For Quick Alerts
ALLOW NOTIFICATIONS  
For Daily Alerts
 

RCB vs SRH: ಮಹತ್ವದ ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023: Royal Challengers Bangalore vs Sunrisers Hyderabad toss report, playing 11 & live score

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 65 ನೇ ಪಂದ್ಯ ಇಂದು ( ಮೇ 18 ) ಹೈದರಾಬಾದಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗುತ್ತಿದೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಫೀಲ್ಡಿಂಗ್ ಆಯ್ದುಕೊಂಡಿದ್ದು, ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ‌.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವನ್ನೇ ಈ ಬಾರಿಯೂ ಕಣಕ್ಕಿಳಿಸಿದ್ದು ಯಾವುದೆ ಬದಲಾವಣೆ ಮಾಡಿಕೊಳ್ಳದಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಎರಡು ಬದಲಾವಣೆಗಳಾಗಿವೆ. ಹ್ಯಾರಿ ಬ್ರೂಕ್ ಹಾಗೂ ಕಾರ್ತಿಕ್ ತ್ಯಾಗಿ ತಂಡ ಸೇರಿದ್ದಾರೆ.

ಆಡುವ ಬಳಗಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಅನುಜ್ ರಾವತ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಮೈಕಲ್ ಬ್ರೇಸ್‌ವೆಲ್, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಂ(ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ಗ್ಲೆನ್ ಫಿಲಿಪ್ಸ್, ಅಬ್ದುಲ್ ಸಮದ್, ಕಾರ್ತಿಕ್ ತ್ಯಾಗಿ, ಮಯಾಂಕ್ ದಾಗರ್, ಭುವನೇಶ್ವರ್ ಕುಮಾರ್, ನಿತೀಶ್ ರೆಡ್ಡಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ಲೈವ್ ಸ್ಕೋರ್:

1
57120

ಇನ್ನು ಟೂರ್ನಿಯಿಂದ ಈಗಾಗಲೇ ಹೊರಬಿದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕಿಂತ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಪಂದ್ಯ ಮುಖ್ಯದ್ದಾಗಿದೆ.

ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಉಳಿದರೆಡು ಪಂದ್ಯಗಳನ್ನು ಗೆದ್ದರೆ ಪ್ಲೇಆಫ್ ಪ್ರವೇಶಿಸಲಿದೆ. ಹೀಗಾಗಿ ಈ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲಲೇಬೇಕಿದ್ದು, ಗೆದ್ದರೆ ಮಾತ್ರ ಪ್ಲೇಆಫ್ ಕನಸು ಜೀವಂತವಾಗಿ ಉಳಿದುಕೊಳ್ಳಲಿದೆ.

ಅತ್ತ ಸನ್ ರೈಸರ್ಸ್ ಹೈದರಾಬಾದ್ 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈ ಮೂಲಕ ಸನ್ ರೈಸರ್ಸ್ ಹೈದರಾಬಾದ್ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಕೈತಪ್ಪಿಸಿಕೊಂಡಿದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಮಹತ್ವದ ಪಂದ್ಯವಿದ್ದಾಗ ಸನ್ ರೈಸರ್ಸ್ ಎದುರಾದಾಗಲೆಲ್ಲಾ ಆರ್‌ಸಿಬಿಗೆ ಸೋಲುಣಿಸಿದ್ದು ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಂಕಾಗದೇ ಲೆಕ್ಕಾಚಾರವನ್ನು ಉಲ್ಟಾ ಮಾಡುತ್ತಾ ಕಾದು ನೋಡಬೇಕಿದೆ.

Story first published: Thursday, May 18, 2023, 19:16 [IST]
Other articles published on May 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+