
ಇಂದು ( ಮೇ 19 ) ಧರ್ಮಶಾಲಾದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 4 ವಿಕೆಟ್‌ಗಳ ಜಯ ಸಾಧಿಸಿ ತನ್ನ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಸೋತ ಪಂಜಾಬ್ ಕಿಂಗ್ಸ್ ಟೂರ್ನಿಯಿಂದ ಹೊರಬಿದ್ದಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಸ್ಯಾಮ್ ಕರನ್ ಹಾಗೂ ಜಿತೇಶ್ ಶರ್ಮಾ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ರನ್ ಕಲೆಹಾಕಿ, ತಮ್ಮ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು ರನ್‌ಗಳ ಗುರಿಯನ್ನು ನೀಡಿತ್ತು. ರಾಜಸ್ಥಾನ್ ರಾಯಲ್ಸ್ 19.4 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 189 ರನ್ ಕಲೆಹಾಕಿದ್ದು 4 ವಿಕೆಟ್‌ಗಳ ಗೆಲುವನ್ನು ಕಂಡಿದೆ.
ಹೀಗೆ ಈ ಪಂದ್ಯದ ಬಳಿಕ ಪಂಜಾಬ್ ಕಿಂಗ್ಸ್ ಟೂರ್ನಿಯಿಂದ ಹೊರಬಿದ್ದ ಮೂರನೇ ತಂಡ ಎನಿಸಿಕೊಂಡಿದ್ದು, ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ಐದನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಇನ್ನು ಉಳಿದ ತಂಡಗಳು ಯಾವ ತಂಡಗಳು ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನದಲ್ಲಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ.
1. 13 ಪಂದ್ಯಗಳನ್ನಾಡಿ 9 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.
4. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 14 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 14 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ಟೂರ್ನಿಯಿಂದ ಹೊರಬಿದ್ದಿದೆ.
9. 13 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಟೂರ್ನಿಯಿಂದ ಹೊರಬಿದ್ದಿದೆ.
10. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಟೂರ್ನಿಯಿಂದ ಹೊರಬಿದ್ದಿದೆ.