IPL 2023: ಐಪಿಎಲ್‌ನ ಆರಂಭಿಕ ಪಂದ್ಯಗಳಿಗೆ ಗೈರಾಗಲಿದ್ದಾರೆ ದಕ್ಷಿಣ ಆಫ್ರಿಕಾ ಆಟಗಾರರು

ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಎಲ್ಲಾ ಫ್ರಾಂಚೈಸಿಗಳು ಈಗಾಗಲೇ ಸಿದ್ಧತೆ ಆರಂಭಿಸಿವೆ. ದಕ್ಷಿಣ ಆಫ್ರಿಕಾದ ಆಟಗಾರರು ಐಪಿಎಲ್‌ನಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಬಹುತೇಕ ಎಲ್ಲಾ ತಂಡಗಳಲ್ಲಿ ದಕ್ಷಿಣ ಆಫ್ರಿಕಾ ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ.
ಇದೀಗ ಬಂದಿರುವ ಮಾಹಿತಿಯ ಪ್ರಕಾರ ದಕ್ಷಿಣ ಆಫ್ರಿಕಾ ತಂಡದ ಆಟಗಾರರು ಐಪಿಎಲ್‌ನ ಆರಂಭಿಕ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ಸರಣಿಯ ಎರಡು ಪಂದ್ಯಗಳು ಮಾರ್ಚ್ 31 ಮತ್ತು ಏಪ್ರಿಲ್ 2ರಂದು ನಡೆಯಲಿದ್ದು, ಈ ಪಂದ್ಯಗಳ ಬಳಿಕವಷ್ಟೇ ಐಪಿಎಲ್‌ನಲ್ಲಿ ಆಡಲು ಭಾರತಕ್ಕೆ ಪ್ರಯಾಣ ಮಾಡಲಿದ್ದಾರೆ.
ಇದರೊಂದಿಗೆ ಕಗಿಸೊ ರಬಾಡ, ಅನ್ರಿಚ್ ನೋಕಿಯಾ, ಡೇವಿಡ್ ಮಿಲ್ಲರ್, ಏಡೆನ್ ಮಾರ್ಕ್ರಾಮ್ ಸೇರಿದಂತೆ ಪ್ರಮುಖ ಆಟಗಾರರು ಐಪಿಎಲ್‌ನ ಆರಂಭದ ಕೆಲವು ಪಂದ್ಯಗಳನ್ನು ಕಳೆದುಕೊಳ್ಳುವುದು ಖಚಿತವಾಗಿದೆ. ಸನ್‌ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ಮೇಲೆ ಆಟಗಾರರ ಅನುಪಸ್ಥಿತಿ ಹೆಚ್ಚಿನದಾಗಿ ಕಾಡಲಿದೆ.
ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿ ಮಾಡಿರುವ ಪ್ರಕಾರ, ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿರುವ ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ಸರಣಿಗೆ ತಂಡದ ಎಲ್ಲಾ ಪ್ರಮುಖ ಆಟಗಾರರು ಲಭ್ಯವಿರಬೇಕು ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ಈಗಾಗಲೇ ಬಿಸಿಸಿಗೆ ಮಾಹಿತಿ ನೀಡಿದೆ.

ಗೆದ್ದರೆ ಮಾತ್ರ ಏಕದಿನ ವಿಶ್ವಕಪ್‌ಗೆ ಅರ್ಹತೆ
ದಕ್ಷಿಣ ಆಫ್ರಿಕಾ ತಂಡಕ್ಕೆ ನೆದರ್ಲ್ಯಾಂಡ್ಸ್ ವಿರುದ್ಧದ ಸರಣಿ ಬಹಳ ಮುಖ್ಯವಾಗಿದೆ. ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆಯಬೇಕೆಂದರೆ ದಕ್ಷಿಣ ಆಫ್ರಿಕಾ ನೆದರ್ಲ್ಯಾಂಡ್ಸ್ ವಿರುದ್ಧದ ಎರಡೂ ಪಂದ್ಯಗಳನ್ನು ಗೆಲ್ಲಲೇಬೇಕಿದೆ.
ಅಗ್ರ 8 ತಂಡಗಳು ಏಕದಿನ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆಯಲಿದ್ದು, ಉಳಿದ 5 ತಂಡಗಳು ಅಸೋಸಿಯೇಟ್ ದೇಶಗಳ ಜೊತೆ ಸ್ಪರ್ಧಿಸುವ ಮೂಲಕ ವಿಶ್ವಕಪ್‌ಗೆ ಅರ್ಹತೆ ಪಡೆಯಬೇಕಾಗುತ್ತದೆ. ದಕ್ಷಿಣ ಆಫ್ರಿಕಾ ಸದ್ಯ 9ನೇ ಸ್ಥಾನದಲ್ಲಿದೆ.
ಮಾರ್ಚ್ 31 ರಂದು ಮೊದಲನೇ ಪಂದ್ಯ ಬೆನೋನಿಯಲ್ಲಿ ನಡೆಯಲಿದ್ದು, ಏಪ್ರಿಲ್ 2ರಂದು ಕೊನೆಯ ಪಂದ್ಯ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ನೆದರ್ಲ್ಯಾಂಡ್ಸ್ ಈಗಾಗಲೇ ಬಲಿಷ್ಠ ತಂಡವನ್ನು ಪ್ರಕಟಿಸಿದೆ.

ಬಿಸಿಸಿಐಗೆ ದಕ್ಷಿಣ ಆಫ್ರಿಕಾ ಮಾಹಿತಿ
ಆಟಗಾರರ ಅಲಭ್ಯತೆ ಬಗ್ಗೆ ಕ್ರಿಕೆಟ್ ದಕ್ಷಿಣ ಆಫ್ರಿಕಾ ಈಗಾಗಲೇ ಬಿಸಿಸಿಐಗೆ ಮಾಹಿತಿ ನೀಡಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ಸರಣಿ ತಮಗೆ ಎಷ್ಟು ಮುಖ್ಯ ಎನ್ನುವುದನ್ನು ಅದು ಬಿಸಿಸಿಐಗೆ ಮನವರಿಗೆ ಮಾಡಿಕೊಟ್ಟಿದೆ. ಏಕದಿನ ಸರಣಿ ಮುಕ್ತಾಯದ ಬಳಿಕ ಏಪ್ರಿಲ್ 4ರಂದು ದಕ್ಷಿಣ ಆಫ್ರಿಕಾ ಕ್ರಿಕೆಟಿಗರು ಭಾರತಕ್ಕೆ ಪ್ರಯಾಣಿಸಲಿದ್ದಾರೆ ಎಂದು ಮಾಹಿತಿ ನೀಡಿದೆ.
ನೆದರ್ಲ್ಯಾಂಡ್ಸ್ ವಿರುದ್ಧ ಏಕದಿನ ಸರಣಿಗಾಗಿ ತಂಡದಲ್ಲಿ ಸ್ಥಾನ ಪಡೆಯುವ ಆಟಗಾರರಿಗೆ ಈ ನಿಯಮ ಅನ್ವಯವಾಗಲಿದೆ. ಉಳಿದ ಆಟಗಾರರು ಐಪಿಎಲ್ ಆರಂಭಕ್ಕೆ ಮುನ್ನವೇ ಭಾರತಕ್ಕೆ ಪ್ರಯಾಣಿಸಲಿದ್ದು ಮೊದಲನೇ ಪಂದ್ಯದಿಂದಲೇ ಕಣಕ್ಕಿಳಿಯಲಿದ್ದಾರೆ.

ಈ ಪ್ರಮುಖ ಆಟಗಾರರು ಅಲಭ್ಯ
ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಮಾರ್ಕೊ ಜಾನ್ಸೆನ್ (ಸನ್‌ರೈಸರ್ಸ್ ಹೈದರಾಬಾದ್), ಅನ್ರಿಕ್ ನೊಕಿಯಾ, ಲುಂಗಿ ಎನ್‌ಗಿಡಿ (ಡೆಲ್ಲಿ ಕ್ಯಾಪಿಟಲ್ಸ್), ಟ್ರಿಸ್ಟನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್ (ಮುಂಬೈ ಇಂಡಿಯನ್ಸ್), ಡೇವಿಡ್ ಮಿಲ್ಲರ್ (ಗುಜರಾತ್ ಜೈಂಟ್ಸ್), ಕ್ವಿಂಟನ್ ಡಿ ಕಾಕ್ (ಲಕ್ನೋ ಸೂಪರ್ ಜೈಂಟ್ಸ್), ಕಗಿಸೊ ರಬಾಡ (ಪಂಜಾಬ್ ಸೂಪರ್ ಕಿಂಗ್ಸ್) ಪ್ರಮುಖ ಆಟಗಾರರು ಅಲಭ್ಯವಾಗಲಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಏಡೆನ್ ಮಾರ್ಕ್ರಾಮ್ ನಾಯಕರಾಗಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್‌ನ ಮೊದಲ ಪಂದ್ಯಕ್ಕೆ ಮಾರ್ಕ್ರಾಮ್ ಗೈರಾಗುವುದು ಖಚಿತವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications