Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs RCB: ಸೇಡಿನ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟಿಂಗ್ ಆಯ್ಕೆ; ಪ್ಲೇಯಿಂಗ್ 11 & ಲೈವ್ ಸ್ಕೋರ್ ಇಲ್ಲಿದೆ

IPL 2023: Royal Challengers Bangalore vs Lucknow Super Giants toss report, playing 11 & live score

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 43ನೇ ಪಂದ್ಯ ಇಂದು ( ಮೇ 1 ) ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶುರುವಾಗಿದೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಮಾಡಿಕೊಂಡಿದ್ದಾರೆ.

ಟಾಸ್ ಗೆದ್ದ ಬಳಿಕ ಮಾತನಾಡಿದ ಫಾಫ್ ಡು ಪ್ಲೆಸಿಸ್ ಜೋಶ್ ಹೇಜಲ್‌ವುಡ್ ತಂಡಕ್ಕೆ ಆಗಮಿಸಿದ್ದು, ಶಹಬಾಜ್ ಅಹ್ಮದ್ ಬದಲಾಗಿ ಅನುಜ್ ರಾವತ್ ತಂಡ ಸೇರಿದ್ದಾರೆ ಎಂದು ತಿಳಿಸಿದ್ದಾರೆ. ಅತ್ತ ಅವೇಶ್ ಖಾನ್ ತಂಡದಿಂದ ಹೊರಗುಳಿದಿದ್ದು, ಕೃಷ್ಣಪ್ಪ ಗೌತಮ್ ತಂಡಕ್ಕೆ ಆಗಮಿಸಿದ್ದಾರೆ.

ಆಡುವ ಬಳಗಗಳು ಹೀಗಿವೆ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕೆಎಲ್ ರಾಹುಲ್(ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್(ವಿಕೆಟ್ ಕೀಪರ್), ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಅಮಿತ್ ಮಿಶ್ರಾ, ಯಶ್ ಠಾಕೂರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದ ಲೈವ್ ಸ್ಕೋರ್ ಅಪ್‌ಡೇಟ್ ಕೆಳಕಂಡಂತಿದೆ..

1
57098

ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಎರಡನೇ ಪಂದ್ಯವಿದಾಗಿದ್ದು, ಈಗಾಗಲೇ ಮುಖಾಮುಖಿಯಾಗಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ರೋಚಕ ಗೆಲುವನ್ನು ಕಂಡಿತ್ತು.

ತವರು ನೆಲದಲ್ಲಿ ಸೋಲನ್ನು ಅನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಲ್ಲಿ ಇಲ್ಲಿಯವರೆಗೂ 8 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು, ಉಳಿದ 4 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದರೆ, 8 ಪಂದ್ಯಗಳನ್ನಾಡಿ 5 ಪಂದ್ಯಗಳನ್ನು ಗೆದ್ದು ಉಳಿದ 3 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಹೀಗೆ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿಂತ ಉತ್ತಮ ಹಂತದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಈ ಪಂದ್ಯವನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಆಕ್ರಮಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಈ ಪಂದ್ಯ ಕಾತರತೆ ಹುಟ್ಟುಹಾಕಿದ್ದು, ಯಾವ ತಂಡ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಶುರುವಾಗಿದೆ.

ಸ್ಕ್ವಾಡ್ಸ್:

ಲಕ್ನೋ ಸೂಪರ್ ಜೈಂಟ್ಸ್ ತಂಡ: ಕೆಎಲ್ ರಾಹುಲ್(ನಾಯಕ),ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್(ವಿಕೆಟ್ ಕೀಪರ್), ಆಯುಷ್ ಬಡೋನಿ, ನವೀನ್-ಉಲ್-ಹಕ್, ರವಿ ಬಿಷ್ಣೋಯ್, ಅವೇಶ್ ಖಾನ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಜಯದೇವ್ ಉನದ್ಕತ್, ಮನನ್ ವೋಹ್ರಾ, ಮಾರ್ಕ್ ವುಡ್, ಕ್ವಿಂಟನ್ ಡಿ ಕಾಕ್, ಕೃಷ್ಣಪ್ಪ ಗೌತಮ್, ಸ್ವಪ್ನಿಲ್ ಸಿಂಗ್, ಪ್ರೇರಕ್ ಮಂಕಡ್, ಡೇನಿಯಲ್ ಸಾಮ್ಸ್, ರೊಮಾರಿಯೋ ಶೆಫರ್ಡ್, ಅರ್ಪಿತ್ ಗುಲೇರಿಯಾ, ಯುಧ್ವೀರ್ ಸಿಂಗ್ ಚರಕ್, ಕರಣ್ ಶರ್ಮಾ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ(ನಾಯಕ), ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮೊರೊರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಕೇದಾರ್ ಜಾಧವ್, ವಿಜಯ್‌ಕುಮಾರ್ ವೈಶಾಕ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಆಕಾಶ್ ಡು ಪ್ಲೆಸಿಸ್, , ಕರ್ಣ್ ಶರ್ಮಾ, ಫಿನ್ ಅಲೆನ್, ಅನುಜ್ ರಾವತ್, ಮೈಕೆಲ್ ಬ್ರೇಸ್‌ವೆಲ್, ಸಿದ್ದಾರ್ಥ್ ಕೌಲ್, ಸೋನು ಯಾದವ್, ಮನೋಜ್ ಭಾಂಡಗೆ, ವೇಯ್ನ್ ಪಾರ್ನೆಲ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ

Story first published: Monday, May 1, 2023, 19:05 [IST]
Other articles published on May 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+