For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2023: ವಿರಾಟ್ ಕೊಹ್ಲಿಯ ಟ್ರೋಫಿ ಗೆಲ್ಲುವ ಕನಸು ಈ ಬಾರಿ ನನಸಾಗಲಿದೆ: ಮಂಜ್ರೇಕರ್ ಭವಿಷ್ಯ

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯ ಆರಂಭಕ್ಕೂ ಮುನ್ನ ಆರ್‌ಸಿಬಿ ತಂಡದ ಅಭಿಮಾನಿಗಳಿಗೆ ಖುಷಿ ನೀಡುವಂತಾ ಭವಿಷ್ಯವೊಂದನ್ನು ನುಡಿದಿದ್ದಾರೆ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಸಂಜಯ್ ಮಂಜ್ರೇಕರ್. ಐಪಿಎಲ್‌ನಲ್ಲಿ ಒಮ್ಮೆಯೂ ಟ್ರೋಫಿ ಗೆಲ್ಲಲು ವಿಫಲವಾಗಿರುವ ಆರ್‌ಸಿಬಿ ತಂಡ ಈ ಬಾರಿ ಚಾಂಪಿಯನ್ ಪಟ್ಟಕ್ಕೇರಲಿದೆ ಎಂದು ಸಂಜಯ್ ಮಂಜ್ರೇಕರ್ ಹೇಳಿಕೆ ನೀಡಿದ್ದಾರೆ.

ಸಂಜಯ್ ಮಂಜ್ರೇಕರ್ ತಮ್ಮ ವಿಶ್ಲೇಷಣೆಯಲ್ಲಿ ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ವಿರಾಟ್ ಕೊಹ್ಲಿ ಟ್ರೋಫಿ ಗೆಲ್ಲಲು ಅತ್ಯುತ್ತಮ ಅವಕಾಶವನ್ನಜು ಹೊಂದಿದೆ ಎಂದಿದ್ದಾರೆ. ಆರ್‌ಸಿಬಿ ತಂಡ ಈ ಬಾರಿ ಅತ್ಯುತ್ತ ಬೌಲಿಂಗ್ ಪಡೆಯನ್ನು ಹೊಂದಿದ್ದು ಬ್ಯಾಟಿಂಗ್‌ನಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ ಪರಿಣಾಮಕಾರಿಯಾಗಿ ಪ್ರದರ್ಶನ ನೀಡಿದರೆ ಆರ್‌ಸಿಬಿ ತಂಡ ಖಂಡಿತವಾಗಿಯೂ ಈ ಬಾರಿ ಚಾಂಪಿಯನ್ ಪಟ್ಟಕ್ಕೇರಲಿದೆ ಎಂದಿದ್ದಾರೆ ಸಂಜಯ್ ಮಂಜ್ರೇಕರ್.

IPL 2023: Sanjay Manjrekar interesting prediction on Virat Kohli and RCB said dream of winning the trophy will come true

ಐಪಿಎಲ್‌ನಲ್ಲಿ ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟಿರುವ ವಿರಾಟ್ ಕೊಹ್ಲಿ ಈ ಬಾರಿಯ ಟೂರ್ನಿಗೂ ಮುನ್ನ ಉತ್ತಮ ಲಯದಲ್ಲಿರುವುದು ಸ್ಪಷ್ಟವಾಗಿದೆ. ಕಳೆದ ಆವೃತ್ತಿಯಲ್ಲಿ ಮಂಕಾಗಿದ್ದ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ನಿರೀಕ್ಷಿತ ಪ್ರಮಾಣದ ರನ್ ಹರಿದು ಬಂದಿರಲಿಲ್ಲ. ಆದರೆ ಈ ಬಾರಿಯ ಐಪಿಎಲ್ ಟೂರ್ನಿಗೂ ಮುನ್ನ ವಿರಾಟ್ ಕೊಹ್ಲಿ ಎಲ್ಲಾ ಮಾದರಿಯಲ್ಲಿಯೂ ಫಾರ್ಮ್ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದು ಐಪಿಎಲ್‌ನಲ್ಲಿ ಆರ್‌ಸಿಬಿ ಪರವಾಗಿ ಅಬ್ಬರಿಸುವ ವಿಶ್ವಾಸ ಮೂಡಿಸಿದ್ದಾರೆ.

2019ರ ಬಳಿಕ ವಿರಾಟ್ ಕೊಹ್ಲಿ ಫಾರ್ಮ್ ಕಳೆದುಕೊಂಡು ರನ್ ಬರವನ್ನು ಅನುಭವಿಸಿದ್ದರು. ಆದರೆ ಕಳೆದ ವರ್ಷ ನಡೆದ ಏಷ್ಯಾ ಕಪ್‌ನಲ್ಲಿ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನದ ವಿರುದ್ಧ ಟಿ20 ಮಾದರಿಯಲ್ಲಿ ಶತಕ ಸಿಡಿಸುವ ಮೂಲಕ ಸುದೀರ್ಘ ಕಾಲದ ಬಳಿಕ ಶತಕದ ಗಡಿದಾಟಿದ ಕೊಹ್ಲಿ ಅದಾದ ಬಳಿಕ ತಮ್ಮ ಹಿಂದಿನ ಲಯಕ್ಕೆ ಮರಳಿದ್ದರು. ಇನ್ನು ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿಯೂ ಅಮೋಘ ಪ್ರದರ್ಶನ ನೀಡಿ ಅಬ್ಬರಿಸಿದ್ದರು ವಿರಾಟ್ ಕೊಹ್ಲಿ. ಈ ಪ್ರದರ್ಶನ ಈಗ ಆರ್‌ಸಿಬಿ ತಂಡದ ಆತ್ಮವಿಶ್ವಾಸವನ್ನು ಮತ್ತಷ್ಟಿ ಹೆಚ್ಚಿಸಿದೆ.

"ಈ ಬಾರಿ ವಿರಾಟ್ ಕೊಹ್ಲಿಯ ಟ್ರೋಫಿ ಗೆಲ್ಲುವ ಕನಸು ನನಸಾಗಲಿದೆ ಎಂದು ನನಗೆ ಅನಿಸುತ್ತದೆ. ಅವರಲ್ಲಿ ಅತ್ಯುತ್ತಮವಾದ ಬೌಲಿಂಗ್ ವಿಭಾಗವಿದೆ. ಫಾಫ್ ರನ್ ಗಳಿಸಿದರೆ ಅವರಿಗೆ ಅತ್ಯುತ್ತಮವಾದ ಅವಕಾಶವಿದೆ" ಎಂದಿದ್ದಾರೆ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಸಂಜಯ್ ಮಂಜ್ರೇಕರ್. ಕಳೆದ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಪ್ಲೇಆಫ್ ಹಂತಕ್ಕೆ ಪ್ರವೇಶಿಸುವಲ್ಲಿ ಸಫಲವಾಗಿತ್ತು.

ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯ: ಇನ್ನು ಈ ಬಾರಿಯ ಅಭಿಯಾನವನ್ನು ಆರ್‌ಸಿಬಿ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಏಪ್ರಿಲ್ 1ರಂದು ಸೆಣೆಸಾಟ ನಡೆಸುವ ಮೂಲಕ ಆರಂಭಿಸಲಿದೆ. ಈ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯಲಿದ್ದು ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡ ಕ್ರಿಕೆಟ್ ಆಡಲು ಕಣಕ್ಕಿಳಿಯಲಿದೆ. ಈ ಮುಖಾಮುಖಿ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

Story first published: Thursday, March 30, 2023, 13:10 [IST]
Other articles published on Mar 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+