Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs RCB: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Royal Challengers Bangalore vs Gujarat Titans dream team prediction

ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಆರಂಭಗೊಂಡ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಸನಿಹಕ್ಕೆ ಬಂದಿದೆ.

ಇಂದು ( ಮೇ 21 ) ನಡೆಯಲಿರುವ ಎರಡು ಪಂದ್ಯಗಳ ಮೂಲಕ ಲೀಗ್ ಹಂತ ಅಂತ್ಯಗೊಳ್ಳಲಿದೆ. ಹೌದು, ಇಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಟೂರ್ನಿಯ ಲೀಗ್ ಹಂತ ಮುಕ್ತಾಯಗೊಳ್ಳಲಿದ್ದು, ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಬಳಿಕ ಪ್ಲೇಆಫ್ ಪ್ರವೇಶಿಸಲಿರುವ ತಂಡ ಯಾವುದು ಎಂಬ ಉತ್ತರ ಸಹ ಸಿಗಲಿದೆ.

ಈ ಪಂದ್ಯಗಳಲ್ಲಿ ಗೆಲ್ಲಲಿರುವ ತಂಡಗಳಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶಗಳು ಹೆಚ್ಚಿವೆ.‌ 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿಂತ ಹೆಚ್ಚಿನ ನೆಟ್ ರನ್ ರೇಟ್ ಪಡೆದರೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ.

ಸದ್ಯ 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಕಡ್ಡಾಯವಾಗಿ ಗೆಲ್ಲಲೇಬೇಕಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಗೆದ್ದು ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಹೆಚ್ಚು ನೆಟ್ ರನ್ ರೇಟ್ ಪಡೆದರೆ ಸುಲಭವಾಗಿ ಪ್ಲೇಆಫ್ ತಲುಪಲಿದೆ.

ಹೀಗೆ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲಲೇಬೇಕಿದ್ದು, ಪಂದ್ಯಕ್ಕೆ ಮಳೆ ಅಡ್ಡಿ ಮಾಡುವ ಸಾಧ್ಯತೆಗಳೂ ಇವೆ. ಈ ನಿರ್ಣಾಯಕ ಪಂದ್ಯದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಯಾವ ತಂಡ ಗೆಲ್ಲಲಿದೆ ಎಂಬ ಊಹೆಗಳು ನಡೆಯುತ್ತಿವೆ‌. ಮತ್ತೊಂದೆಡೆ ಈ ಪಂದ್ಯಕ್ಕಾಗಿ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಡ್ರೀಮ್ ಟೀಮ್ ರಚಿಸುತ್ತಿದ್ದಾರೆ.
.
ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಉತ್ತಮ ಅಂಕಗಳನ್ನು ಗಳಿಸಬಹುದಾಗಿದೆ.

ಡ್ರೀಮ್ ಟೀಮ್ 1:

ವಿಕೆಟ್ ಕೀಪರ್ - ವೃದ್ಧಿಮಾನ್ ಸಹಾ

ಬ್ಯಾಟ್ಸ್‌ಮನ್‌ಗಳು - ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಸಾಯಿ ಸುದರ್ಶನ್

ಆಲ್ ರೌಂಡರ್‌ಗಳು - ಹಾರ್ದಿಕ್ ಪಾಂಡ್ಯ (ಉಪನಾಯಕ), ಮೈಕಲ್ ಬ್ರೇಸ್‌ವೆಲ್, ಗ್ಲೆನ್ ಮ್ಯಾಕ್ಸ್‌ವೆಲ್

ಬೌಲರ್‌ಗಳು - ಮೊಹಮ್ಮದ್ ಸಿರಾಜ್, ರಶೀದ್ ಖಾನ್, ಮೊಹಮ್ಮದ್ ಶಮಿ

ಡ್ರೀಮ್ ಟೀಮ್ 2:

ವಿಕೆಟ್ ಕೀಪರ್ - ವೃದ್ಧಿಮಾನ್ ಸಹಾ

ಬ್ಯಾಟ್ಸ್‌ಮನ್‌ಗಳು - ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಸಾಯಿ ಸುದರ್ಶನ್

ಆಲ್ ರೌಂಡರ್‌ಗಳು - ಹಾರ್ದಿಕ್ ಪಾಂಡ್ಯ (ಉಪನಾಯಕ) ಮೈಕಲ್ ಬ್ರೇಸ್‌ವೆಲ್, ಗ್ಲೆನ್ ಮ್ಯಾಕ್ಸ್‌ವೆಲ್

ಬೌಲರ್‌ಗಳು - ಮೊಹಮ್ಮದ್ ಸಿರಾಜ್, ರಶೀದ್ ಖಾನ್, ಮೊಹಮ್ಮದ್ ಶಮಿ

ಸಂಭಾವ್ಯ ಆಡುವ ಬಳಗಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಅನುಜ್ ರಾವತ್ ( ವಿಕೆಟ್ ಕೀಪರ್ ), ಮೈಕಲ್ ಬ್ರೇಸ್‌ವೆಲ್, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಶಹಬಾಜ್ ಅಹ್ಮದ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್

ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ದಾಸುನ್ ಶನಕ, ರಾಹುಲ್ ತೆವಾಟಿಯಾ, ಮೋಹಿತ್ ಶರ್ಮಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಯಶ್ ದಯಾಳ್

Story first published: Sunday, May 21, 2023, 18:38 [IST]
Other articles published on May 21, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+