For Quick Alerts
ALLOW NOTIFICATIONS  
For Daily Alerts
 

RCB vs SRH: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Royal Challengers Bangalore vs Sunrisers Hyderabad dream team prediction

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 65ನೇ ಪಂದ್ಯ ಇಂದು ( ಮೇ 18 ) ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿವೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಟೂರ್ನಿಯಿಂದ ಈಗಾಗಲೇ ಹೊರಬಿದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕಿಂತ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಪಂದ್ಯ ಮುಖ್ಯದ್ದಾಗಿದೆ.

ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಉಳಿದರೆಡು ಪಂದ್ಯಗಳನ್ನು ಗೆದ್ದರೆ ಪ್ಲೇಆಫ್ ಪ್ರವೇಶಿಸಲಿದೆ. ಹೀಗಾಗಿ ಈ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲಲೇಬೇಕಿದ್ದು, ಗೆದ್ದರೆ ಮಾತ್ರ ಪ್ಲೇಆಫ್ ಕನಸು ಜೀವಂತವಾಗಿ ಉಳಿದುಕೊಳ್ಳಲಿದೆ.

ಅತ್ತ ಸನ್ ರೈಸರ್ಸ್ ಹೈದರಾಬಾದ್ 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈ ಮೂಲಕ ಸನ್ ರೈಸರ್ಸ್ ಹೈದರಾಬಾದ್ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಕೈತಪ್ಪಿಸಿಕೊಂಡಿದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಮಹತ್ವದ ಪಂದ್ಯವಿದ್ದಾಗ ಸನ್ ರೈಸರ್ಸ್ ಎದುರಾದಾಗಲೆಲ್ಲಾ ಆರ್‌ಸಿಬಿಗೆ ಸೋಲುಣಿಸಿದ್ದು ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಂಕಾಗದೇ ಲೆಕ್ಕಾಚಾರವನ್ನು ಉಲ್ಟಾ ಮಾಡುತ್ತಾ ಕಾದು ನೋಡಬೇಕಿದೆ.

ಹೀಗೆ ಇಂತಹ ಮುಖ್ಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲುತ್ತಾ ಅಥವಾ ಸೋಲುತ್ತಾ ಎಂಬ ಚರ್ಚೆಗಳು ಜೋರಾಗಿದ್ದು, ಮತ್ತೊಂದೆಡೆ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬಹುದಾದ ಆಟಗಾರರನ್ನು ಆರಿಸುವ ಮೂಲಕ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ. ಹೀಗೆ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡಂತೆ ತಂಡಗಳನ್ನು ರಚಿಸಿದರೆ ಉತ್ತಮ ಫಲಿತಾಂಶ ಪಡೆಯುವ ಸಾಧ್ಯತೆಗಳಿವೆ.

ಡ್ರೀಮ್ ಟೀಮ್ 1 : ವಿಕೆಟ್ ಕೀಪರ್ಸ್ - ಹೆನ್ರಿಚ್ ಕ್ಲಾಸೆನ್, ಅನುಜ್ ರಾವತ್

ಬ್ಯಾಟ್ಸ್‌ಮನ್‌ಗಳು - ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ)

ಆಲ್ ರೌಂಡರ್‌ಗಳು - ಗ್ಲೆನ್ ಮ್ಯಾಕ್ಸ್‌ವೆಲ್ (ಉಪನಾಯಕ), ಮೈಕೆಲ್ ಬ್ರೇಸ್‌ವೆಲ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್

ಬೌಲರ್‌ಗಳು - ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್

ಡ್ರೀಮ್ ಟೀಮ್ 2: ವಿಕೆಟ್ ಕೀಪರ್ - ಹೆನ್ರಿಕ್ ಕ್ಲಾಸೆನ್

ಬ್ಯಾಟ್ಸ್‌ಮನ್‌ಗಳು - ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ರಾಹುಲ್ ತ್ರಿಪಾಠಿ

ಆಲ್ ರೌಂಡರ್‌ಗಳು - ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್

ಬೌಲರ್‌ಗಳು - ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್ (ಉಪನಾಯಕ), ಭುವನೇಶ್ವರ್ ಕುಮಾರ್

ಸಂಭಾವ್ಯ ಆಡುವ ಬಳಗಗಳು:

ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ ಆಡುವ ಬಳಗ: ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಅಬ್ದುಲ್ ಸಮದ್, ಸನ್ವಿರ್ ಸಿಂಗ್, ಮಾರ್ಕೊ ಜಾನ್ಸೆನ್, ಮಯಾಂಕ್ ಮಾರ್ಕಾಂಡೆ, ಭುವನೇಶ್ವರ್ ಕುಮಾರ್, ಫಜಲ್‌ಹಕ್ ಫಾರೂಕಿ, ಟಿ ನಟರಾಜನ್, ಅನ್ಮೋಲ್‌ಪ್ರೀತ್ ಸಿಂಗ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮೈಕಲ್ ಬ್ರೇಸ್‌ವೆಲ್, ವೇಯ್ನ್ ಪಾರ್ನೆಲ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಶಹಬಾಜ್ ಅಹ್ಮದ್

Story first published: Thursday, May 18, 2023, 18:12 [IST]
Other articles published on May 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+