RCB vs RR: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್; ಆರ್‌ಸಿಬಿಯಲ್ಲಿ ಕೆಲ ಬದಲಾವಣೆ

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ಮೇ 14ರ ಭಾನುವಾರ ಲೀಗ್ ಹಂತದ 60 ಹಾಗೂ 61 ನೇ ಪಂದ್ಯಗಳು ಜರುಗುತ್ತಿವೆ. ಸದ್ಯ ಆರಂಭವಾಗಿರುವ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಡಲಿದ್ದರೆ, ಸಂಜೆ ಆರಂಭಗೊಳ್ಳಲಿರುವ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಈ ಪಂದ್ಯ ಜೈಪುರದ ಸಾವೈ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗದಲ್ಲಿ ಕೆಲ ಬದಲಾವಣೆಗಳಾಗಿದ್ದು, ಜೋಶ್ ಹೇಜಲ್‌ವುಡ್ ಬದಲಾಗಿ ವೇಯ್ನ್ ಪಾರ್ನೆಲ್ ಹಾಗೂ ವನಿಂದು ಹಸರಂಗ ಬದಲಾಗಿ ಬ್ರೇಸ್‌ವೆಲ್ ಕಣಕ್ಕಿಳಿದಿದ್ದಾರೆ.
ಆಡುವ ಬಗಳಗಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಮೈಕಲ್ ಬ್ರೇಸ್‌ವೆಲ್, ವೇಯ್ನ್ ಪಾರ್ನೆಲ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್ ಹಾಗೂ ನಾಯಕ), ಜೋ ರೂಟ್, ಧ್ರುವ್ ಜುರೆಲ್, ಶಿಮ್ರೋನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಹಾಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್ ಅಪ್‌ಡೇಟ್
ಈ ಪಂದ್ಯ ಎರಡೂ ತಂಡಗಳಿಗೂ ಸಹ ಅತಿಮುಖ್ಯದ್ದಾಗಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನವನ್ನು ಪಡೆದುಕೊಂಡಿದೆ.
ಅತ್ತ್ ರಾಜಸ್ಥಾನ್ ರಾಯಲ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸುವುದರ ಮೂಲಕ 12 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆದುಕೊಳ್ಳುವುದರ ಜತೆಗೆ ಪ್ಲೇಆಫ್ ಹಾದಿಯನ್ನು ಸಹ ಸುಗಮ ಮಾಡಿಕೊಳ್ಳಲಿವೆ. ಹೀಗಾಗಿಯೇ ಎರಡೂ ತಂಡಗಳಿಗೂ ಸಹ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications