IPL 2023: ಸಾಯಿ ಸುದರ್ಶನ್ ಅರ್ಧಶತಕ; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಜಯಭೇರಿ
ಮಂಗಳವಾರ, ಏಪ್ರಿಲ್ 4ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಸೀಸನ್‌ನ ಏಳನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ನೀಡಿದ್ದ 163 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್ ತಂಡ 18.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿ, 6 ವಿಕೆಟ್‌ಗಳ ಜಯ ದಾಖಲಿಸಿತು. ಈ ಮೂಲಕ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ಕಂಡರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಎರಡನೇ ಸೋಲು ಅನುಭವಿಸಿತು.

ಗುಜರಾತ್ ಟೈಟನ್ಸ್ ತಂಡದ ಪರ ಆರಂಭಿಕರಾದ ವೃದ್ಧಿಮಾನ್ ಸಹಾ 14 ರನ್, ಶುಭ್ಮನ್ ಗಿಲ್ 14 ರನ್ ಗಳಿಸಿ ಔಟಾದರು. ನಂತರ ಬಂದ ಸಾಯಿ ಸುದರ್ಶನ್ 48 ಎಸೆತಗಳಲ್ಲಿ 4 ಬೌಂಡರಿ 2 ಸಿಕ್ಸರ್‌ಗಳ ನೆರವಿನಿಂದ ಅಜೇಯ 62 ರನ್ ಬಾರಿಸಿದರು.
ನಾಯಕ ಹಾರ್ದಿಕ್ ಪಾಂಡ್ಯ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅನಂತರ ಬಂದ ವಿಜಯ್ ಶಂಕರ್ 23 ಎಸೆತಗಳಲ್ಲಿ 3 ಬೌಂಡರಿಗಳ ಸಮೇತ 29 ರನ್ ಗಳಿಸಿದರು. ಕೊನೆಯಲ್ಲಿ ಡೇವಿಡ್ ಮಿಲ್ಲರ್ 16 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ ಅಜೇಯ 31 ರನ್ ಬಾರಿಸಿದರು.

ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆನ್ರಿಚ್ ನಾರ್ಟ್ಜೆ 4 ಓವರ್‌ಗಳಲ್ಲಿ 39 ರನ್ ನೀಡಿ 2 ವಿಕೆಟ್ ಪಡೆದರೆ, ಮಿಚೆಲ್ ಮಾರ್ಷ್ 3.1 ಓವರ್‌ಗಳಲ್ಲಿ 24 ರನ್ ನೀಡಿ 1 ವಿಕೆಟ್ ಪಡೆದರು. ಇನ್ನುಳಿದಂತೆ ಖಲೀಲ್ ಅಹ್ಮದ್ 4 ಓವರ್‌ಗಳಲ್ಲಿ 38 ರನ್ ನೀಡಿ 1 ವಿಕೆಟ್ ಕಬಳಿಸಿದರು.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ನಾಯಕ ಡೇವಿಡ್ ವಾರ್ನರ್ ಮತ್ತು ಪೃಥ್ವಿ ಶಾ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. 2.4 ಓವರ್‌ಗಳಲ್ಲಿ ತಂಡದ ಮೊತ್ತ 29 ಆಗಿದ್ದಾಗ ಪೃಥ್ವಿ ಶಾ 7 ರನ್ ಗಳಿಸಿ ಔಟಾದರು, ನಂತರ ಬಂದ ಮಿಚೆಲ್ ಮಾರ್ಷ್ 4 ರನ್ ಗಳಿಸಿ ವಿಕೆಟ್ ಒಪ್ಪಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು.
8.2 ಓವರ್‌ಗಳಲ್ಲಿ ತಂಡದ ಮೊತ್ತ 67 ರನ್‌ಗಳಾಗಿದ್ದಾಗ, 32 ಎಸೆತಗಳಲ್ಲಿ 7 ಬೌಂಡರಿಗಳ ಸಮೇತ 37 ರನ್ ಗಳಿಸಿ ಆಡುತ್ತಿದ್ದ ಡೇವಿಡ್ ವಾರ್ನರ್ ಔಟಾಗಿ ಹೊರನಡೆದರು. ಇವರ ಬೆನ್ನಲ್ಲೇ ರಿಲೀ ರುಸ್ಸೌ ಕೂಡ ಎದುರಿಸಿ ಮೊದಲ ಎಸೆತದಲ್ಲಿಯೇ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ನಂತರ ಮಧ್ಯಮ ಕ್ರಮಾಂಕದಲ್ಲಿ ಬಂದ ಅಭಿಷೇಕ್ ಪೊರೆಲ್ 11 ಎಸೆತಗಳಲ್ಲಿ 2 ಸಿಕ್ಸರ್‌ಗಳ ನೆರವಿನಿಂದ 20 ರನ್ ಗಳಿಸಿ ಔಟಾದರು.

ಕೊನೆಯಲ್ಲಿ ಅಕ್ಷರ್ ಪಟೇಲ್ 22 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಾಯದಿಂದ 36 ರನ್ ಬಾರಿಸಿದರು ಮತ್ತು ತಂಡದ ಮೊತ್ತ 150 ಗಡಿ ದಾಟುವಲ್ಲಿ ನೆರವಾದರು. ಅಮನ್ ಖಾನ್ 8 ರನ್, ಆನ್ರಿಚ್ ನಾರ್ಟ್ಜೆ 4 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ ಸ್ಪಿನ್ನರ್ ರಶೀದ್ ಖಾನ್ 4 ಓವರ್‌ಗಳಲ್ಲಿ 31 ರನ್ ನೀಡಿ 3 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ 4 ಓವರ್‌ಗಳಲ್ಲಿ 41 ರನ್ ನೀಡಿ 3 ವಿಕೆಟ್ ಪಡೆದರು. ಇನ್ನು ಅಲ್ಝಾರಿ ಜೋಸೆಫ್ 4 ಓವರ್‌ಗಳಲ್ಲಿ 29 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications