Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs PBKS: ಆರ್‌ಸಿಬಿ vs ಪಂಜಾಬ್ ಪಂದ್ಯದಲ್ಲಿ ಗೆಲ್ಲಲು ನಿಮ್ಮ ಡ್ರೀಮ್‌ ಟೀಮ್‌ನಲ್ಲಿ ಈ ಆಟಗಾರರು ಇರಲಿ!

IPL 2023: Royal Challengers Bangalore vs Punjab Kings dream team prediction

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಏಪ್ರಿಲ್ 20 ) ಎರಡು ಪಂದ್ಯಗಳು ಜರುಗಲಿವೆ. ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಸಂಜೆ ನಡೆಯಲಿರುವ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಮಧ್ಯಾಹ್ನ 3.30 ಕ್ಕೆ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಷಿಯೇಷನ್ ಐಎಸ್ ಬಿಂದ್ರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಟೂರ್ನಿಯ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಈ ಎರಡೂ ತಂಡಗಳೂ ಸಹ ತಲಾ 5 ಪಂದ್ಯಗಳನ್ನು ಆಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ಪಂದ್ಯಗಳಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಸೋತು 4 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ತಂಡ 3 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಇಲ್ಲಿಯವರೆಗೂ ಒಟ್ಟು 30 ಬಾರಿ ಮುಖಾಮುಖಿಯಾಗಿದ್ದು, ಈ ಪಂದ್ಯಗಳ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ತಂಡ 17 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಈ ಮೂಲಕ ಒಟ್ಟಾರೆ ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ಬಲಿಷ್ಠವಾಗಿದ್ದು, ರಾಯಲ್ ಚಾಲೆಂಜರ್ಸ್ ಹಿನ್ನಡೆ ಅನುಭವಿಸಿದೆ.

ಪಂಜಾಬ್ ಕಿಂಗ್ಸ್ ತಂಡ ಟೂರ್ನಿಯಲ್ಲಿನ ತನ್ನ ಕೊನೆಯ ಪಂದ್ಯವನ್ನು ಗೆದ್ದಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಕೊನೆಯ ಪಂದ್ಯವನ್ನು ಸೋತಿದೆ. ಇನ್ನು ಇಂದಿನ ಮುಖಾಮುಖಿಯಲ್ಲಿ ಯಾವ ತಂಡಗಳು ಗೆಲುವು ಕಾಣಲಿದೆ ಎಂಬ ಚರ್ಚೆಗಳು ಕ್ರಿಕೆಟ್‌ ಪ್ರೇಮಿಗಳಲ್ಲಿ ಜೋರಾಗಿದ್ದು, ಇದರ ನಡುವೆ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಯಾವ ಆಟಗಾರರನ್ನು ಫ್ಯಾಂಟಸಿ ತಂಡಗಳಿಗೆ ಆರಿಸಿಕೊಳ್ಳಬೇಕು ಎಂಬ ಚರ್ಚೆಯಲ್ಲಿದ್ದಾರೆ.

ಹೀಗೆ ಫ್ಯಾಂಟಸಿ ಗೇಮ್‌ಗಾಗಿ ಡ್ರೀಮ್ ಟೀಮ್ ರಚಿಸುತ್ತಿರುವ ಕ್ರಿಕೆಟ್ ಪ್ರೇಮಿಗಳು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಉತ್ತಮ ಫಲಿತಾಂಶ ಬರಲಿದೆ ಎನ್ನಬಹುದು.

dream team

ಡ್ರೀಮ್ ಟೀಮ್ 01: ಕೀಪರ್ - ಜಿತೇಶ್ ಶರ್ಮಾ

ಬ್ಯಾಟ್ಸ್‌ಮನ್‌ಗಳು - ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಫಾಫ್ ಡು ಪ್ಲೆಸಿಸ್ (ಉಪನಾಯಕ)

ಆಲ್ ರೌಂಡರ್‌ಗಳು - ಗ್ಲೆನ್ ಮ್ಯಾಕ್ಸ್‌ವೆಲ್, ಸ್ಯಾಮ್ ಕರ್ರಾನ್, ಮ್ಯಾಥ್ಯೂ ಶಾರ್ಟ್, ವನಿಂದು ಹಸರಂಗಾ, ಸಿಕಂದರ್ ರಜಾ

ಬೌಲರ್‌ಗಳು - ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್

ಡ್ರೀಮ್ ಟೀಮ್ 2: ಕೀಪರ್ - ಜಿತೇಶ್ ಶರ್ಮಾ

ಬ್ಯಾಟ್ಸ್‌ಮನ್‌ಗಳು - ವಿರಾಟ್ ಕೊಹ್ಲಿ, ಶಿಖರ್ ಧವನ್ (ಉಪನಾಯಕ), ಫಾಫ್ ಡು ಪ್ಲೆಸಿಸ್

ಆಲ್ ರೌಂಡರ್‌ಗಳು - ಗ್ಲೆನ್ ಮ್ಯಾಕ್ಸ್‌ವೆಲ್ (ನಾಯಕ), ಸ್ಯಾಮ್ ಕರ್ರಾನ್, ಮ್ಯಾಥ್ಯೂ ಶಾರ್ಟ್, ವನಿಂದು ಹಸರಂಗ

ಬೌಲರ್‌ಗಳು - ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್, ವೇಯ್ನ್ ಪಾರ್ನೆಲ್

Story first published: Thursday, April 20, 2023, 12:33 [IST]
Other articles published on Apr 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+