Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಆರ್‌ಸಿಬಿ ತಂಡ ಅತ್ಯುತ್ತಮ ಬೌಲಿಂಗ್ ದಾಳಿ ಹೊಂದಿದೆ; ಸಂಜಯ್ ಮಂಜ್ರೇಕರ್

IPL 2023: Royal Challengers Bangalore Team Has The Best Bowling Attack Says Sanjay Manjrekar

2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಆವೃತ್ತಿಗೆ ದಿನಗಣನೆ ಶುರುವಾಗಿದ್ದು, ಇದೇ ಮಾರ್ಚ್ 31ರಂದು ಅದ್ಧೂರಿಯಾಗಿ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೆಣಸಾಡಲಿವೆ.

ಭಾರತ ಹಾಗೂ ವಿಶ್ವದ ಕ್ರಿಕೆಟ್ ಅಭಿಮಾನಿಗಳು ಶ್ರೀಮಂತ ಟಿ20 ಲೀಗ್ ಪ್ರಾರಂಭವಾಗುವುದನ್ನು ಕಾತರದಿಂದ ಕಾಯುತ್ತಿದ್ದಾರೆ. ಏಕೆಂದರೆ, ನಾಲ್ಕು ವರ್ಷಗಳ ಬಳಿಕ ತವರು ಮತ್ತು ಎದುರಾಳಿ ನೆಲದಲ್ಲಿ ಆಡುವ ಸ್ವರೂಪಕ್ಕೆ ಮರಳುತ್ತಿದೆ.

ಇದೇ ವೇಳೆ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಬೌಲಿಂಗ್ ಶಕ್ತಿಯನ್ನು ಮೆಚ್ಚಿದ್ದಾರೆ.

ಈ ಬಾರಿಯ ಐಪಿಎಲ್ ಋತುವಿನಲ್ಲಿ ಆರ್‌ಸಿಬಿ ತಂಡ ಅತ್ಯುತ್ತಮ ಬೌಲಿಂಗ್ ದಾಳಿಯನ್ನು ಹೊಂದಿದೆ ಎಂದು ಸಂಜಯ್ ಮಂಜ್ರೇಕರ್ ಅಂದಾಜಿಸಿದ್ದಾರೆ. ಏಪ್ರಿಲ್ 2ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ತಂಡ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

IPL 2023: Royal Challengers Bangalore Team Has The Best Bowling Attack Says Sanjay Manjrekar

"ಆರ್‌ಸಿಬಿಯ ವೇಗದ ಬೌಲಿಂಗ್‌ನಲ್ಲಿ ಡೆಪ್ತ್ ಇದೆ. ಜೋಶ್ ಹೇಝಲ್‌ವುಡ್ ಫಿಟ್ ಇಲ್ಲದಿದ್ದರೂ ರೀಸ್ ಟೋಪ್ಲೆ ಇದ್ದು, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ಕೂಡಾ ಇದ್ದಾರೆ. ಸ್ಪಿನ್‌ನಲ್ಲಿ ವನಿಂದು ಹಸರಂಗ ಬೌಲಿಂಗ್ ಪರಿಪೂರ್ಣವಾಗಿದೆ ಮತ್ತು ಮ್ಯಾಕ್ಸ್‌ವೆಲ್ ಕೂಡ ಬೌಲಿಂಗ್ ಮಾಡಬಹುದು".

"ಈ ಐಪಿಎಲ್‌ನಲ್ಲಿ ನನ್ನ ಪ್ರಕಾರ, ಅತ್ಯುತ್ತಮ ಬೌಲಿಂಗ್ ದಾಳಿ ಆರ್‌ಸಿಬಿ ತಂಡದಲ್ಲಿದೆ ಮತ್ತು ಅದು ತಂಡದ ಸಂಯೋಜನೆಯನ್ನು ಉತ್ತಮಪಡಿಸಿದೆ," ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಟಪಟ್ಟರು.

2023ರ ಐಪಿಎಲ್‌ಗಾಗಿ ಆರ್‌ಸಿಬಿ ತಂಡದ ಚಾಣಾಕ್ಷ ನಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ಫ್ರಾಂಚೈಸಿಗಳಲ್ಲಿ ಒಂದಾಗಿದೆ. ಪಂದ್ಯಾವಳಿಯ ಆರಂಭದಿಂದಲೂ ಆರ್‌ಸಿಬಿ ಒಂದೇ ಒಂದು ಪ್ರಶಸ್ತಿ ಗೆಲ್ಲಲು ವಿಫಲವಾಗಿದೆ. ಆದರೆ, ಮೂರು ಬಾರಿ ಫೈನಲ್ ತಲುಪಿದೆ.

ಐಪಿಎಲ್ 2023: ಈ ಬಾರಿ ಆರ್‌ಸಿಬಿ ಸ್ಥಾನದ ಬಗ್ಗೆ ಭವಿಷ್ಯ ನುಡಿದ ಆಕಾಶ್ ಚೋಪ್ರಾ

ಇನ್ನು ಕಳೆದ ವರ್ಷ ಅತ್ಯುತ್ತಮ ಪ್ರದರ್ಶನ ನೀಡಿದ್ದರು ಮತ್ತು 10 ತಂಡಗಳ ಪಂದ್ಯಾವಳಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರು. ಎಲಿಮಿನೇಟರ್ 2 ಸುತ್ತಿನಲ್ಲಿ ಆರ್‌ಸಿಬಿ ತಂಡ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ವಿರುದ್ಧ ಸೋತು ಹೊರಬಿತ್ತು.

IPL 2023: Royal Challengers Bangalore Team Has The Best Bowling Attack Says Sanjay Manjrekar

ಆರ್‌ಸಿಬಿ 2023ರ ಐಪಿಎಲ್‌ಗೆ ಆಲ್‌ರೌಂಡರ್ ವಿಲ್ ಜಾಕ್ಸ್‌ನಂತಹ ಕೆಲವು ಅದ್ಭುತ ಆಟಗಾರರನ್ನು ಆಯ್ಕೆ ಮಾಡಿಕೊಂಡಿತ್ತು. ಇಂಗ್ಲೆಂಡ್‌ನ ವಿಲ್ ಜಾಕ್ಸ್ ಅವರನ್ನು ಆರ್‌ಸಿಬಿ 3.2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ, ಗಾಯದ ಕಾರಣದಿಂದಾಗಿ ಸಂಪೂರ್ಣ ಐಪಿಎಲ್ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನವನ್ನು ಕಿವೀಸ್ ಆಲ್‌ರೌಂಡರ್ ಮೈಕೆಲ್ ಬ್ರೇಸ್‌ವೆಲ್ ತುಂಬಲಿದ್ದಾರೆ.

ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡವು ಕೆಲವು ದೇಶೀಯ ಪ್ರತಿಭೆಗಳನ್ನು ಸಹ ಹೊಂದಿದೆ. ರಾಜನ್ ಕುಮಾರ್, ಅವಿನಾಶ್ ಸಿಂಗ್ ಮತ್ತು ಸೋನು ಯಾದವ್ ಅವರು ತಂಡದ ಬೌಲಿಂಗ್ ವಿಭಾಗವನ್ನು ಬಲಪಡಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಈ ವರ್ಷದ ಲೀಗ್‌ನಲ್ಲಿ ತಮ್ಮ ಚೊಚ್ಚಲ ಪ್ರಶಸ್ತಿಯನ್ನು ಗೆಲ್ಲಲು ಎದುರು ನೋಡುತ್ತಿದ್ದಾರೆ.

ಐಪಿಎಲ್ 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪೂರ್ಣ ತಂಡ
ಫಾಫ್ ಡು ಪ್ಲೆಸಿಸ್ (ನಾಯಕ), ಫಿನ್ ಅಲೆನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮೈಕಲ್ ಬ್ರೆಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ಸೋನು ಯಾದವ್, ಮನೋಜ್ ಭಾಂಡಗೆ, ಆಕಾಶ್ ದೀಪ್, ಜೋಶ್ ಹ್ಯಾಝಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಅವಿನಾಶ್ ಸಿಂಗ್, ರಾಜನ್ ಕುಮಾರ್, ರೀಸ್ ಟೋಪ್ಲೆ, ಹಿಮಾಂಶು ಶರ್ಮಾ.

Story first published: Sunday, March 26, 2023, 6:55 [IST]
Other articles published on Mar 26, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+