IPL 2023: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಈ ಸಾಧನೆ ಮಾಡಿದ 2ನೇ ಆಟಗಾರ ಶಿವಂ ದುಬೆ
ಮಂಗಳವಾರ (ಮೇ 30) ಬೆಳಗಿನ ಜಾವ ಮುಕ್ತಾಯಗೊಂಡ ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಾರ್ದಿಕ್ ಪಾಂಡ್ಯ ಸಾರಥ್ಯದ ಗುಜರಾತ್ ಟೈಟನ್ಸ್ ತಂಡದ ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು.
ಕೊನೆಯ ಎಸೆತದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿ ಸಿಎಸ್‌ಕೆ ತಂಡ ದಾಖಲೆಯ ಐದನೇ ಬಾರಿ ಟ್ರೋಫಿಯನ್ನು ಎತ್ತಿ ಹಿಡಿಯಿತು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಸರಿಗಟ್ಟಿತು.

ಆಲ್‌ರೌಂಡರ್ ರವೀಂದ್ರ ಜಡೇಜಾ ಕೊನೆಯ ಎರಡು ಎಸೆತಗಳಲ್ಲಿ 10 ರನ್ ಗಳಿಸುವ ಮೂಲಕ ಸಿಎಸ್‌ಕೆ ತಂಡದ ಗೆಲುವಿಗೆ ಬಹುಮುಖ್ಯ ಪಾತ್ರ ವಹಿಸಿದರು. ಗುಜರಾತ್ ಟೈಟನ್ಸ್ ನೀಡಿದ್ದ 215 ರನ್‌ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಮಳೆ ಬಾಧಿತ ಪಂದ್ಯದಲ್ಲಿ ಕೇವಲ 15 ಓವರ್‌ಗಳಲ್ಲಿ 171 ರನ್‌ಗಳ ಪರಿಷ್ಕೃತ ಗುರಿಯನ್ನು ಯಶಸ್ವಿಯಾಗಿ ತಲುಪಿತು.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎಡಗೈ ಬ್ಯಾಟರ್ ಶಿವಂ ದುಬೆ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಋತುವಿನಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರರ ಎಲೈಟ್ ಕ್ಲಬ್‌ನಲ್ಲಿ ಹೆಸರು ನೋಂದಾಯಿಸಿಕೊಂಡರು.
ಡೆವೊನ್ ಕಾನ್ವೇ ಮತ್ತು ರುತುರಾಜ್ ಗಾಯಕ್ವಾಡ್ ಅವರ 50 ರನ್‌ಗಳ ಪಾಲುದಾರಿಕೆ ಮತ್ತು ಶಿವಂ ದುಬೆ ಮತ್ತು ರವೀಂದ್ರ ಜಡೇಜಾ ಅವರ ಬ್ಯಾಟಿಂಗ್ ಚೆನ್ನೈ ಸೂಪರ್ ಕಿಂಗ್ಸ್ ಪ್ರಶಸ್ತಿ ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಶಿವಂ ದುಬೆ 21 ಎಸೆತಗಳಲ್ಲಿ ಅಜೇಯ 32 ರನ್ ಗಳಿಸಿ ಪ್ರಭಾವಿ ಆಟವಾಡಿದರು.

ನಿರ್ಣಾಯಕ ಫೈನಲ್ ಪಂದ್ಯದಲ್ಲಿ ನೆರವಾದ ಶಿವಂ ದುಬೆ ಹೆಚ್ಚು ಸಿಕ್ಸರ್‌ಗಳನ್ನು ಗಳಿಸಿದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ವರ್ಷದ ಐಪಿಎಲ್‌ನಲ್ಲಿ ಅವರು 35 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ಇನ್ನು ಐಪಿಎಲ್ 2023ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ಫಾಫ್ ಡು ಪ್ಲೆಸಿಸ್ 36 ಸಿಕ್ಸರ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಶುಭ್ಮನ್ ಗಿಲ್ 33 ಸಿಕ್ಸರ್ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.
ಶಿವಂ ದುಬೆ ಅವರು ಐಪಿಎಲ್ 2018ರಲ್ಲಿ 35 ಸಿಕ್ಸರ್‌ಗಳನ್ನು ಬಾರಿಸಿದ ಆಸ್ಟ್ರೇಲಿಯಾದ ದಂತಕಥೆ ಶೇನ್ ವ್ಯಾಟ್ಸನ್ ದಾಖಲೆ ಸರಿಗಟ್ಟುವ ಮೂಲಕ ಸಿಎಸ್‌ಕೆ ತಂಡದ ಪರ ಒಂದು ಋತುವಿನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಗಳಿಸಿದ ಆಟಗಾರರಾನಾದರು.

ಶಿವಂ ದುಬೆ ಅವರು 2023ರ ಐಪಿಎಲ್ ಋತುವಿನಲ್ಲಿ 16 ಪಂದ್ಯಗಳನ್ನು ಆಡಿದ್ದಾರೆ. 38.00 ಸರಾಸರಿಯೊಂದಿಗೆ 158.33ರ ಪ್ರಭಾವಶಾಲಿ ಸ್ಟ್ರೈಕ್‌ರೇಟ್‌ನಲ್ಲಿ 418 ರನ್‌ಗಳನ್ನು ಗಳಿಸಿದ್ದಾರೆ.
ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಐಪಿಎಲ್ ಸೀಸನ್ ಒಂದರಲ್ಲಿ ಭಾರತೀಯ ಆಟಗಾರನೊಬ್ಬ ಗರಿಷ್ಠ ಸಿಕ್ಸರ್ ಬಾರಿಸಿದ ದಾಖಲೆ ಹೊಂದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಪರ ಐಪಿಎಲ್ 2016ರಲ್ಲಿ 38 ಗರಿಷ್ಠ ರನ್ ಬಾರಿಸಿದ್ದರು. 2018ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಸ್ಫೋಟಕ ಬ್ಯಾಟ್ಸ್‌ಮನ್ ರಿಷಭ್ ಪಂತ್ 37 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.
2018ರಲ್ಲಿ ಸಿಎಸ್‌ಕೆ ಬ್ಯಾಟರ್ ಅಂಬಟಿ ರಾಯುಡು 34 ಸಿಕ್ಸರ್ ಬಾರಿಸಿ ನಾಲ್ಕನೇ ಸ್ಥಾನದಲ್ಲಿದ್ದರೆ, 2023ರ ಐಪಿಎಲ್‌ನಲ್ಲಿ 33 ಸಿಕ್ಸರ್ ಬಾರಿಸಿರುವ ಶುಭ್ಮನ್ ಗಿಲ್ ಭಾರತೀಯ ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications