Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆರ್‌ಸಿಬಿ ಪ್ಲೇಆಫ್ ಆಸೆಗೆ ಮುಳುವಾಗುತ್ತಾ ಹೈದರಾಬಾದ್? 8 ಬಾರಿ ಆರ್‌ಸಿಬಿಗೆ ಎಸ್‌ಆರ್‌ಎಚ್ ಪೆಟ್ಟು!

IPL 2023: SRH destroys Royal Challengers Bangalores playoff chances several times

ಸದ್ಯ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುತ್ತಿದ್ದು, ಇಂದು ( ಮೇ 18 ) ನಡೆಯಲಿರುವ 65ನೇ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.

ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡುವ ಅವಕಾಶವನ್ನು ಈಗಾಗಲೇ ಕೈತಪ್ಪಿಸಿಕೊಂಡಿದ್ದು, ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಆಸೆಗೂ ತಣ್ಣೀರೆರಚುವ ಸಾಧ್ಯತೆಯಿದೆ.

ಹೌದು, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಉಳಿದೆರಡು ಪಂದ್ಯಗಳಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದರೆ ಮಾತ್ರ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆದುಕೊಳ್ಳಲಿದೆ.

ಹೀಗಾಗಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯವನ್ನು ಆರ್‌ಸಿಬಿ ಕಡ್ಡಾಯವಾಗಿ ಗೆಲ್ಲಬೇಕಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶಿಸಲು ನಿರ್ಣಾಯಕ ಪಂದ್ಯಗಳನ್ನು ಈ ಹಿಂದೆ ಆಡಿದ್ದಾಗ ಹಾಗೂ ಪ್ರಮುಖ ಪಂದ್ಯಗಳಲ್ಲಿ ಕಣಕ್ಕಿಳಿದಾಗಲೆಲ್ಲಾ ಸನ್ ರೈಸರ್ಸ್ ಹೈದರಾಬಾದ್ ಎದುರು ಸೋತಿದೆ. ಬರೋಬ್ಬರಿ 8 ಬಾರಿ ಇಂತಹ ಪಂದ್ಯಗಳು ಜರುಗಿದ್ದು, ಈ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

* ಮೊದಲನೆಯದಾಗಿ 2009ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಡೆಕ್ಕನ್ ಚಾರ್ಜರ್ಸ್ ತಂಡ ಸೋಲಿಸಿ ತಾನು ಚಾಂಪಿಯನ್ ಆಗಿ ಆರ್‌ಸಿಬಿಗೆ ಹಿನ್ನಡೆ ಉಂಟುಮಾಡಿತ್ತು.

* 2012ರಲ್ಲಿ ನಡೆದಿದ್ದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಕ್ಕನ್ ಚಾರ್ಜರ್ಸ್ ವಿರುದ್ಧ ಸೋತು ಸರಿಯಾದ ನೆಟ್ ರನ್ ರೇಟ್ ಇಲ್ಲದ ಕಾರಣ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಳ್ಳಲಾಗದೇ ಪ್ಲೇಆಫ್ ಪ್ರವೇಶಿಸದೇ ಟೂರ್ನಿಯಿಂದ ಹೊರಬಿದ್ದಿತ್ತು.

* 2013ರಲ್ಲಿ ಆರ್‌ಸಿಬಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು. ಆದರೆ ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಿದ್ದ ಸನ್ ರೈಸರ್ಸ್ ಹೈದರಾಬಾದ್ ಆ ಪಂದ್ಯದಲ್ಲಿ ಗೆದ್ದು ತಾನು ನಾಲ್ಕನೇ ಸ್ಥಾನಕ್ಕೇರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಿಂದ ಹೊರಬೀಳಲು ಕಾರಣವಾಗಿತ್ತು.

* 2015ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತನ್ನ ಕೊನಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿತ್ತು. ಇದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಿಂದ ವಂಚಿತವಾಗಿತ್ತು.

* 2016ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ 8 ರನ್‌ಗಳ ಅಂತರದಿಂದ ಗೆದ್ದು ಚಾಂಪಿಯನ್ ಆಗಿತ್ತು. ಈ ಮೂಲಕ ಎರಡನೇ ಬಾರಿಗೆ ಫೈನಲ್‌ನಲ್ಲಿ ಆರ್‌ಸಿಬಿಗೆ ಸನ್ ರೈಸರ್ಸ್ ಕಂಟಕವಾಗಿತ್ತು.

* 2020ರ ಐಪಿಎಲ್‌ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಗೆದ್ದು, ಆರ್‌ಸಿಬಿ ಟೂರ್ನಿಯಿಂದ ಹೊರಬಿದ್ದಿತ್ತು.

* 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 4 ರನ್‌ಗಳ ಅಂತರದಿಂದ ಸೋಲಿಸಿದ್ದ ಸನ್ ರೈಸರ್ಸ್ ಹೈದರಾಬಾದ್ ಆರ್‌ಸಿಬಿ ಎರಡನೇ ಸ್ಥಾನಕ್ಕೇರುವುದಕ್ಕೆ ಕಂಟಕವಾಗಿತ್ತು.

* ಇನ್ನು ಕಳೆದ ಬಾರಿಯ ಇಂಡಿಯಲ್ಲಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸನ್ ರೈಸರ್ಸ್ ಹೈದರಾಬಾದ್ 68 ರನ್‌ಗಳಿಗೆ ಆಲ್‌ಔಟ್ ಮಾಡಿತ್ತು.

ಹೀಗೆ ಮಹತ್ವದ ಪಂದ್ಯಗಳಲ್ಲೆಲ್ಲಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸನ್ ರೈಸರ್ಸ್ ಹೈದರಾಬಾದ್ ಕಂಟಕವಾಗಿದೆ.

Story first published: Thursday, May 18, 2023, 17:16 [IST]
Other articles published on May 18, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+