ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ರಾಜಸ್ಥಾನ ರಾಯಲ್ಸ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿದೆ. ಅಸ್ಸಾಂನ ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್‌ಗೆ ಯಶಸ್ವಿ ಜೈಸ್ವಾಲ್ ಸ್ಫೋಟಕ ಆರಂಭ ನೀಡಿದೆ. ಮೊದಲ ಓವರ್ ನಲ್ಲೇ 5 ಬೌಂಡರಿಗಳನ್ನು ಹೊಡೆಯುವ ಮೂಲಕ 20 ರನ್ ಗಳಿಸಿದರು. ಈ ಐಪಿಎಲ್‌ನಲ್ಲಿ ಮೊದಲನೇ ಓವರ್ ನಲ್ಲೇ ಅತಿ ಹೆಚ್ಚು ರನ್ ದಾಖಲಾಯಿತು.
ನಂತರ ಕೂಡ ಜೈಸ್ವಾಲ್ ಸ್ಫೋಟಕ ಇನ್ನಿಂಗ್ಸ್ ಆಡಿದರು, ಇವರಿಗೆ ಉತ್ತಮವಾಗಿ ಜೊತೆಯಾದ ಜೋಸ್ ಬಟ್ಲರ್ ಕೂಡ ಸ್ಫೋಟಕ ಆಟವಾಡಿದರು. ಈ ಜೋಡಿ 8.3 ಓವರ್ ಗಳಲ್ಲಿ ಮೊದಲನೇ ವಿಕೆಟ್‌ಗೆ 98 ರನ್ ಕಲೆಹಾಕುವ ಮೂಲಕ ದೊಡ್ಡ ಮೊತ್ತ ಗಳಿಸಲು ಭದ್ರವಾದ ಬುನಾದಿ ಹಾಕಿದರು. 31 ಎಸೆತಗಳಲ್ಲಿ 11 ಬೌಂಡರಿ ಒಂದು ಸಿಕ್ಸರ್ ಸಹಿತ 60 ಗಳಿಸಿ ಮಿಂಚಿದರು. ನಂತರ ಬಂದ ಸಂಜು ಸ್ಯಾಮ್ಸನ್ 4 ಎಸೆತಗಳನ್ನು ಎದುರಿಸಿ ಯಾವುದೇ ರನ್ ಗಳಿಸದೇ ಔಟಾದರು.

ಅಸ್ಸಾಂ ಆಟಗಾರ ರಿಯಾನ್ ಪರಾಗ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದರು ರನ್ ಗಳಿಸಲು ಪರದಾಡಿದರು. 11 ಎಸೆತಗಳಲ್ಲಿ ಕೇವಲ 7 ರನ್ ಗಳಿಸಿ ಔಟಾದರು. ಜೋಸ್ ಬಟ್ಲರ್ 51 ಎಸೆತಗಳಲ್ಲಿ 77 ಬೌಂಡರಿ ಒಂದು ಭರ್ಜರಿ ಸಿಕ್ಸರ್ ಸಹಿತ 79 ರನ್ ಗಳಿಸಿ ಔಟಾದರು.
ಶಿಮ್ರಾನ್ ಹೆಟ್ಮೇರ್ ಮತ್ತು ಧ್ರುವ್ ಜುರೆಲ್ ಅಂತಿಮ ಓವರ್ ಗಳಲ್ಲಿ ಅಬ್ಬರಿಸಿದರು. ಶಿಮ್ರಾನ್ ಹೆಟ್ಮೇರ್ 20 ಎಸೆತಗಳಲ್ಲಿ 1 ಬೌಂಡರಿ 4 ಸಿಕ್ಸರ್ ಸಹಿತ 39 ರನ್ ಗಳಿಸಿ ಮಿಂಚಿದರು. ಧ್ರುವ್ ಜುರೆಲ್ 3 ಎಸೆತಗಳಲ್ಲಿ ಒಂದು ಸಿಕ್ಸರ್ ಸಹಿತ 8 ರನ್ ಗಳಿಸಿದರು. ಅಂತಿಮವಾಗಿ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ರಾಜಸ್ಥಾನ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್.
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಮನೀಷ್ ಪಾಂಡೆ, ರಿಲೀ ರೊಸೊವ್, ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಮುಖೇಶ್ ಕುಮಾರ್.