Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs DC IPL 2023: ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ; ಕನ್ನಡಿಗನಿಗೆ ಸ್ಥಾನ

ಶನಿವಾರ, ಏಪ್ರಿಲ್ 15ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ 2023ರ ಐಪಿಎಲ್‌ನ 20ನೇ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಡೇವಿಡ್ ವಾರ್ನರ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

IPL 2023: Royal Challengers Bangalore vs Delhi Capitals Toss Report, Playing 11 And Live Score

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಭರ್ಜರಿಯಾಗಿ ಶುಭಾರಂಭ ಮಾಡಿತ್ತು. ನಂತರ ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ನಂತರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪುಟಿದೇಳುವ ಗುರಿ ಹೊಂದಿದೆ.

ಮತ್ತೊಂದೆಡೆ, ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಈ ಋತುವಿನಲ್ಲಿ ಈವರೆಗೆ ಒಂದೇ ಒಂದು ಪಂದ್ಯ ಗೆಲ್ಲಲು ವಿಫಲವಾಗಿದೆ. ಡೇವಿಡ್ ವಾರ್ನರ್ ಮತ್ತು ಅಕ್ಷರ್ ಪಟೇಲ್ ಹೊರತುಪಡಿಸಿ ಉಳಿದವರಿಂದ ಉತ್ತಮ ಪ್ರದರ್ಶನ ಹೊರಬಂದಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್‌ಸಿಬಿ ವಿರುದ್ಧ ಗೆದ್ದು ತಮ್ಮ ಪಾಯಿಂಟ್ ಪಟ್ಟಿಯಲ್ಲಿ ಖಾತೆ ತೆರೆಯಲು ಎದುರು ನೋಡುತ್ತಿದೆ.

ತಮ್ಮ ಮದುವೆಯ ಕಾರಣದಿಂದ ಕಳೆದೆರಡು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ಸ್ಟಾರ್ ಬ್ಯಾಟರ್ ಮಿಚೆಲ್ ಮಾರ್ಷ್ ಅವರು ರೋವ್ಮನ್ ಪೊವೆಲ್ ಬದಲಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನು ಆರ್‌ಸಿಬಿ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಡೇವಿಡ್ ವಿಲ್ಲಿ ಬದಲಿಗೆ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ ಆಡಲಿದ್ದರೆ, ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಕೂಡಾ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ಮಾಹಿತಿ
ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಅಲ್ಲದೇ, Jio Cinema ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.

ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ 11ರ ಬಳಗ
ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ವಿಜಯ್‌ಕುಮಾರ್ ವೈಶಾಕ್.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಷ್, ಯಶ್ ಧುಲ್, ಮನೀಶ್ ಪಾಂಡೆ, ಅಕ್ಷರ್ ಪಟೇಲ್, ಲಲಿತ್ ಯಾದವ್, ಅಮಾನ್ ಹಕೀಮ್ ಖಾನ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಮುಸ್ತಾಫಿಜುರ್ ರೆಹಮಾನ್.

Story first published: Saturday, April 15, 2023, 15:03 [IST]
Other articles published on Apr 15, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+