Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs PBKS: ಆರ್‌ಸಿಬಿ ನಾಯಕ ಚೇಂಜ್; ಟಾಸ್ ವರದಿ, ಆಡುವ ಬಳಗ & ಲೈವ್ ಸ್ಕೋರ್

IPL 2023: Royal Challengers Bangalore vs Punjab Kings toss report, playing 11 and live score

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡು ಪಂದ್ಯಗಳು ಇಂದು ( ಏಪ್ರಿಲ್ 20 ) ಜರುಗಲಿವೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸಂಜೆ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಈ ಪಂದ್ಯ ಟೂರ್ನಿಯ 27ನೇ ಪಂದ್ಯವಾಗಿದ್ದು, ಈ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಷಿಯೇಷನ್ ಐಎಸ್ ಬಿಂದ್ರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರನ್ ಫೀಲ್ಡಿಂಗ್ ಆಯ್ದುಕೊಂಡಿದ್ದು ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಇನ್ನು ಕಳೆದ ಪಂದ್ಯದಲ್ಲಿ ಗಾಯಕ್ಕೊಳಗಾಗಿದ್ದ ಕಾರಣ ಫಾಫ್ ಡುಪ್ಲೆಸಿಸ್ ವಿಶ್ರಾಂತಿ ತೆಗೆದುಕೊಳ್ಳಲಿದ್ದು, ಫಾಫ್ ಬದಲಾಗಿ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಂಡವನ್ನು ನಾಯಕನನ್ನಾಗಿ ಮುನ್ನಡೆಸುತ್ತಿದ್ದಾರೆ. ಅತ್ತ ಪಂಜಾಬ್ ಕಿಂಗ್ಸ್ ತಂಡದ ನಾಯಕತ್ವದಲ್ಲಿ ಸಹ ಬದಲಾವಣೆಯಾಗಿದ್ದು, ಶಿಖರ್ ಧವನ್ ಬದಲು ಸಾಮ್ ಕರನ್ ನಾಯಕನಾಗಿದ್ದಾರೆ.

ಟಾಸ್ ಆದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ಫಾಫ್ ಡುಪ್ಲೆಸಿಸ್ ಗಾಯಕ್ಕೊಳಗಾಗಿರುವ ವಿಷಯ ಬಿಚ್ಚಿಟ್ಟಿದ್ದು, ಫೀಲ್ಡಿಂಗ್ ಮಾಡಲಾಗದ ಕಾರಣ ವಿಜಯ್‌ಕುಮಾರ್ ವೈಶಾಖ್ ಬದಲಾಗಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೇ ನಾವು ಬಯಸಿದ್ದೇ ನಮಗೆ ಲಭಿಸಿದೆ, ನಾವು ಮೊದಲು ಬ್ಯಾಟಿಂಗ್ ಮಾಡಬೇಕೆಂದು ಯೋಜಿಸಿದ್ದೆವು ಎಂದೂ ಸಹ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರನ್ ಕಳೆದ ಪಂದ್ಯದಂತೆ ಈ ಪಂದ್ಯದಲ್ಲಿಯೂ ಮೊದಲು ಬೌಲಿಂಗ್ ಮಾಡುವ ಆಯ್ಕೆ ಉತ್ತಮ ಎಂದಿದ್ದು, ಶಿಖರ್ ಧವನ್ ಈ ದಿನ ಕಣಕ್ಕಿಳಿಯುತ್ತಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಅಲ್ಲದೇ ಲಿಯಾಮ್ ಲಿವಿಂಗ್‌ಸ್ಟನ್ ತಂಡಕ್ಕೆ ಬಂದಿದ್ದಾರೆ ಎಂದು ತಿಳಿಸಿದ್ದಾರೆ.

ಆಡುವ ಬಳಗಗಳು:
ರಾಯಲ್ ಚಾಲೆಂಜರ್ಸ್ ಆಡುವ ಬಳಗ: ವಿರಾಟ್ ಕೊಹ್ಲಿ(ನಾಯಕ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ ಮತ್ತು ಮೊಹಮ್ಮದ್ ಸಿರಾಜ್

ಪಂಜಾಬ್ ಕಿಂಗ್ಸ್ ಆಡುವ ಬಳಗ: ಅಥರ್ವ ಥೈದೆ, ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕುರಾನ್(ನಾಯಕ), ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್ ಹಾಗೂ ಅರ್ಶ್‌ದೀಪ್ ಸಿಂಗ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ:

1
57082

ಸ್ಕ್ವಾಡ್:

ಪಂಜಾಬ್ ಕಿಂಗ್ಸ್ ಸ್ಕ್ವಾಡ್: ಅಥರ್ವ ಥೈದೆ, ಶಿಖರ್ ಧವನ್ (ನಾಯಕ), ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಸಿಕಂದರ್ ರಜಾ, ಸ್ಯಾಮ್ ಕರನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್, ಪ್ರಭ್‌ಸಿಮ್ರಾನ್ ಸಿಂಗ್, ನಾಥನ್ ಎಲ್ಲಿಸ್, ಮೋಹಿತ್ ರಥಿ, ರಿಷಿ ಧವನ್, ಭಾನುಕಾ ರಾಜಪಕ್ಸೆ, ಗುರ್ನೂರ್ ಬ್ರಾರ್, ಬಲ್ತೇಜ್ ಸಿಂಗ್, ಲಿಯಾಮ್ ಲಿವಿಂಗ್‌ಸ್ಟೋನ್, ವಿಧ್ವತ್ ಕಾವೇರಪ್ಪ, ಶಿವಂ ಸಿಂಗ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಸುಯಶ್ ಪ್ರಭುದೇಸ್ಸಾಯಿ , ಆಕಾಶ್ ದೀಪ್, ಕರ್ಣ್ ಶರ್ಮಾ, ಅನುಜ್ ರಾವತ್, ಮನೋಜ್ ಭಾಂಡಗೆ, ಮೈಕೆಲ್ ಬ್ರೇಸ್‌ವೆಲ್, ಫಿನ್ ಅಲೆನ್, ಸಿದ್ದಾರ್ಥ್ ಕೌಲ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ, ಸೋನು ಯಾದವ್

Story first published: Thursday, April 20, 2023, 15:13 [IST]
Other articles published on Apr 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+