For Quick Alerts
ALLOW NOTIFICATIONS  
For Daily Alerts
 

RCB vs RR: ಕೈಹಿಡಿದ ಫಾಫ್, ಮ್ಯಾಕ್ಸಿ, ಮತ್ತೆ ಕೈಕೊಟ್ಟ ಮಧ್ಯಮ ಕ್ರಮಾಂಕ; ರಾಜಸ್ಥಾನ್‌ಗೆ 172 ರನ್ ಗುರಿ

IPL 2023: Royal Challengers Bangalore sets the target of 172 runs to Rajasthan Royals

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ಮೇ 14ರ ಭಾನುವಾರ ಲೀಗ್ ಹಂತದ 60 ಹಾಗೂ 61 ನೇ ಪಂದ್ಯಗಳು ಜರುಗುತ್ತಿವೆ. ಸದ್ಯ ಆರಂಭವಾಗಿರುವ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಡುತ್ತಿದ್ದರೆ, ಸಂಜೆ ಆರಂಭಗೊಳ್ಳಲಿರುವ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್‌ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಈ ಪಂದ್ಯ ಜೈಪುರದ ಸಾವೈ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಫಾಫ್ ಡು ಪ್ಲೆಸಿಸ್ ಕೈ ಹಿಡಿದ ಕಾರಣ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು 172 ರನ್‌ಗಳ ಗುರಿಯನ್ನು ನೀಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕ ಆಟಗಾರರಾಗಿ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಫ್ ಡು ಪ್ಲೆಸಿಸ್ ಕಣಕ್ಕಿಳಿದರು. ವಿರಾಟ್ ಕೊಹ್ಲಿ 19 ಎಸೆತಗಳಲ್ಲಿ 18 ರನ್ ಗಳಿಸಿದರೆ, ಫಾಫ್ ಡು ಪ್ಲೆಸಿಸ್ 44 ಎಸೆತಗಳಲ್ಲಿ 55 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್‌ವೆಲ್ 33 ಎಸೆತಗಳಲ್ಲಿ 54 ರನ್ ಚಚ್ಚಿದರು.

ಹೀಗೆ ಈ ಇಬ್ಬರು ಆಟಗಾರರನ್ನು ಹೊರತುಪಡಿಸಿದರೆ ಕೊನೆಯಲ್ಲಿ ಬಂದ ಅನುಜ್ ರಾವತ್ 11 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 29 ರನ್ ಚಚ್ಚಿ ಅಜೇಯರಾಗಿ ಉಳಿದರು. ಇನ್ನುಳಿದಂತೆ ಮಹಿಪಾಲ್ ಲೊಮ್ರೊರ್ 2 ಎಸೆತಗಳಲ್ಲಿ 1 ರನ್, ದಿನೇಶ್ ಕಾರ್ತಿಕ್ 2 ಎಸೆತಗಳಲ್ಲಿ ಡಕ್ಔಟ್ ಹಾಗೂ ಮೈಕೆಲ್ ಬ್ರೇಸ್‌ವೆಲ್ 9 ಎಸೆತಗಳಲ್ಲಿ ಅಜೇಯ 9 ರನ್ ಕಲೆಹಾಕಿದರು.

ಹೀಗೆ ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಅಂತಿಮ ಹಂತದಲ್ಲಿ ಅನುಜ್ ರಾವತ್ ಉತ್ತಮ ಪ್ರದರ್ಶನವನ್ನು ನೀಡಿದ್ದು ಬಿಟ್ಟರೆ ತಂಡದ ಇತರೆ ಆಟಗಾರರಾರೂ ಸಹ ಉತ್ತಮ ಆಟವನ್ನು ಆಡಲಿಲ್ಲ. ಇನ್ನು ಮತ್ತೊಮ್ಮೆ ತಂಡದ ಮಧ್ಯಮ ಕ್ರಮಾಂಕ ಕೈಕೊಟ್ಟಿದೆ.

ರಾಜಸ್ಥಾನ್ ರಾಯಲ್ಸ್ ತಂಡದ ಪರ ಕೆಎಂ ಆಸಿಫ್ ಎರಡು ವಿಕೆಟ್ ಪಡೆದರೆ ಆಡಂ ಜಂಪಾ ಹಾಗೂ ಸಂದೀಪ್ ಶರ್ಮಾ ಒಂದು ವಿಕೆಟ್ ಪಡೆದರು.

ಆಡುವ ಬಗಳಗಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಮೈಕಲ್ ಬ್ರೇಸ್‌ವೆಲ್, ವೇಯ್ನ್ ಪಾರ್ನೆಲ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್ ಹಾಗೂ ನಾಯಕ), ಜೋ ರೂಟ್, ಧ್ರುವ್ ಜುರೆಲ್, ಶಿಮ್ರೋನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಹಾಲ್

Story first published: Sunday, May 14, 2023, 17:14 [IST]
Other articles published on May 14, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+