ಐಪಿಎಲ್ 2023: ಸೌರವ್ ಗಂಗೂಲಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ದೊಡ್ಡ ಜವಾಬ್ಧಾರಿ: ಅಧಿಕೃತ ಘೋಷಣೆ

ಬಿಸಿಸಿಐ ಅಧ್ಯಕ್ಷರಾಗಿದ್ದ ಮಾಜಿ ನಾಯಕ ಸೌರವ್ ಗಂಗೂಲಿ ಮತ್ತೆ ಐಪಿಎಲ್‌ನಲ್ಲಿ ಮ್ಯಾನೇಜ್‌ಮೆಂಟ್ ಹುದ್ದೆಯನ್ನು ನಿರ್ವಹಿಸಲು ಸಜ್ಜಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಸೌರವ್ ಗಂಗೂಲಿ ಅವರನ್ನು ಕ್ರಿಕೆಟ್ ನಿರ್ದೇಶಕನನ್ನಾಗಿ ನೇಮಿಸಿದ್ದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ಕೇವಲ ಐಪಿಎಲ್ ಮಾತ್ರವಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಎಲ್ಲಾ ತಂಡಗಳಿಗೂ ಸೌರವ್ ಗಂಗೂಲಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಡಬ್ಲ್ಯುಪಿಎಲ್‌ನಲ್ಲಿ ತಂಡವನ್ನು ಹೊಂದಿದ್ದು, ಎಸ್‌ಎ ಟಿ20 ಟೂರ್ನಿಯಲ್ಲಿ ಪ್ರಿಟೋರಿಯ ಕ್ಯಾಪಿಟಲ್ಸ್ ಹಾಗೂ ಐಎಲ್‌ಟಿ20ಯಲ್ಲಿ ದುಬೈ ಕ್ಯಾಪಿಟಲ್ಸ್ ತಂಡಗಳನ್ನು ಹೊಂದಿದೆ.
ಕ್ರಿಕೆಟ್‌ನಲ್ಲಿ ಆಟಗಾರನಾಗಿ ನಾಯಕನಾಗಿ ಮಾತ್ರವಲ್ಲದೆ ಬಿಸಿಸಿಐ ಅಧ್ಯಕ್ಷ ಸ್ಥಾನದಂಥಾ ದೊಡ್ಡ ಹುದ್ದೆಯನ್ನು ನಿರ್ವಹಿಸಿರುವ ಸೌರವ್ ಗಂಗೂಲಿ ಅಪಾರ ಅನುಭವ ಹೊಂದಿದ್ದಾರೆ. ಈ ಅನುಭವವನ್ನು ಡೆಲ್ಲಿ ಕ್ಯಾಪಿಟಲ್ಸ್ ಬಳಸಿಕೊಳ್ಳಲಿದ್ದು ಇದರಿಂದಾಗಿ ತಂಡದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಸೌರವ್ ಗಂಗೂಲಿ ಅವರನ್ನು ಈ ಸ್ಥಾನಕ್ಕೆ ನೇಮಿಸುವ ಮೂಲಕ ಮುಂದಿನ ಆವೃತ್ತಿಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಹೆಜ್ಜೆಯಿಟ್ಟಂತಾಗಿದೆ.
ಇನ್ನು ಸೌರವ್ ಗಂಗೂಲಿ ಇದಕ್ಕೂ ಮುನ್ನವೂ 2019ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೆಂಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಜೊತೆಗೆ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಅನುಭವವೂ ಗಂಗೂಲಿಗೆ ಇದೆ.
ಇನ್ನು ಈ ನೇಮಕದ ಬಳಿಕ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗೆ ಮರಳುತ್ತಿರುವುದಕ್ಕೆ ಉತ್ಸುಕನಾಗಿದ್ದೇನೆ ಎಂದಿದ್ದಾರೆ. "ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳುತ್ತಿರುವುದು ನನಗೆ ಬಹಳ ಖುಷಿ ನೀಡಿದೆ. ಕಳೆದ ಕೆಲ ತಿಂಗಳಿನಿಂದ ಮಹಿಳಾ ತಂಡ ಹಾಗೂ ಪ್ರಿಟೋರಿಯಾ ಕ್ಯಾಪಿಟಲ್ಸ ಜೊತೆಗೆ ಉತ್ತಮ ಸಮಯವನ್ನು ಕಳೆದಿದ್ದೇನೆ. ಈಗ ಮುಂಬರುವ ಐಪಿಎಲ್ ಆವೃತ್ತಿಗಾಗಿ ಎದುರುನೋಡುತ್ತಿದ್ದೇನೆ" ಎಂದಿದ್ದಾರೆ ಸೌರವ್ ಗಂಗೂಲಿ.
ಡೆಲ್ಲಿ ತಂಡಕ್ಕೆ ವಾರ್ನರ್ ನಾಯಕ: ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಮತ್ತೊಂದು ಪ್ರಮುಖ ಘೋಷಣೆಯನ್ನು ಕೂಡ ಮಾಡಿದ್ದು ನಾಯಕನನ್ನಾಗಿ ಡೇವಿಡ್ ವಾರ್ನರ್ ಅವರನ್ನು ನೇಮಿಸಿದೆ. ಖಾಯಂ ನಾಯಕ ರಿಷಭ್ ಪಂತ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರಣ ಈ ಬಾರಿಯ ಐಪಿಎಲ್‌ನಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಹೀಗಾಗಿ ವಾರ್ನರ್ ಡಿಸಿ ತಂಡದ ನಾಯಕನಾಗಿ ನೇಮಕಗೊಂಡಿದ್ದಾರೆ. ಇನ್ನು ಆಲ್‌ರೌಮಡರ್ ಅಕ್ಷರ್ ಪಟೇಲ್ ಅವರನ್ನು ಉಪನಾಯಕನನ್ನಾಗಿ ನೇಮಕವಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications