IPL 2023: ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಅತ್ಯುತ್ತಮ ಸಂಭಾವ್ಯ ಆಡುವ 11ರ ಬಳಗ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 16ನೇ ಋತುವಿನ ಪಂದ್ಯಾವಳಿಗೆ ದಿನಗಣನೆ ಆರಂಭವಾಗಿದ್ದು, ಮೊದಲ ಪಂದ್ಯವು ಮಾರ್ಚ್ 31ರಂದು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅದ್ಧೂರಿ ಚಾಲನೆ ಸಿಗಲಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಏಪ್ರಿಲ್ 2ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎದುರಿಸಲಿದೆ.
ಕಳೆದ ಋತುವಿನಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಉತ್ತಮ ಪ್ರದರ್ಶನ ನೀಡಿತ್ತು. ಅಂಕಪಟ್ಟಿಯಲ್ಲಿ ಅಗ್ರ 4 ತಂಡಗಳಲ್ಲಿ ಒಂದಾಗಿ ಮುಗಿಸಿದರು. ಕ್ವಾಲಿಫೈಯರ್ 2ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲುವ ಮುನ್ನ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ 2023ರ ಐಪಿಎಲ್‌ನಲ್ಲಿ ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡವಾಗಿ ಕಣಕ್ಕಿಳಿಯಲಿದ್ದು, ತನ್ನ ಅತ್ಯುತ್ತಮ ಸಂಭಾವ್ಯ ಆಡುವ 11ರ ಬಳಗ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳಿ.

ಆರ್‌ಸಿಬಿ ತಂಡದ ಸಂಭಾವ್ಯ ಆಡುವ 11ರ ಬಳಗ ಹೇಗಿರಲಿದೆ?
ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಇನ್ನಿಂಗ್ಸ್ ತೆರೆಯುವ ಸಾಧ್ಯತೆ ಹೆಚ್ಚಿದೆ. ಕಳೆದ ವರ್ಷ ಅನುಜ್ ರಾವತ್‌ಗೆ ಕೆಲವು ಪಂದ್ಯಗಳಲ್ಲಿ ಅವಕಾಶ ನೀಡಲಾಗಿತ್ತು. ತಂಡದಲ್ಲಿ ಮತ್ತೊಂದು ಆರಂಭಿಕ ಆಯ್ಕೆಯಾಗಿ ಫಿನ್ ಅಲೆನ್ ಇದ್ದಾರೆ. ಆದರೆ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಅವರಿಗಿಂತ ಮೊದಲು ಫಿನ್ ಅಲೆನ್‌ಗೆ ಆದ್ಯತೆ ನೀಡುವುದು ಅಸಾಧ್ಯ.
ಬದಲಿ ಆಟಗಾರನಾಗಿ ಅವಕಾಶ ಪಡೆದ ರಜತ್ ಪಾಟಿದಾರ್ 2022ರಲ್ಲಿ ಉತ್ತಮವಾಗಿ ಆಡಿದರು. ಹೀಗಾಗಿ ರಜತ್ ಪಾಟಿದಾರ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ 4ನೇ ಸ್ಥಾನದಲ್ಲಿ ಕ್ರೀಸ್‌ಗೆ ಬರಲಿದ್ದಾರೆ. ಇನ್ನು ಮಹಿಪಾಲ್ ಲೊಮ್ರೋರ್ ಅವರು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರುವ ಸಾಧ್ಯತೆ ಇದೆ. ಈ ಸ್ಥಾನಕ್ಕೆ ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್ ಕೂಡ ರೇಸ್‌ನಲ್ಲಿದ್ದಾರೆ.
RCB IPL 2023 Schedule: ಆರ್‌ಸಿಬಿಗೆ ಮುಂಬೈ ಮೊದಲ ಎದುರಾಳಿ; ಇಲ್ಲಿದೆ RCBಯ ಸಂಪೂರ್ಣ ವೇಳಾಪಟ್ಟಿ
ಇನ್ನು ಮಧ್ಯಮ ಕ್ರಮಾಂಕದಲ್ಲಿ ಆರ್‌ಸಿಬಿ ಮತ್ತೊಮ್ಮೆ ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್ ಮತ್ತು ವನಿಂದು ಹಸರಂಗ ಅವರನ್ನು ನೆಚ್ಚಿಕೊಂಡಿದೆ. ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ 2022ರಲ್ಲಿ ಅತ್ಯುತ್ತಮ ಫಿನಿಶರ್ ಪಾತ್ರ ವಹಿಸಿದ್ದರು. ಹಸರಂಗ ಮತ್ತು ಶಹಬಾಜ್ ಅಹ್ಮದ್ ವಿಕೆಟ್ ಉರುಳಿಸುವ ಸ್ಪಿನ್ ಬೌಲರ್ ಆಗಿದ್ದಾರೆ.

ಇದೇ ವೇಳೆ ಬೌಲಿಂಗ್ ವಿಭಾಗದಲ್ಲಿ ಆರ್‌ಸಿಬಿ ತಂಡ ಪವರ್ ಪ್ಲೇನಲ್ಲಿ ಜೋಶ್ ಹೇಝಲ್‌ವುಡ್ ಹಾಗೂ ಮೊಹಮ್ಮದ್ ಸಿರಾಜ್ ಅವರ ಮೇಲೆ ಅವಲಂಬಿತವಾಗಿದ್ದರೆ, ಡೆತ್ ಓವರ್‌ನಲ್ಲಿ ಮಧ್ಯಮ ವೇಗದ ಬೌಲರ್ ಹರ್ಷಲ್ ಪಟೇಲ್ ತಂಡಕ್ಕೆ ಆಧಾರವಾಗಲಿದ್ದಾರೆ.
ಐಪಿಎಲ್ 2023: ಆರ್‌ಸಿಬಿ ತಂಡದ ಸಂಭಾವ್ಯ ಅಡುವ 11ರ ಬಳಗ
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹೇಝಲ್‌ವುಡ್, ಮೊಹಮ್ಮದ್ ಸಿರಾಜ್.
ಆರ್‌ಸಿಬಿ ತಂಡದ ಪೂರ್ಣ ತಂಡ
ಬ್ಯಾಟ್ಸ್‌ಮನ್‌ಗಳು: ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮತ್ತು ವಿಲ್ ಜಾಕ್ಸ್
ವಿಕೆಟ್ ಕೀಪರ್‌ಗಳು: ಅನುಜ್ ರಾವತ್, ದಿನೇಶ್ ಕಾರ್ತಿಕ್, ಫಿನ್ ಅಲೆನ್
ಆಲ್‌ರೌಂಡರ್‌ಗಳು: ಡೇವಿಡ್ ವಿಲ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಮನೋಜ್ ಭಾಂಡಗೆ, ಶಹಬಾಜ್ ಅಹ್ಮದ್, ಸೋನು ಯಾದವ್, ವನಿಂದು ಹಸರಂಗ
ಬೌಲರ್‌ಗಳು: ಜೋಶ್ ಹ್ಯಾಝಲ್‌ವುಡ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ರಾಜನ್ ಕುಮಾರ್, ರೀಸ್ ಟೋಪ್ಲಿ, ಸಿದ್ಧಾರ್ಥ್ ಕೌಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications