Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಸನ್‌ರೈಸರ್ಸ್‌ಗೆ ಆಘಾತ: ಟೂರ್ನಿಯಿಂದ ಹೊರಬಿದ್ದ ವಾಶಿಂಗ್ಟನ್ ಸುಂದರ್!

ಸೋಲಿನ ಸುಳಿಯಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ದೊಡ್ಡ ಆಘಾತವೊಂದು ಉಂಟಾಗಿದೆ. ತಂಡದ ಪ್ರಮುಖ ಆಲ್‌ರೌಂಡರ್ ಆಟಗಾರ ವಾಶಿಂಗ್ಟನ್ ಸುಂದರ್ ಐಪಿಎಲ್‌ನ ಉಳೀದ ಭಾಗದಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಸುಂದರ್ ಗಾಯಕ್ಕೆ ತುತ್ತಾಗಿರುವ ಕಾರಣ ಐಪಿಎಲ್‌ನಿಂದ ಹೊರಗುಳಿಯಬೇಕಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಸನ್‌ರೈಡರ್ಸ್ ಹೈದರಾಬಾದ್ ತಂಡ ಉತ್ತಮ ಪ್ರದರ್ಶನ ನೀಡಲು ವಿಫಲವಾಗುತ್ತಿದೆ. ಇಂಥಾ ಸಂದರ್ಭದಲ್ಲಿ ತಂಡದ ಪ್ರಮುಖ ಸ್ಪಿನ್ನರ್ ಕೂಡ ಆಡಿರುವ ಸುಂದರ್ ಗಾಯದಿಂದ ಹೊರಗುಳಿಯುತ್ತಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿರುವುದಲ್ಲಿ ಅನುಮಾನವಿಲ್ಲ. ಬೌಲಿಂಗ್‌ನ ಜೊತೆಗೆ ಬ್ಯಾಟಿಂಗ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯಹೊಂದಿರುವ ಸುಂದರ್ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬ್ಯಾಟಿಂಗ್‌ನಲ್ಲಿ ಹೋರಾಟದ ಪ್ರದರ್ಶನ ನೀಡಿ ಗಮನಸೆಳೆದಿದ್ದರು.

IPL 2023: SRH all-rounder Washington Sundar ruled out of IPL 2023 due to hamstring injury

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸುಂದರ್ ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ ಬೌಲಿಂಗ್‌ನಲ್ಲಿಯೂ ಅಮೋಘ ಪ್ರದರ್ಶನ ನೀಡಿದ್ದರು. ತಮ್ಮ ನಾಲ್ಕು ಓವರ್‌ಗಳ ಕೋಟಾದಲ್ಲಿ ಸುಂದರ್ ಕೇವಲ 28 ರನ್‌ಗಳನ್ನು ನೀಡಿ 3 ವಿಕೆಟ್ ಪಡೆದುಕೊಂಡಿದ್ದರು. ಈ ಮೂಲಕ ಎಸ್‌ಆರ್‌ಹೆಚ್ ತಂಡಕ್ಕೆ ಬೌಲಿಂಗ್‌ನಲ್ಲಿ ಬಲ ನೀಡಿದ್ದರು. ಇದೀಗ ಅವರು ಗಾಯಕ್ಕೆ ತುತ್ತಾಗಿರುವ ಕಾರಣ ಮುಂದಿನ ಪಂದ್ಯಗಳಿಗೆ ಅಲಭ್ಯವಾಗಿದ್ದಾರೆ.

ವಾಶೀಂಗ್ಟನ್ ಸುಂದರ್ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅವರ ಚೇತರಿಕೆಗೆ ಹಚ್ಚಿನ ಕಾಲಾವಕಾಶದ ಅಗತ್ಯವಿರುವ ಕಾರಣ ಸಂಪೂರ್ಣ ಟೂರ್ನಿಯಿಂದ ಅವರು ಹೊರಗುಳಿಯುವುದು ಅನಿವಾರ್ಯವಾಗಿದೆ. ಸೂಂದರ್ ಈ ಹಿಂದೆಯೂ ಅನೇಕ ಸಂದರ್ಭಗಳಲ್ಲಿ ಗಾಯದಿಂದಾಗಿ ಕೆಲ ಪ್ರಮುಖ ಟೂರ್ನಿಗಳನ್ನು ಕೂಡ ಕಳೆದುಕೊಂಡಿದ್ದರು.

ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಸತತ ಸೋಲು ಅನುಭವಿಸಿದ್ದು ಹೀನಾಯ ಸ್ಥಿತಿಯಲ್ಲಿದೆ. ಆಡಿರುವ 7 ಪಂದ್ಯಗಳಲ್ಲಿ ಎಸ್‌ಆರ್‌ಹೆಚ್ ತಂಡ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರವೇ ಗೆದ್ದಿದ್ದು ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ ಐಡೆನ್ ಮಾರ್ಕ್ರಮ್ ನೇತೃತ್ವದ ಎಸ್‌ಆರ್‌ಹೆಚ್ ತಂಡ.

ಸನ್‌ರೈಸರ್ಸ್ ಹೈದರಾಬಾದ್: ಐಡೆನ್ ಮಾರ್ಕ್ರಾಮ್ (ನಾಯಕ), ಮಯಾಂಕ್ ಅಗರ್ವಾಲ್, ಅಬ್ದುಲ್ ಸಮದ್, ಅನ್ಮೋಲ್ಪ್ರೀತ್ ಸಿಂಗ್, ಹ್ಯಾರಿ ಬ್ರೂಕ್, ನಿತೀಶ್ ರೆಡ್ಡಿ, ರಾಹುಲ್ ತ್ರಿಪಾಠಿ, ಸಮರ್ಥ ವ್ಯಾಸ್, ಸನ್ವಿರ್ ಸಿಂಗ್, ವಿವ್ರಾಂತ್ ಶರ್ಮಾ, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಗ್ಲೆನ್ ಫಿಲಿಪ್ಸ್, ಉಪೇಂದ್ರ ಯಾದವ್, ಅಕೇಲ್ ಹೊಸೈನ್, ಮಯಾಂಕ್ ದಾಗರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್, ಆದಿಲ್ ರಶೀದ್, ಉಮ್ರಾನ್ ಮಲಿಕ್

Story first published: Thursday, April 27, 2023, 11:29 [IST]
Other articles published on Apr 27, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+