For Quick Alerts
ALLOW NOTIFICATIONS  
For Daily Alerts
 

IPL 2023, RR vs LSG: ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆಯ್ಕೆ; ಆಡುವ ಬಳಗ

ಐಪಿಎಲ್‌ನಲ್ಲಿ ಇಂದು 26ನೇ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಈ ಪಂದ್ಯ ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದೆ.

ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಈ ಬಾರಿಯ ಐಪಿಎಲ್‌ನಲ್ಲಿ ಈವರೆಗೆ ತಲಾ ಐದು ಪಂದ್ಯಗಳನ್ನು ಆಡಿದ್ದು ಇಂದು ಆರನೇ ಪಂದ್ಯವನ್ನು ಆಡಲು ಕಣಕ್ಕಿಳಿದಿದೆ. ಆಡಿರುವ ಐದು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡ ಐದು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿದ್ದು ನಾಲ್ಕನೇ ಗೆಲುವಿಗಾಗಿ ಎದುರು ನೋಡುತ್ತಿದೆ.

IPL 2023, RR vs LSG: Rajasthan Royals won the toss and choose to field, Playing XI

ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ನಡುವಿನ ಪಂದ್ಯ ಎಂದೇ ಪರಿಗಣಿಸಲಾಗಿದೆ. ಐಪಿಎಲ್‌ನಲ್ಲಿ ಈ ಇಬ್ಬರು ಆಟಗಾರರು ಕೂಡ ಸತತವಾಗಿ ಅದ್ಭುತ ಪ್ರದರ್ಶನ ನಿಡಿಕೊಂಡು ಬರುತ್ತಿದ್ದು ತಮ್ಮದೇ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಹೀಗಾಗಿ ಈ ಪಂದ್ಯದಲ್ಲಿ ಈ ಇಬ್ಬರ ಪ್ರದರ್ಶನ ಸಾಕಷ್ಟು ಕುತೂಹಲ ಮೂಡಿಸಿದೆ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಒಬೆದ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಕೆಸಿ ಕಾರಿಯಪ್ಪ, ಜೇಸನ್ ಹೋಲ್ಡರ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಕುನಾಲ್ ರಾಥೋಡ್, ಆಡಮ್ ಝಂಪಾ, ಕೆಎಂ ಆಸಿಫ್, ಮುರುಗನ್ ಅಶ್ವಿನ್, ಆಕಾಶ್ ವಶಿಷ್ಟ್, ಅಬ್ದುಲ್ ಪಿ ಎ, ಜೋ ರೂಟ್

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಅವೇಶ್ ಖಾನ್, ಆಯುಷ್ ಬಡೋನಿ, ಕ್ವಿಂಟನ್ ಡಿ ಕಾಕ್, ಕೆ ಗೌತಮ್, ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೈಲ್ ಮೇಯರ್ಸ್, ಅಮಿತ್ ಮಿಶ್ರಾ, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಡೇನಿಯಲ್ ಸಾಮ್ಸ್, ಕರಣ್ ಶರ್ಮಾ, ರೊಮಾರಿಯೋ ಶೆಫರ್ಡ್, ಮಾರ್ಕಸ್ ಸ್ಟೊಯಿನಿಸ್, ಸ್ವಪ್ನಿಲ್ ಸಿಂಗ್, ಜಯದೇವ್ ಉನದ್ಕತ್, ಮನನ್ ವೋಹ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಯಶ್ ಠಾಕೂರ್, ಯುದ್ವೀರ್ ಸಿಂಗ್.

Story first published: Wednesday, April 19, 2023, 19:17 [IST]
Other articles published on Apr 19, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+