Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023 RR vs DC: ಗುವಾಹಟಿ ಪಿಚ್ ವರದಿ: ಮೊದಲ ಗೆಲುವು ಪಡೆಯುತ್ತಾ ಡೆಲ್ಲಿ ಕ್ಯಾಪಿಟಲ್ಸ್

ಇಂಡಿಯನ್ ಪ್ರೀಮಿಯರ್ ಲೀಗ್‌ 2023ರ 11ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಪಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಅಸ್ಸಾಂನ ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಈ ಕ್ರೀಡಾಂಗಣವನ್ನು ರಾಜಸ್ಥಾನ ತನ್ನ ಎರಡನೇ ತವರು ಅಂಗಳವನ್ನಾಗಿ ಮಾಡಿಕೊಂಡಿದೆ. ಮೊದಲನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 5 ರನ್‌ಗಳಿಂದ ಸೋತಿರುವ ರಾಜಸ್ಥಾನ ರಾಯಲ್ಸ್ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯಾವುದು ಅಂದುಕೊಂಡಂತೆ ಆಗುತ್ತಿಲ್ಲ, ಆಡಿದ ಮೊದಲ ಎರಡೂ ಪಂದ್ಯಗಳಲ್ಲಿ ಸೋಲನುಭವಿಸಿದೆ. ಮೊದಲನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 50 ರನ್‌ಗಳಿಂದ ಸೋತ ಬಳಿಕ, ತವರಿನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಕೂಡ ಸೋಲನುಭವಿಸಿತ್ತು. ಇಂದು ಮೂರನೇ ಪಂದ್ಯವನ್ನಾಡಲಿದ್ದು, ಮೊದಲ ಗೆಲುವಿನ ಹುಡುಕಾಟದಲ್ಲಿದೆ.

Dc vs RR Preview

ತಂಡದ ಪ್ರಮುಖ ಬ್ಯಾಟರ್ ಮಿಚೆಲ್ ಮಾರ್ಷ್ ಮದುವೆಯ ಕಾರಣದಿಂದ ಆಸ್ಟ್ರೇಲಿಯಾಗೆ ವಾಪಸ್ ತೆರಳಿದ್ದು, ರೋವ್ಮೆನ್ ಪೋವೆಲ್ ಅವರ ಬದಲಾಗಿ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಆರಂಭಿಕರಾದ ಡೇವಿಡ್ ವಾರ್ನರ್ ಮತ್ತು ಪೃಥ್ವಿ ಶಾ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಪ್ರದರ್ಶನ ನೀಡಬೇಕಿದೆ. ಅನ್ರಿಚ್ ನೊಕಿಯಾ ಹೊರತುಪಡಿಸಿ ಉಳಿದ ಬೌಲರ್ ಗಳು ನಿರೀಕ್ಷಿತ ಪ್ರದರ್ಶನ ನೀಡದಿರುವುದು ತಂಡಕ್ಕೆ ಹಿನ್ನಡೆಯಾಗಿದೆ.

ಇಂದಿನ ಪಂದ್ಯಕ್ಕೆ ಜೋಸ್ ಬಟ್ಲರ್ ಅಲಭ್ಯ?

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಮುಖ ಬ್ಯಾಟರ್ ಜೋಸ್ ಬಟ್ಲರ್ ಆಡುವುದು ಅನುಮಾನವಾಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ಸಂದರ್ಭದಲ್ಲಿ ಬೆರಳಿಗೆ ಗಾಯಮಾಡಿಕೊಂಡಿದ್ದರು. ಜೋಸ್ ಬಟ್ಲರ್ ಆಡದಿದ್ದರೆ ಜೋ ರೂಟ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಕಳೆದ ಪಂದ್ಯದಲ್ಲಿ ಕೇವಲ 5 ರನ್‌ಗಳಿಂದ ಸೋತಿರುವ ಸಂಜು ಸ್ಯಾಮ್ಸನ್ ಪಡೆ ಈ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿದೆ.

DC VS RR

ಹೆಡ್‌ ಟು ಹೆಡ್, ಬರ್ಸಾಪರ ಕ್ರೀಡಾಂಗಣ ಪಿಚ್ ವರದಿ

ಎರಡೂ ತಂಡಗಳು ಇದುವರೆಗೂ 26 ಬಾರಿ ಮುಖಾಮುಖಿಯಾಗಿದ್ದು ಉಭಯ ತಂಡಗಳು 13 ಪಂದ್ಯಗಳಲ್ಲಿ ಜಯ ಗಳಿಸುವ ಮೂಲಕ ಸಮಬಲ ಸಾಧಿಸಿವೆ. ಕಳೆದ ಆವೃತ್ತಿಯಲ್ಲಿ ಎರಡು ಪಂದ್ಯಗಳಲ್ಲಿ ಎದುರಾಗಿದ್ದು, ಎರಡೂ ತಂಡಗಳು ತಲಾ ಒಂದು ಬಾರಿ ಗೆಲುವು ಕಂಡಿವೆ. ಬರ್ಸಾಪರ ಕ್ರೀಡಾಂಗಣ ಬ್ಯಾಟಿಂಗ್‌ಗೆ ಹೆಚ್ಚಿನ ಸಹಕಾರ ನೀಡಲಿದೆ. ಕಳೆದ ಪಂದ್ಯದಲ್ಲಿ ಕೂಡ ಹೇ ಸ್ಕೋರಿಂಗ್ ಪಂದ್ಯವನ್ನು ಸೋಡಿದ್ದು, ಇಂದು ಕೂಡ ಮತ್ತೊಂದು ಹೈ ಸ್ಕೋರಿಂಗ್ ಪಂದ್ಯ ನಿರೀಕ್ಷೆ ಮಾಡಬಹುದಾಗಿದೆ.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್/ಜೋ ರೂಟ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್/ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್.

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ರಿಲೀ ರೊಸೊವ್, ರೋವ್‌ಮನ್ ಪೊವೆಲ್, ಅಕ್ಸರ್ ಪಟೇಲ್, ಸರ್ಫರಾಜ್ ಖಾನ್ / ಯಶ್ ಧುಲ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಅಮನ್ ಹಕೀಮ್ ಖಾನ್, ಕುಲದೀಪ್ ಯಾದವ್, ಅನ್ರಿಚ್ ನೊಕಿಯಾ, ಮುಖೇಶ್ ಕುಮಾರ್.

Story first published: Saturday, April 8, 2023, 9:19 [IST]
Other articles published on Apr 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+