IPL 2023: ಕೊಹ್ಲಿಯ ಅತಿಹೆಚ್ಚು ಐಪಿಎಲ್ ಸೀಸನ್ ರನ್ ದಾಖಲೆ ಮುರಿಯುವಲ್ಲಿ ಗಿಲ್ ವಿಫಲ!

ಇಂದು ( ಮೇ 29 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತಿದೆ.
ಎಲ್ಲಾ ಯೋಜನೆಯಂತೆ ನಡೆದಿದ್ದರೆ ನಿನ್ನೆಯೇ ಈ ಪಂದ್ಯ ಜರುಗಬೇಕಿತ್ತು. ಆದರೆ ನಿನ್ನೆ ಅಹ್ಮದಾಬಾದ್‌ನಲ್ಲಿ ಪಂದ್ಯಕ್ಕೆ ಮಳೆ ಅಡ್ಡಿಯುಂಟಾಗಿ ಪಂದ್ಯ ರದ್ದಾಗಿ ಇಂದಿಗೆ ಮುಂದೂಡಲ್ಪಟ್ಟಿತ್ತು. ಅದರಂತೆ ಇಂದು ರಿಸರ್ವ್ ಡೇನಂದು ಪಂದ್ಯ ಆರಂಭಗೊಂಡಿದ್ದು ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಫೀಲ್ಡಿಂಗ್ ಆಯ್ದುಕೊಂಡಿದ್ದು, ಎದುರಾಳಿ ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಆಹ್ವಾನಿಸದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಗುಜರಾತ್ ಟೈಟನ್ಸ್ ತಂಡದ ಪರ ಶುಬ್‌ಮನ್ ಗಿಲ್ ಹಾಗೂ ವೃದ್ಧಿಮಾನ್ ಸಹಾ ಮೊದಲು ಬ್ಯಾಟಿಂಗ್ ಮಾಡಿದರು. ವೃದ್ಧಿಮಾನ್ ಸಹಾ 39 ಎಸೆತಗಳಲ್ಲಿ 54 ರನ್ ಗಳಿಸಿದರೆ, ಶುಬ್‌ಮನ್ ಗಿಲ್ 20 ಎಸೆತಗಳಲ್ಲಿ 39 ರನ್ ಗಳಿಸಿದರು.
ಹೀಗೆ 39 ರನ್ ಗಳಿಸಿದ ಶುಬ್‌ಮನ್ ಗಿಲ್ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಸೀಸನ್‌ವೊಂದರಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ 2016ರಲ್ಲಿ ವಿರಾಟ್ ಕೊಹ್ಲಿ ದಾಖಲಿಸಿದ್ದ 973 ರನ್‌ಗಳ ಸಾರ್ವಕಾಲಿಕ ದಾಖಲೆಯನ್ನು ಮುರಿಯುವಲ್ಲಿ ಶುಬ್‌ಮನ್ ಗಿಲ್ ವಿಫಲರಾಗಿದ್ದಾರೆ.
ಕಳೆದ ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಬಾರಿಸಿದ್ದ ಶುಬ್‌ಮನ್ ಗಿಲ್ ಇಂದಿನ ಪಂದ್ಯದಲ್ಲಿಯೂ ಶತಕ ಬಾರಿಸಿದರೆ ಕೊಹ್ಲಿಯ ಈ ದಾಖಲೆಯನ್ನು ಮುರಿದು ಹಾಕುತ್ತಿದ್ದರು. ಆದರೆ ಶುಬ್‌ಮನ್ ಗಿಲ್ 39 ರನ್‌ಗಳಿಗೆ ಔಟ್ ಆಗಿದ್ದು ಕೊಹ್ಲಿ ದಾಖಲೆ ಸೇಫ್ ಆಗಿದೆ. ಇನ್ನು ಗಿಲ್ ಅತಿ ಕಿರಿಯ ವಯಸ್ಸಿನಲ್ಲಿಯೆ ಆರೆಂಜ್ ಕ್ಯಾಪ್ ಗೆದ್ದ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ..
ಐಪಿಎಲ್ ಸೀಸನ್‌ವೊಂದರಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರರು
* 2016ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 973 ರನ್ ಗಳಿಸಿದ್ದರು
* ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಶುಬ್‌ಮನ್ ಗಿಲ್ 890 ರನ್ ಗಳಿಸಿದ್ದಾರೆ.
* 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಜೋಸ್ ಬಟ್ಲರ್ 863 ರನ್ ಗಳಿಸಿದ್ದರು
* 2016ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೇವಿಡ್ ವಾರ್ನರ್ 848 ರನ್ ಗಳಿಸಿದ್ದರು.
* 2017ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೇನ್ ವಿಲಿಯಮ್ಸನ್ 735 ರನ್ ಗಳಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications