಜೊತೆಯಾಟ ನೀಡಿದರು. ರಿಂಕು ಸಿಂಗ್ 33 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ಸಮೇತ 44 ರನ್ ಗಳಿಸಿ ಔಟಾದರು. ಇನ್ನು ಶಾರ್ದೂಲ್ ಠಾಕೂರ್ 29 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ ಸಮೇತ 57 ರನ್ ಬಾರಿಸಿದರು.
ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ಡೇವಿಡ್ ವಿಲ್ಲಿ 4 ಓವರ್‌ಗಳಲ್ಲಿ 16 ರನ್ ನೀಡಿ ಪ್ರಮುಖ 2 ವಿಕೆಟ್ ಪಡೆದರೆ, ಕರ್ಣ್ ಶರ್ಮಾ 4 ಓವರ್‌ಗಳಲ್ಲಿ 26 ರನ್ ನೀಡಿ ಪ್ರಮುಖ 2 ವಿಕೆಟ್ ಪಡೆದರು. ಮೈಕಲ್ ಬ್ರೆಸ್‌ವೆಲ್ 3 ಓವರ್‌ಗಳಲ್ಲಿ 34 ರನ್ ನೀಡಿ 1 ವಿಕೆಟ್ ಪಡೆದರೆ, ಹರ್ಷಲ್ ಪಟೇಲ್ 3 ಓವರ್‌ಗಳಲ್ಲಿ 38 ರನ್ ನೀಡಿ 1 ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್ 4 ಓವರ್‌ಗಳಲ್ಲಿ 44 ರನ್ ನೀಡಿ 1 ವಿಕೆಟ್ ಕಬಳಿಸಿದರು.

ಎರಡೂ ತಂಡಗಳು ತಲಾ ಒಂದೊಂದು ಬದಲಾವಣೆ ಮಾಡಿದ್ದು, ಆರ್‌ಸಿಬಿ ತಂಡದಲ್ಲಿ ಗಾಯಾಳು ರೀಸ್ ಟೋಪ್ಲೆ ಬದಲಾಗಿ ಡೇವಿಡ್ ವಿಲ್ಲಿ ಸ್ಥಾನ ಪಡೆದಿದ್ದರೆ, ಕೆಕೆಆರ್ ತಂಡದಲ್ಲಿ ಅನುಕುಲ್ ರಾಯ್ ಬದಲಿಯಾಗಿ ಸುಯೇಶ್ ಶರ್ಮಾ ತಮ್ಮ ಚೊಚ್ಚಲ ಐಪಿಎಲ್ ಪಂದ್ಯವಾಡಲು ಅವಕಾಶ ಪಡೆದಿದ್ದಾರೆ.
ಆರ್‌ಸಿಬಿ vs ಕೆಕೆಆರ್ ತಂಡಗಳು ಸಂಭಾವ್ಯ ಆಡುವ 11ರ ಬಳಗ
ಕೆಕೆಆರ್ ತಂಡ: ಮನ್‌ದೀಪ್ ಸಿಂಗ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸುಯೇಶ್ ಶರ್ಮಾ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಟಿಮ್ ಸೌಥಿ.
ಆರ್‌ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications