RR vs CSK: ಮತ್ತೊಂದು ಗೆಲುವು ಸಾಧಿಸಿದ ರಾಜಸ್ಥಾನ್ ರಾಯಲ್ಸ್: ತಂಡದ ಯಶಸ್ಸಿನ ಗುಟ್ಟು ಬಿಚ್ಚಿಟ್ಟ ನಾಯಕ
ರಾಜಸ್ತಾನ್ ರಾಯಲ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿಯೂ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಗೆಲುವು ಸಾಧಿಸಿದ್ದು ಮತ್ತೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಈ ಗೆಲುವಿನ ಬಳಿಕ ಆರ್‌ಆರ್ ತಂಡದ ನಾಯಕ ಸಂಜು ಸ್ಯಾಮ್ಸನ್ ಸಂತಸ ಹಂಚಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತಂಡ ಬ್ಯಾಟಿಂಗ್‌ನಲ್ಲಿ ಸಾಧಿಸುತ್ತಿರುವ ಯಶಸ್ಸಿನ ಬಗ್ಗೆಯೂ ಗುಟ್ಟುಬಿಟ್ಟುಕೊಟ್ಟಿದ್ದಾರೆ.
"ನಮ್ಮ ತಂಡ ಈ ಗೆಲುವನ್ನು ನಿಜಕ್ಕೂ ಬಯಸಿತ್ತು. ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್ ಹಾಗೂ ಧ್ರುವ್ ಜುರೆಲ್ ಬ್ಯಾಟಿಂಗ್ ನಡೆಸಿದ ರೀತಿ ನಿಜಕ್ಕೂ ಅದ್ಭುತ. ಆಕ್ರಮಣಕಾರಿ ಆಟಕ್ಕೆ ನಾವು ಡ್ರೆಸ್ಸಿಂಗ್ ರೂಮ್‌ನಲ್ಲಿ ಹೆಚ್ಚಾಗಿ ಒತ್ತು ಕೊಡುತ್ತೇವೆ ಇದು ಬ್ಯಾಟಿಂಗ್‌ನಲ್ಲಿನ ಯಶಸ್ಸಿಗೆ ಕಾರಣವಾಗಿದೆ" ಎಂದಿದ್ದಾರೆ ಸಂಜು ಸ್ಯಾಮ್ಸನ್.

ಇನ್ನು ಈ ಸಂದರ್ಭದಲ್ಲಿ ಸಂಜು ಸ್ಯಾಮ್ಸನ್ ತಂಡದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ವಿಶೇಷ ಮಾತುಗಳನ್ನಾಡಿದ್ದಾರೆ. ಯಶಸ್ವಿ ಜೈಸ್ವಾಲ್ ಸಾಕಷ್ಟು ಪರಿಶ್ರಮ ಪಟ್ಟಿರುವ ಕಾರಣದಿಂದಾಗಿ ಇಂಥಾ ಪ್ರದರ್ಶನ ಹೊರಹೊಮ್ಮುತ್ತಿದೆ ಎಂದಿದ್ದಾರೆ ಆರ್‌ಆರ್ ನಾಯಕ. ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಜೈಸ್ವಾಲ್ 43 ಎಸೆತಗಳಲ್ಲಿ 77 ರನ್‌ಗಳನ್ನು ಬಾರಿಸಿದರು.
"ಯಶಸ್ವಿ ಜೈಸ್ವಾಲ್ ರೀತಿಯ ಆಟಗಾರರ ಯಶಸ್ಸಿಗೆ ತಂಡದ ಮ್ಯಾನೇಜ್‌ಮೆಂಟ್‌ಗೆ ಯಶಸ್ಸು ಸಲ್ಲಬೇಕು. ಆಟಗಾರರ ಏಳಿಗೆಗೆ ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ. ಈ ಯಶಸ್ಸಿನ ಹಿಂದೆ ಸಾಕಷ್ಟು ಪರಿಶ್ರಮವಿದೆ. ಯಶಸ್ಸವಿ ಜೈಸ್ವಾಲ್ ಆಡುತ್ತಿರುವ ರೀತಿಗೆ ಹೆಮ್ಮೆಯಾಗುತ್ತಿದೆ" ಎಂದಿದ್ದಾರೆ ಸಂಜು ಸ್ಯಾಮ್ಸನ್.
ಜೈಪುರಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಂಜು ಸ್ಯಾಮ್ಸನ್ ನೇತೃತ್ವ ರಾಜಸ್ಥಾನ್ ರಾಯಲ್ಸ್ ತಂಡ ಜೈಸ್ವಾಲ್ ಅವರ ಅಬ್ಬರದ ಬ್ಯಾಟಿಂಗ್‌ನ ಕಾರಣದಿಂದಾಗಿ ಭರ್ಜರಿ 202 ರನ್‌ಗಳನ್ನು ಕಲೆಹಾಕಿತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಸಿಎಸ್‌ಕೆ ತಂಡ ಋತುರಾಜ್ ಗಾಯಕ್ವಾಡ್ ಹಾಗೂ ಶಿವಂ ದುಬೆ ಅವರ ಸ್ಪೋಟಕ ಪ್ರದರ್ಶನದ ಹೊರತಾಗಿಯೂ 32 ರನ್‌ಗಳ ಅಂತರದ ಸೋಲು ಅನುಭವಿಸಿದೆ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಧ್ರುವ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
ಬೆಂಚ್: ಡೊನಾವೊನ್ ಫೆರೇರಾ, ಮುರುಗನ್ ಅಶ್ವಿನ್, ರಿಯಾನ್ ಪರಾಗ್, ಕೆಎಂ ಆಸಿಫ್, ಕುಲದೀಪ್ ಯಾದವ್, ಅಬ್ದುಲ್ ಬಸಿತ್, ಆಕಾಶ್ ವಸಿಷ್ಟ್, ಜೋ ರೂಟ್, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಓಬೇದ್ ಮೆಕಾಯ್, ಕುಲದೀಪ್ ಸೇನ್, ಕುನಾಲ್ ಸಿಂಗ್ ರಾಥೋಡ್, ಟ್ರೆಂಟ್ ಬೌಲ್ಟ್
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಮಥೀಶ ಪತಿರಾನ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಆಕಾಶ್ ಸಿಂಗ್
ಬೆಂಚ್: ಅಂಬಾಟಿ ರಾಯುಡು, ಡ್ವೈನ್ ಪ್ರಿಟೋರಿಯಸ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆರ್ ಎಸ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ನಿಶಾಂತ್ ಸಿಂಧು
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications