RCB vs KKR IPL 2023: ಆರ್‌ಸಿಬಿ vs ಕೆಕೆಆರ್ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್
ಗುರುವಾರ, ಏಪ್ರಿಲ್ 6ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ 2023ರ ಐಪಿಎಲ್‌ನ 9ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಗೆಲುವಿಗಾಗಿ ಸೆಣಸಾಟ ನಡೆಸುತ್ತಿವೆ.
ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಆಯ್ದುಕೊಂಡರು. ಹೀಗಾಗಿ ನಿತೀಶ್ ರಾಣಾ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಎರಡೂ ತಂಡಗಳು ತಲಾ ಒಂದೊಂದು ಬದಲಾವಣೆ ಮಾಡಿದ್ದು, ಆರ್‌ಸಿಬಿ ತಂಡದಲ್ಲಿ ಗಾಯಾಳು ರೀಸ್ ಟೋಪ್ಲೆ ಬದಲಾಗಿ ಡೇವಿಡ್ ವಿಲ್ಲಿ ಸ್ಥಾನ ಪಡೆದಿದ್ದರೆ, ಕೆಕೆಆರ್ ತಂಡದಲ್ಲಿ ಅನುಕುಲ್ ರಾಯ್ ಬದಲಿಯಾಗಿ ಸುಯೇಶ್ ಶರ್ಮಾ ತಮ್ಮ ಚೊಚ್ಚಲ ಐಪಿಎಲ್ ಪಂದ್ಯವಾಡಲು ಅವಕಾಶ ಪಡೆದಿದ್ದಾರೆ.
ಆರ್‌ಸಿಬಿ ತಂಡ ತನ್ನ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯದೊಂದಿಗೆ ಇಂದಿನ ಪಂದ್ಯವನ್ನು ಆಡುತ್ತಿದ್ದು, ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಲು ಈ ಪಂದ್ಯದಲ್ಲೂ ಎದುರು ನೋಡುತ್ತಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡಿಎಲ್ಎಸ್ ವಿಧಾನದಡಿ 7 ರನ್‌ಗಳಿಂದ ಸೋಲು ಕಂಡಿದೆ. ಆರ್‌ಸಿಬಿ ವಿರುದ್ಧ ಗೆದ್ದು 2023ರ ಐಪಿಎಲ್ ಪಂದ್ಯಾವಳಿಯಲ್ಲಿ ಗೆಲುವಿನ ಖಾತೆ ತೆರೆಯಲು ಪ್ರಯತ್ನಿಸಲಿದೆ.
ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ತಂಡದ ವಿರಾಟ್ ಕೊಹ್ಲಿ ಅಜೇಯ 82 ರನ್ ಬಾರಿಸಿದ್ದರೆ, ನಾಯಕ ಫಾಫ್ ಡು ಪ್ಲೆಸಿಸ್ 73 ರನ್ ಗಳಿಸಿದ್ದರು. ಇಂದಿನ ಪಂದ್ಯದಲ್ಲಿ ಅದೇ ಫಾರ್ಮ್ ಮುಂದುವರೆಸಲಿದ್ದಾರೆಯೇ ಎಂದು ಕಾದು ನೋಡಬೇಕಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಮತ್ತು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.
ಆರ್‌ಸಿಬಿ vs ಕೆಕೆಆರ್ ತಂಡಗಳು ಸಂಭಾವ್ಯ ಆಡುವ 11ರ ಬಳಗ
ಕೆಕೆಆರ್ ತಂಡ: ಮನ್‌ದೀಪ್ ಸಿಂಗ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸುಯೇಶ್ ಶರ್ಮಾ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಟಿಮ್ ಸೌಥಿ.
ಆರ್‌ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications