Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023 RR vs DC: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್

ಇಂಡಿಯನ್ ಪ್ರೀಮಿಯರ್ ಲೀಗ್‌ 2023ರ 11ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅಸ್ಸಾಂನ ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ರಾಜಸ್ಥಾನ ರಾಯಲ್ಸ್ ತಂಡ ಇಲ್ಲಿ ಎರಡನೇ ತವರಿನ ಅಂಗಳ ಎಂದು ಎರಡು ಪಂದ್ಯಗಳನ್ನಾಡಲು ನಿರ್ಧರಿಸಿದ್ದು, ಇಂದು ಕೊನೆಯ ಪಂದ್ಯವನ್ನಾಡಲಿದೆ. ಇಲ್ಲಿ ಆಡಿದ ಮೊದಲನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 5 ರನ್‌ಗಳ ರೋಚಕ ಸೋಲು ಅನುಭವಿಸಿತ್ತು.

ಇದುವರೆಗೂ ಆಡಿರುವ ಎರಡು ಪಂದ್ಯಗಳಲ್ಲಿ ಮೊದಲನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ್ದ ರಾಜಸ್ಥಾನ ಎರಡನೇ ಪಂದ್ಯವನ್ನು ಸೋಲುವ ಮೂಲಕ ನಿರಾಸೆ ಅನುಭವಿಸಿತ್ತು. ಎರಡನೇ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಬೆರಳಿಗೆ ಗಾಯ ಮಾಡಿಕೊಂಡಿದ್ದ ಸ್ಫೋಟಕ ಬ್ಯಾಟರ್ ಜೋಸ್ ಬಟ್ಲರ್ ಇಂದಿನ ಪಂದ್ಯಕ್ಕೆ ಅನುಮಾನ ಎನ್ನಲಾಗಿತ್ತು, ಆದರೆ ಅವರು ಫಿಟ್ ಆಗಿದ್ದು ಇಂದಿನ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಬಟ್ಲರ್ ಮೊದಲನೇ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಗಳಿಸಿ ಮಿಂಚಿದ್ದರು.

 Delhi Capitals Won the Toss

ಕಳೆದ ಪಂದ್ಯದಲ್ಲಿ ರನ್ ಗಳಿಸಲು ಪರದಾಡಿದ್ದ ದೇವದತ್ ಪಡಿಕ್ಕಲ್ ಆಡುವ ಬಳಗದಿಂದ ಹೊರಗುಳಿದಿದ್ದಾರೆ, ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಯುವ ಬ್ಯಾಟರ್ ಧ್ರುವ್ ಜುರೆಲ್ ಆಡುವ ಬಳಗದಲ್ಲಿ ನೇರವಾಗಿ ಸ್ಥಾನ ಪಡೆದುಕೊಂಡಿದ್ದಾರೆ. ವೇಗದ ಬೌಲರ್ ಸಂದೀಪ್ ಶರ್ಮಾ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ತಂಡದ ಪ್ರಮುಖ ಬ್ಯಾಟರ್ ಮಿಚೆಲ್ ಮಾರ್ಷ್ ಮದುವೆಯ ಕಾರಣ ಆಸ್ಟ್ರೇಲಿಯಾಗೆ ತೆರಳಿದ್ದು, ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಅವರ ಬದಲಾಗಿ ರೋವ್ಮೆನ್ ಪೊವೆಲ್ ಸ್ಥಾನ ಪಡೆದುಕೊಂಡಿದ್ದಾರೆ. ಮನೀಶ್ ಪಾಂಡೆ, ಲಲಿತ್ ಯಾದವ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಬರ್ಸಾಪರ ಪಿಚ್ ವರದಿ

ಬರ್ಸಾಪರ ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್‌ಗೆ ಹೆಚ್ಚಿನ ಸಹಕಾರ ನೀಡಿದೆ. ಮೊದಲು ಬ್ಯಾಟಿಂಗ್ ಮಾಡಿದಾಗ ಮತ್ತು ಚೇಸಿಂಗ್ ಮಾಡುವಾಗ ಕೂಡ ಪಿಚ್ ಒಂದೇ ರೀತಿ ಇರುವುದರಿಂದ ಟಾಸ್ ಹೆಚ್ಚು ವ್ಯತ್ಯಾಸ ಮಾಡಿಲ್ಲ. ಎರಡೂ ತಂಡಗಳು ಇದುವರೆಗೂ 26 ಬಾರಿ ಮುಖಾಮುಖಿಯಾಗಿದ್ದು ಉಭಯ ತಂಡಗಳು 13 ಪಂದ್ಯಗಳಲ್ಲಿ ಜಯ ಗಳಿಸುವ ಮೂಲಕ ಸಮಬಲ ಸಾಧಿಸಿವೆ. ಎರಡೂ ತಂಡಗಳಲ್ಲಿ ಉತ್ತಮ ಬ್ಯಾಟರ್ ಇರುವುದರಿಂದ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದಾಗಿದೆ.

 Delhi Capitals Won the Toss

ಉಭಯ ತಂಡಗಳ ಆಡುವ ಬಳಗ

ರಾಜಸ್ಥಾನ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್.

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಮನೀಷ್ ಪಾಂಡೆ, ರಿಲೀ ರೊಸೊವ್, ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಮುಖೇಶ್ ಕುಮಾರ್

Story first published: Saturday, April 8, 2023, 15:16 [IST]
Other articles published on Apr 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+