RCB vs DC: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಮೇ 6 ) ಲೀಗ್ ಹಂತದ 49 ಹಾಗೂ 50ನೇ ಪಂದ್ಯಗಳು ಜರುಗುತ್ತಿವೆ. ಮಧ್ಯಾಹ್ನ ಆರಂಭಗೊಂಡಿರುವ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ರಾತ್ರಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾತ್ರಿ 7.30 ಕ್ಕೆ ಆರಂಭಗೊಳ್ಳಲಿದೆ.
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳು ಮುಖಾಮುಖಿಯಾಗುತ್ತಿರುವ ಎರಡನೇ ಪಂದ್ಯ ಇದಾಗಿದ್ದು, ಮೊದಲಿಗೆ ಲೀಗ್ ಹಂತದ 20ನೇ ಪಂದ್ಯದಲ್ಲಿ ಸೆಣಸಾಡಿದ್ದವು.
ಟೂರ್ನಿಯಲ್ಲಿ ಇಲ್ಲಿಯವರೆಗೂ 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಮಾತ್ರ ಗೆದ್ದು 6 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.
ಹೀಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀನಾಯ ಪರಿಸ್ಥಿತಿಯಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಪಂದ್ಯದಲ್ಲಿ ಸೋತರೆ ಪ್ಲೇ ಆಫ್ ಹಾದಿ ಕಠಿಣಗೊಳ್ಳಲಿದ್ದು, ಈ ಪಂದ್ಯವನ್ನು ಗೆಲ್ಲಲೇಬೇಕೆಂಬ ಗುರಿಯನ್ನು ಹೊಂದಿದೆ.
ಅತ್ತ ಈಗಾಗಲೇ ಪ್ಲೇ ಆಫ್ ರೇಸಿನಿಂದ ಬಲು ದೂರ ಉಳಿದಿರುವ ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯದಲ್ಲಿ ಸೋತರೆ ಪ್ಲೇ ಆಫ್ ಅವಕಾಶವನ್ನು ಸಂಪೂರ್ಣವಾಗಿ ಕಳೆದುಕೊಳ್ಳುವ ಸಾಧ್ಯತೆ ಇದ್ದು, ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಹೀಗೆ ಎರಡೂ ತಂಡಗಳಿಗೂ ಮುಖ್ಯವಾಗಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಜೋರಾಗಿದ್ದು, ಮತ್ತೊಂದೆಡೆ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಊಹಿಸಿ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ.
ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡಂತೆ ಆಟಗಾರರನ್ನು ಆರಿಸಿದರೆ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಫ್ಯಾಂಟಸಿ ಗೇಂಗಳಲ್ಲಿ ಉತ್ತಮ ಫಲಿತಾಂಶ ಪಡೆಯುವ ಸಾಧ್ಯತೆ ಇದೆ.
ಡ್ರೀಮ್ ಟೀಮ್ 1:
ವಿಕೆಟ್ ಕೀಪರ್ - ಫಿಲಿಪ್ ಸಾಲ್ಟ್
ಬ್ಯಾಟ್ಸ್‌ಮನ್‌ಗಳು - ಡೇವಿಡ್ ವಾರ್ನರ್, ವಿರಾಟ್ ಕೊಹ್ಲಿ (ಉಪನಾಯಕ), ಫಾಫ್ ಡು ಪ್ಲೆಸಿಸ್ (ನಾಯಕ)
ಆಲ್ ರೌಂಡರ್‌ಗಳು - ಗ್ಲೆನ್ ಮ್ಯಾಕ್ಸ್‌ವೆಲ್, ಅಕ್ಷರ್ ಪಟೇಲ್, ವನಿಂದು ಹಸರಂಗ, ಮಿಚೆಲ್ ಮಾರ್ಷ್
ಬೌಲರ್‌ಗಳು - ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಅನ್ರಿಚ್ ನಾರ್ಕಿಯಾ
ಡ್ರೀಮ್ ಟೀಮ್ 2:
ಬ್ಯಾಟ್ಸ್‌ಮನ್‌ಗಳು - ಡೇವಿಡ್ ವಾರ್ನರ್, ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಮನೀಶ್ ಪಾಂಡೆ
ಆಲ್ ರೌಂಡರ್‌ಗಳು - ಗ್ಲೆನ್ ಮ್ಯಾಕ್ಸ್‌ವೆಲ್ (ನಾಯಕ), ಅಕ್ಷರ್ ಪಟೇಲ್ (ವಿಕೆಟ್ ಕೀಪರ್), ವನಿಂದು ಹಸರಂಗ ಬೌಲರ್‌ಗಳು - ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಅನ್ರಿಚ್ ನಾರ್ಕಿಯಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications