Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs LSG: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Royal Challengers Bangalore vs Lucknow Super Giants dream team prediction

ಸದ್ಯ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಜರುಗುತ್ತಿದ್ದು ಇಂದು ( ಮೇ 1 ) ಟೂರ್ನಿಯ 43ನೇ ಲೀಗ್ ಪಂದ್ಯ ಜರುಗಲಿದೆ. ಈ ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಎರಡನೇ ಪಂದ್ಯವಿದಾಗಿದ್ದು, ಈಗಾಗಲೇ ಮುಖಾಮುಖಿಯಾಗಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ರೋಚಕ ಗೆಲುವನ್ನು ಕಂಡಿತ್ತು.

ತವರು ನೆಲದಲ್ಲಿ ಸೋಲನ್ನು ಅನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಲ್ಲಿ ಇಲ್ಲಿಯವರೆಗೂ 8 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು, ಉಳಿದ 4 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದರೆ, 8 ಪಂದ್ಯಗಳನ್ನಾಡಿ 5 ಪಂದ್ಯಗಳನ್ನು ಗೆದ್ದು ಉಳಿದ 3 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಹೀಗೆ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿಂತ ಉತ್ತಮ ಹಂತದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಈ ಪಂದ್ಯವನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಆಕ್ರಮಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಈ ಪಂದ್ಯ ಕಾತರತೆ ಹುಟ್ಟುಹಾಕಿದ್ದು, ಯಾವ ತಂಡ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಶುರುವಾಗಿದೆ.

ಜತೆಗೆ ಈ ಪಂದ್ಯಕ್ಕಾಗಿ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ತಮ್ಮ ತಮ್ಮ ಡ್ರೀಮ್ ಟೀಮ್‌ಗಳನ್ನು ರಚಿಸುತ್ತಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡಂತೆ ಆಟಗಾರರನ್ನು ಆರಿಸಿ ತಂಡಗಳನ್ನು ರಚಿಸಿದರೆ ಒಳ್ಳೆಯ ಅಂಕಗಳನ್ನು ರಚಿಸಬಹುದು ಎನ್ನಬಹುದು.

ಡ್ರೀಮ್ ಟೀಮ್ 1: ಕೀಪರ್ - ನಿಕೋಲಸ್ ಪೂರನ್

ಬ್ಯಾಟ್ಸ್‌ಮನ್‌ಗಳು - ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ಕೆ ಎಲ್ ರಾಹುಲ್

ಆಲ್ ರೌಂಡರ್‌ಗಳು - ಗ್ಲೆನ್ ಮ್ಯಾಕ್ಸ್‌ವೆಲ್ (ಉಪನಾಯಕ), ಮಾರ್ಕಸ್ ಸ್ಟೊಯಿನಿಸ್, ಕೈಲ್ ಮೇಯರ್ಸ್, ವನಿಂದು ಹಸರಂಗ

ಬೌಲರ್‌ಗಳು - ಮೊಹಮ್ಮದ್ ಸಿರಾಜ್, ರವಿ ಬಿಷ್ಣೋಯ್, ನವೀನ್ ಉಲ್ ಹಕ್

ಡ್ರೀಮ್ ಟೀಮ್ 2: ಕೀಪರ್ - ನಿಕೋಲಸ್ ಪೂರನ್

ಬ್ಯಾಟ್ಸ್‌ಮನ್‌ಗಳು - ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಕೆ ಎಲ್ ರಾಹುಲ್, ದೀಪಕ್ ಹೂಡಾ

ಆಲ್ ರೌಂಡರ್‌ಗಳು - ಗ್ಲೆನ್ ಮ್ಯಾಕ್ಸ್‌ವೆಲ್ (ಉಪನಾಯಕ), ಮಾರ್ಕಸ್ ಸ್ಟೊಯಿನಿಸ್, ಕೈಲ್ ಮೇಯರ್ಸ್ (ನಾಯಕ), ವನಿಂದು ಹಸರಂಗ

ಬೌಲರ್‌ಗಳು- ಮೊಹಮ್ಮದ್ ಸಿರಾಜ್, ರವಿ ಬಿಷ್ಣೋಯ್

ಸಂಭಾವ್ಯ ಆಡುವ ಬಳಗಗಳು:

ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಆಡುವ ಬಳಗ: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್(ವಿಕೆಟ್ ಕೀಪರ್), ಆಯುಷ್ ಬಡೋನಿ, ನವೀನ್-ಉಲ್-ಹಕ್, ರವಿ ಬಿಷ್ಣೋಯ್, ಅವೇಶ್ ಖಾನ್, ಯಶ್ ಠಾಕೂರ್, ಅಮಿತ್ ಮಿಶ್ರಾ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಆಡುವ ಬಳಗ: ವಿರಾಟ್ ಕೊಹ್ಲಿ ( ನಾಯಕ‌), ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ವೈಶಾಕ್ ವಿಜಯ್ ಕುಮಾರ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್

Story first published: Monday, May 1, 2023, 14:32 [IST]
Other articles published on May 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+