For Quick Alerts
ALLOW NOTIFICATIONS  
For Daily Alerts
 

SRH vs MI: ಟಿ20 ಕ್ರಿಕೆಟ್‌ನಲ್ಲಿ 4000 ರನ್ ಪೂರೈಸಿದ ಮುಂಬೈ ಇಂಡಿಯನ್ಸ್ ಬ್ಯಾಟರ್ ಇಶಾನ್ ಕಿಶನ್

ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ಇಶಾನ್ ಕಿಶನ್ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ಇಶಾನ್ ಕಿಶನ್ ಟಿ20 ಕ್ರಿಕೆಟ್‌ನಲ್ಲಿ 4000 ರನ್‌ಗಳನ್ನು ಗಳಿಸಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಇಶಾನ್ ಈ ಸಾಧನೆ ಮಾಡಿದರು.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್ 31 ಎಸೆತಗಳನ್ನು ಎದುರಿಸಿ 38 ರನ್‌ಗಳಿಸಿದರು. ಮೂರು ಬೌಂಡರಿ ಹಾಗೂ ಮೂರು ಸಿಕ್ಸರ್ ಬಾರಿಸಿದ ಇಶಾನ್ ಕಿಶನ್ ಬಳಿಕ ಮಾರ್ಕೋ ಜಾನ್ಸನ್‌ಗೆ ವಿಕೆಟ್ ಒಪ್ಪಿಸಿದರು. ಐಡೆನ್ ಮಾರ್ಕ್ರಮ್ ಹಿಡಿದ ಅದ್ಭುತ ಕ್ಯಾಚ್‌ಗೆ ಇಶಾನ್ ವಿಕೆಟ್ ಕಳೆದುಕೊಳ್ಳಬೇಕಾಯಿತು.

IPL 2023, SRH vs MI: Ishan Kishan completed 4000 runs in T20 cricket

ಇನ್ನು ಟಿ20 ಕ್ರಿಕೆಟ್‌ನಲ್ಲಿ ಭಾರತದ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಸುರೇಶ್ ರೈನಾ, ರಾಬಿನ್ ಉತ್ತಪ್ಪ, ಎಂಎಸ್ ಧೋನಿ, ದಿನೇಶ್ ಕಾರ್ತಿಕ್, ಕೆಎಲ್ ರಾಹುಲ್, ಮನೀಷ್ ಪಾಂಡೆ, ಗೌತಮ್ ಗಂಭೀರ್, ಸೂರ್ಯಕುಮಾರ್ ಯಾದವ್, ಅಂಬಟಿ ರಾಯುಡು, ಸಂಜು ಸ್ಯಾಮ್ಸನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಯೂಸುಫ್ ಪಠಾಣ್, ರಿಷಭ್ ಪಂತ್, ಪಾರ್ಥಿವ್ ಪಟೇಲ್, ಮುರಳಿ ವಿಜಯ್, ವೃದ್ಧಿಮಾನ್ ಸಹಾ, ವೀರೇಂದ್ರ ಸೆಹ್ವಾಗ್, ಹಾರ್ದಿಕ್ ಪಾಂಡ್ಯ ಮತ್ತು ನಿತೀಶ್ ರಾಣಾ 4000 ರನ್‌ ಗಳಿಸಿದ ಇತರ ಭಾರತೀಯ ಬ್ಯಾಟರ್‌ಗಳಾಗಿದ್ದಾರೆ.

ಇನ್ನು ಈ ಬಾರಿಯ ಐಪಿಎಲ್‌ನಲ್ಲಿ ಈವರೆಗಿನ ಪಂದ್ಯಗಳಲ್ಲಿ ಇಶಾನ್ ಕಿಶನ್ ಸ್ಥಿರ ಪ್ರದರ್ಶನ ನೀಡಲು ವಿಫಲವಾಗಿದ್ದಾರೆ. ನಿತೀಶ್ ರಾಣಾ ನಾಯಕತ್ವದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿ ಅಬ್ಬರಿಸಿದ್ದ ಇಶಾನ್ ಅದಕ್ಕೂ ಹಿಂದಿನ ಪಂದ್ಯಗಳಲ್ಲಿ ಅಲ್ಪ ಮೊತ್ತಕ್ಕೆ ಔಟಾಗಿದ್ದರು.

ಇನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು 38 ರನ್‌ಗಳ ಕೊಡುಗೆ ನೀಡಿದರಾದರೂ ಇದಕ್ಕಾಗಿ 31 ಎಸೆತಗಳನ್ನು ಎದುರಿಸಿದ ಅವರು ಸ್ಟ್ರೈಕ್‌ರೇಟ್‌ನಲ್ಲಿ ಹಿಂದೆ ಬಿದ್ದಿದ್ದಾರೆ. ಹೀಗಾಗಿ ಮುಂಬೈ ಇಂಡಿಯನ್ಸ್ ಆರಂಭದಲ್ಲಿ ಅಂದುಕೊಂಡ ವೇಗದಲ್ಲಿ ಬ್ಯಾಟಿಂಗ್ ನಡೆಸಲು ವಿಫಲವಾಯಿತು. ಆದರೆ ಕ್ಯಾಮರೂನ್ ಗ್ರೀನ್ ಹಾಗೂ ತಿಲಕ್ ವರ್ಮಾ ಅವರ ಅದ್ಭುತ ಪ್ರದರ್ಶನದಿಂದಾಗಿ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್ ಕಳೆದುಕೊಂಡು 195 ರನ್‌ಗಳನ್ನು ಗಳಿಸಲು ಶಕ್ತವಾಯಿತು.

ಇನ್ನು ಈ ಬಾರಿಯ ಐಪಿಎಲ್‌ನಲ್ಲಿ ಇಶಾನ್ ಕಿಶನ್ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ. ಮುಂಬೈ ಇಮಡಿಯನ್ಸ್ ಪರವಾಗಿ ಭರವಸೆಯ ಪ್ರದರ್ಶನ ನಿಡುತ್ತಿರುವ ತಿಲಕ್ ವರ್ಮಾ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆಡಿರುವ ಐದು ಪಂದ್ಯಗಳಲ್ಲಿ ಇಶಾನ್ ಕಿಶನ್ 33.80 ಸರಾಸರಿಯಲ್ಲಿ 160 ರನ್‌ಗಳನ್ನು ಗಳಿಸಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ: ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಕ್ಯಾಮೆರಾನ್ ಗ್ರೀನ್, ಅರ್ಜುನ್ ತೆಂಡೂಲ್ಕರ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್

Story first published: Tuesday, April 18, 2023, 22:55 [IST]
Other articles published on Apr 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+