ಮುಂದಿನ ಐಪಿಎಲ್‌ನಲ್ಲಿ ಭಾಗವಹಿಸಲ್ಲ ಎಂದ ಬಿಲ್ಲಿಂಗ್ಸ್: ಪ್ಯಾಟ್ ಕಮ್ಮಿನ್ಸ್ ಬಗ್ಗೆಯೂ ಅನುಮಾನ!

ಐಪಿಎಲ್ ಹರಾಜು ಪ್ರಕ್ರಿಯೆಗೂ ಮುನ್ನ ಆಟಗಾರರ ಬಿಡುಗಡೆ ಹಾಗೂ ರೀಟೈನ್ ಪ್ರಕ್ರಿಯೆಗಳು ಜೋರಾಗಿ ನಡೆಯುತ್ತಿದೆ. ಮತ್ತೊಂದೆಡೆ ಕೆಲ ಆಟಗಾರರನ್ನು ಹರಾಜಿಗೂ ಮುನ್ನ ಟ್ರೇಡಿಂಗ್ ಮೂಲಕ ವಶಕ್ಕೆ ಪಡೆಯುವ ಪ್ರಯತ್ನಗಳು ಕೂಡ ಆಗುತ್ತಿವೆ. ಈ ಸಂದರ್ಭದಲ್ಲಿ ಮುಂದಿನ ಆವೃತ್ತಿಯ ಐಪಿಎಲ್‌ನಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಇಂಗ್ಲೆಂಡ್ ತಂಡದ ಆಟಗಾರ ಘೋಷಣೆ ಮಾಡಿದ್ದಾರೆ.
ಕೆಕೆಆರ್ ತಂಡದ ಭಾಗವಾಗಿದ್ದ ಇಂಗ್ಲೆಂಡ್‌ನ ಆಟಗಾರ ಸ್ಯಾಮ್ ಬಿಲ್ಲಿಂಗ್ಸ್ ಐಪಿಎಲ್ ಹರಾಜಿಗೂ ಮುನ್ನ ಮುಂದಿನ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ತಾನು ಭಾಗವಹಿಸುವುದಿಲ್ಲ ಎಂದಿದ್ದಾರೆ. ಟೆಸ್‌ಟ ಕ್ರಿಕೆಟ್ ಮೇಲೆ ಹೆಚ್ಚಿನ ಗಮನಹರಿಸುವ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವುದಾಗಿ ಸ್ಯಾಮ್ ಬಿಲ್ಲಿಂಗ್ಸ್ ಸ್ಪಷ್ಟಪಡಿಸಿದ್ದಾರೆ. ಆಟಗಾರರ ರಿಟೆನ್ಶನ್‌ಗೆ ನವೆಂಬರ್ 15 ಅಂತಿಮ ದಿನವಾಗಿದ್ದು ಅದಕ್ಕೂ ಮುನ್ನಾದಿನ ಸ್ಯಾಮ್ ಬಿಲ್ಲಿಂಗ್ಸ್ ಈ ನಿರ್ಧಾರ ಪ್ರಕಟಿಸಿದ್ದಾರೆ.
ಐಪಿಎಲ್ 2022ರ ಆವೃತ್ತಿಯಲ್ಲಿ ಸ್ಯಾಮ್ ಬಿಲ್ಲಿಂಗ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರವಾಗಿ ಕಣಕ್ಕಿಳಿದಿದ್ದರು. 2 ಕೋಟಿ ಮೂಲ ಬೆಲೆಗೆ ಸ್ಯಾಮ್ ಬಿಲ್ಲಿಂಗ್ಸ್ ಅವರನ್ನು ಕೆಕೆಆರ್ ತನ್ನ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬಿಲ್ಲಿಂಗ್ಸ್ 24ರ ಸರಾಸರಿಯಲ್ಲಿ 169 ರನ್ ಮಾತ್ರವೇ ಗಳಿಸಿದ್ದರು. 120ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ನಡೆಸಿ ಇರಾಸೆ ಮೂಡಿಸಿದ್ದರು ಬಿಲ್ಲಿಂಗ್ಸ್.
ಟ್ವೀಟ್ ಮೂಲಕ ಸ್ಯಾಮ್ ಬಿಲ್ಲಿಂಗ್ಸ್ ಸೋಮವಾರ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. "ನಾನು ಕಠಿಣ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು ಮುಂದಿನ ಐಪಿಎಲ್‌ನಲ್ಲಿ ಕೆಕೆಆ್ ಪರವಾಗಿ ಆಡುವುದರಿಂದ ಹಿಂದಕ್ಕೆ ಸರಿಯುತ್ತಿದ್ದೇನೆ. ಮುಂದಿನ ಬೇಸಿಗೆಯಲ್ಲಿ ಸುದೀರ್ಘ ಮಾದರಿಯ ಕ್ರಿಕೆಟ್‌ನ ಮೇಲೆ ಹೆಚ್ಚು ಗಮನಹರಿಸುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ ಸ್ಯಾಮ್ ಬಿಲ್ಲಿಂಗ್ಸ್. ಇನ್ನು ಕಳೆದ ಆವೃತ್ತಿಯಲ್ಲಿ ಅವಕಾಶ ನೀಡಿದ ಕೆಕೆಆರ್ ಪ್ರಾಂಚೈಸಿಗೆ ಧನ್ಯವಾದ ತಿಳಿಸಿದ್ದಾರೆ.
ಇನ್ನು ಮತ್ತೋರ್ವ ಸ್ಟಾರ್ ಆಟಗಾರ ಪ್ಯಾಟ್ ಕಮ್ಮಿನ್ಸ್ ಅವರನ್ನು ಕೆಕೆಆರ್ ಹರಾಜಿಗೆ ಬಿಡುಗಡೆ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ. ಕಳೆದ ಐಪಿಎಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದ ಪ್ಯಾಟ್ ಕಮ್ಮಿನ್ಸ್ ಇತ್ತೀಚೆಗಷ್ಟೇ ಅಂತ್ಯವಾದ ವಿಶ್ವಕಪ್‌ನಲ್ಲಿಯೂ ವೈಫಲ್ಯ ಅನುಭವಿಸಿದ್ದರು. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ಅವರನ್ನು ತಂಡದಿಂದ ಹೊರಗಿಡುವ ನಿರ್ಧಾರವನ್ನು ತೆಗೆದುಕೊಂಡಿದೆ ಎನ್ನಲಾಗಿದೆ. ಈ ಬೆಳವಣಿಗೆಯ ಮದ್ಯೆಯೆ ಪ್ಯಾಟ್ ಕಮ್ಮಿನ್ಸ್ ಕೂಡ ಮುಂದಿನ ಐಪಿಎಲ್ ಆವೃತ್ತಿಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂಬ ವರದಿಗಳು ಬರುತ್ತಿದೆ. ಈ ಬಗ್ಗೆ ಈ ಅಧಿಕೃತ ಮಾಹಿತಿ ಹೊರಬಂದಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications