IPL 2023: ಶ್ರೇಯಸ್ ಅಯ್ಯರ್ ಔಟ್; ಕೆಕೆಆರ್ ತಂಡಕ್ಕೆ ಈತ ನಾಯಕನಾಗುವ ಸಾಧ್ಯತೆ!

2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತು ಸಮೀಪಿಸುತ್ತಿದ್ದು, ಬಹುನಿರೀಕ್ಷಿತ ಪಂದ್ಯಾವಳಿಗಾಗಿ ಕ್ರೀಡಾಭಿಮಾನಿಗಳು ಕಾತರರಾಗಿದ್ದಾರೆ. ಮಾರ್ಚ್ 31ರಂದು ಅದ್ಧೂರಿ ಚಾಲನೆ ಸಿಗಲಿದೆ.
ಉದ್ಘಾಟನಾ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ.
ಇದೇ ವೇಳೆ ಎರಡು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಕ್ಕೆ ಐಪಿಎಲ್ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ದೊಡ್ಡ ಹೊಡೆತ ಬಿದ್ದಿದ್ದು, ನಾಯಕ ಶ್ರೇಯಸ್ ಅಯ್ಯರ್ ಗಾಯದಿಂದಾಗಿ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಶ್ರೇಯಸ್ ಅಯ್ಯರ್ ಕೆಲವು ತಿಂಗಳಿನಿಂದ ಬೆನ್ನುನೋವಿಗೆ ತುತ್ತಾಗಿದ್ದು, ಅದರೊಂದಿಗೆ ಹೋರಾಡುತ್ತಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಬೆನ್ನು ನೋವಿನಿಂದಾಗಿ ಬ್ಯಾಟಿಂಗ್‌ಗೆ ಇಳಿಯದೆ ಹೊರ ಕುಳಿತರು.
ಅಂದಿನಿಂದ ಎಲ್ಲಾ ಕ್ರಿಕೆಟ್ ಪಂದ್ಯಗಳನ್ನು ತಪ್ಪಿಸಿಕೊಂಡಿರುವ ಶ್ರೇಯಸ್ ಅಯ್ಯರ್ 2023ರ ಐಪಿಎಲ್ ಪಂದ್ಯಾವಳಿಯಿಂದ ಹೊರಗುಳಿದಿರುವ ಕಾರಣ, ಕೆಕೆಆರ್ ತಂಡದ ನಾಯಕನ ಸ್ಥಾನಕ್ಕೆ ಶೀಘ್ರದಲ್ಲೇ ಹೊಸ ಆಟಗಾರನನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಕೆಕೆಆರ್ ತಂಡಕ್ಕೆ ಸುನಿಲ್ ನರೈನ್ ನಾಯಕ?
ವೆಸ್ಟ್ ಇಂಡೀಸ್ ಆಲ್‌ರೌಂಡರ್ ಸುನಿಲ್ ನರೈನ್ ಅವರು ಹಲವು ವರ್ಷಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಆಡುತ್ತಿದ್ದಾರೆ. ತಮ್ಮ ಅಸಾಧಾರಣ ಪ್ರತಿಭೆಯಿಂದ ಅನೇಕ ಪಂದ್ಯಗಳನ್ನು ಕೆಕೆಆರ್ ತಂಡಕ್ಕೆ ಗೆಲ್ಲಿಸಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸುನಿಲ್ ನರೈನ್ ಈಗಲೂ ಅತ್ಯುತ್ತಮ ಬೌಲರ್ ಆಗಿದ್ದಾರೆ. ಅಲ್ಲದೇ ಸ್ಫೋಟಕ ಹೊಡೆತಗಳಿಂದ ತಂಡಕ್ಕೆ ರನ್ ವೇಗ ನೀಡುವ ಆಟಗಾರನಾಗಿದ್ದಾರೆ.
ಆಲ್‌ರೌಂಡರ್ ಸುನಿಲ್ ನರೈನ್ ಅವರ ವಿಶ್ವಾಸಾರ್ಹ ಪ್ರದರ್ಶನವು ಅವರನ್ನು 2023ರ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕತ್ವ ಜವಾಬ್ದಾರಿಯ ನಿರೀಕ್ಷೆಯಲ್ಲಿ ಒಬ್ಬರನ್ನಾಗಿ ಮಾಡಿದೆ.
ಸುನಿಲ್ ನರೈನ್ ಮಾತ್ರವಲ್ಲದೆ, ಕೆಕೆಆರ್ ತಂಡದ ನಾಯಕನ ರೇಸ್‌ನಲ್ಲಿ ವೆಸ್ಟ್ ಇಂಡೀಸ್‌ನ ಇನ್ನೊಬ್ಬ ಆಲ್‌ರೌಂಡರ್ ಆಂಡ್ರೆ ರಸೆಲ್ ಇದ್ದಾರೆ. ಬಹು ವರ್ಷಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಆಡುತ್ತಿರುವ ಆಂಡ್ರೆ ರಸೆಲ್ ನಾಯಕನ ಸ್ಥಾನಕ್ಕೆ ಸೂಕ್ತ ಆಟಗಾರನಾಗಿದ್ದಾರೆ.

ಇದೇ ವೇಳೆ ಕೆಕೆಆರ್ ತಂಡ ಭಾರತೀಯ ಆಟಗಾರನಿಗೆ ನಾಯಕತ್ವ ಪಟ್ಟ ಕಟ್ಟಲು ನಿರ್ಧರಿಸಿದರೂ ಆಶ್ಚರ್ಯವಿಲ್ಲ. ಆಗ ಮತ್ತೊಬ್ಬ ಆಲ್‌ರೌಂಡರ್ ನಿತೀಶ್ ರಾಣಾ ನಾಯಕನಾಗುವ ಸಾಧ್ಯತೆ ಇದೆ.
ಐಪಿಎಲ್ 2023: ಕೋಲ್ಕತ್ತಾ ನೈಟ್ ರೈಡರ್ಸ್ ಪೂರ್ಣ ತಂಡ
ಶ್ರೇಯಸ್ ಅಯ್ಯರ್ (ನಾಯಕ) (ಗಾಯದಿಂದ ಹೊರಗೆ), ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕುಲ್ ರಾಯ್, ರಿಂಕು ಸಿಂಗ್, ನಾರಾಯಣ್ ಜಗದೀಸನ್, ವೈಭವ್ ಅರೋರಾ, ಸುಯಾಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಮನ್‌ದೀಪ್ ಸಿಂಗ್, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications