Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs RCB: ಕೃಪೆ ತೋರಿದ ವರುಣ, ಪಂದ್ಯ ಆರಂಭ; ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023: Royal Challengers Bangalore vs Gujarat Titans toss report, playing 11 and live score

ಇಂದು ( ಮೇ 21 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯ ಆಯೋಜನೆಗೊಂಡಿದೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಬೆಂಗಳೂರು ನಗರದಲ್ಲಿ ಮಧ್ಯಾಹ್ನದಿಂದ ಭಾರೀ ಮಳೆಯಾದ ಕಾರಣ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಒದ್ದೆಯಾಗಿದ್ದು, ಪಂದ್ಯದ ಟಾಸ್ ವಿಳಂಬವಾಗಿದೆ.

ಮಧ್ಯಾಹ್ನದಿಂದ ಸುರಿದಿದ್ದ ವರುಣ ಮರೆಯಾಗಿದ್ದು, ಇದೀಗ 50 ನಿಮಿಷಗಳ ತಡವಾಗಿ ಟಾಸ್ ನಡೆದಿದೆ. ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್ ಆಯ್ದುಕೊಂಡಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತನ್ ಆಡುವ ಬಳಗದಲ್ಲಿ ಯಾವುದೆ ಬದಲಾವಣೆ ಮಾಡಿಕೊಳ್ಳದೇ ಕಣಕ್ಕಿಳಿದಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗದಲ್ಲಿ ಕರ್ಣ್ ಶರ್ಮಾ ಬದಲಾಗಿ ಹಿಮಾನ್ಶು ಶರ್ಮಾ ಕಣಕ್ಕಿಳಿದಿದ್ದಾರೆ

ಆಡುವ ಬಳಗಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮೈಕಲ್ ಬ್ರೇಸ್‌ವೆಲ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಅನುಜ್ ರಾವತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ವಿಜಯ್‌ಕುಮಾರ್ ವೈಶಾಕ್

ಗುಜರಾತ್ ಟೈಟನ್ಸ್: ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭಮನ್ ಗಿಲ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ನಾಯಕ), ದಸುನ್ ಶನಕ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಯಶ್ ದಯಾಳ್

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟನ್ಸ್ ಲೈವ್ ಸ್ಕೋರ್:

1
57125

ಇನ್ನು ಅತ್ತ ಪ್ಲೇಆಫ್ ರೇಸ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸ್ಪರ್ಧಿಯಾಗಿದ್ದ ಮುಂಬೈ ಇಂಡಿಯನ್ಸ್ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಪ್ಲೇಆಫ್‌ಗೆ ಬೇಕಾದ 16 ಅಂಕಗಳನ್ನು ಗಳಿಸಿದ್ದು, ಈಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ತಲುಪಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿದೆ.

Story first published: Sunday, May 21, 2023, 19:56 [IST]
Other articles published on May 21, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+