For Quick Alerts
ALLOW NOTIFICATIONS  
For Daily Alerts
 

WTC ಫೈನಲ್ ಎಫೆಕ್ಟ್; ಸಂಪೂರ್ಣ ಐಪಿಎಲ್ ಆಡುವುದಿಲ್ಲ ಈ ಸ್ಟಾರ್ ಆಟಗಾರರು!

IPL 2023: India and Australia players likely to miss few league matches due to WTC final match

ಪ್ರಸ್ತುತ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುತ್ತಿದ್ದು, ನಿನ್ನೆ ( ಏಪ್ರಿಲ್ 25 ) ನಡೆದ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ನಡುವಿನ ಪಂದ್ಯದ ಮೂಲಕ ಟೂರ್ನಿಯ ಲೀಗ್ ಹಂತದ 35 ಪಂದ್ಯಗಳು ಮುಕ್ತಾಯಗೊಂಡಿವೆ.

ಇಲ್ಲಿಯವರೆಗೂ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಎಲ್ಲಾ ತಂಡಗಳು ತಲಾ 7 ಪಂದ್ಯಗಳನ್ನು ಆಡಿ ಮುಗಿಸಿದ್ದು, ಟೂರ್ನಿ ಬಹುತೇಕ ಅರ್ಧದಷ್ಟು ಮುಕ್ತಾಯಗೊಂಡಂತಾಗಿದೆ. ಲೀಗ್ ಹಂತದಲ್ಲಿ ಇನ್ನೂ 35 ಪಂದ್ಯಗಳು ಬಾಕಿ ಇದ್ದು ಲೀಗ್ ಬಳಿಕ ಪ್ಲೇಆಫ್ ಪಂದ್ಯಗಳು ಜರುಗಲಿವೆ.

ಇನ್ನು ಲೀಗ್ ಹಂತದ ಎಲ್ಲಾ ಪಂದ್ಯಗಳು ಮುಗಿಯುವ ಮುನ್ನವೇ ಕೆಲ ಸ್ಟಾರ್ ಕ್ರಿಕೆಟಿಗರು ಟೂರ್ನಿಯಿಂದ ಹೊರನಡೆಯುವ ಸಾಧ್ಯತೆಗಳಿವೆ. ಹೌದು, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ರೀತಿಯ ಸ್ಟಾರ್ ಆಟಗಾರರು ಲೀಗ್ ಹಂತದ ಕೆಲ ಪಂದ್ಯಗಳು ಬಾಕಿ ಇರುವಾಗಲೇ ಟೂರ್ನಿಯಿಂದ ಹೊರ ಹೋಗುವ ಸಾಧ್ಯತೆಗಳಿವೆ.

ಇದಕ್ಕೆ ಕಾರಣ ಜೂನ್ ತಿಂಗಳಿನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿಯ ಮಹತ್ವದ ಫೈನಲ್ ಪಂದ್ಯ. ಹೌದು, ಜೂನ್ 7ರಿಂದ 11ರವರೆಗೆ ಲಂಡನ್‌ನ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಆವೃತ್ತಿಯ ವಿಶ್ವ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಜರುಗಲಿದೆ. ಇದು ಪ್ರತಿಷ್ಠಿತ ಪಂದ್ಯವಾಗಿರುವ ಕಾರಣ ಒಂದುವೇಳೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಿರುವ ಆಟಗಾರರು ತಮ್ಮ ತಂಡ ಪ್ಲೇಆಫ್ ರೇಸ್‌ನಿಂದ ಬೇಗನೆ ಹೊರಬಿದ್ದರೆ ಲೀಗ್ ಹಂತ ಸಂಪೂರ್ಣವಾಗಿ ಮುಗಿಯುವ ಮುನ್ನವೇ ವಿಶ್ವ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆಯಾಗಿರುವ ಕೆಲ ಆಟಗಾರರು ತಾಲೀಮಿಗಾಗಿ ಟೂರ್ನಿಯಿಂದ ಹೊರಗುಳಿಯಬಹುದು.

ಇನ್ನು ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಅರ್ಹತೆ ಪಡೆದುಕೊಂಡಿದ್ದು, ಪ್ಲೇಆಫ್ ಅವಕಾಶ ಇಲ್ಲವೇ ಇಲ್ಲ ಎಂದಾದಲ್ಲಿ ಲೀಗ್ ಹಂತದ ಕೆಲ ಪಂದ್ಯಗಳು ಬಾಕಿ ಇರುವಾಗಲೇ ಟೀಮ್ ಇಂಡಿಯಾದ ಪ್ರಮುಖ ಸ್ಟಾರ್ ಆಟಗಾರರು ಹೊರಗುಳಿಯಲಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾ ಪರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆಡಲಿರುವ ನಾಲ್ವರು ಮಾತ್ರ ಐಪಿಎಲ್‌ನಲ್ಲಿ ಇದ್ದು ಅವರೂ ಸಹ ಇಂತಹ ಪ್ರಮೇಯದಲ್ಲಿ ಟೂರ್ನಿಯಿಂದ ಹೊರನಡೆಯುವ ಸಾಧ್ಯತೆಗಳಿವೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಈಗಾಗಲೇ ಎರಡೂ ತಂಡಗಳೂ ಪ್ರಕಟವಾಗಿದ್ದು, ಯಾವ ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಹಾಗೂ ಜಯದೇವ್ ಉನದ್ಕತ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಹ್ಯಾಜಲ್ವುಡ್, ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ರೀನ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ನಾಥನ್ ಲಿಯಾನ್, ಮಿಚೆಲ್ ಮಾರ್ಷ್ , ಮ್ಯಾಟ್ ರೆನ್ಶಾ, ಟಾಡ್ ಮರ್ಫಿ.

Story first published: Wednesday, April 26, 2023, 18:34 [IST]
Other articles published on Apr 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+