ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು ಬೃಹತ್ ಮೊತ್ತವನ್ನು ಕಲೆಹಾಕಿದೆ. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಹೀಗಾಗಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 192 ರನ್‌ಗಳನ್ನು ಗಳಿಸಲು ಶಕ್ತವಾಗಿದೆ.
ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ನಾಯಕ ರೋಹಿತ್ ಶರ್ಮಾ ಉತ್ತಮ ಆರಂಭದ ಭರವಸೆ ನೀಡಿದರಾದರೂ 28 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಇಶಾನ್ ಕಿಶನ್ ಹಾಗೂ ಕ್ಯಾಮರೂನ್ ಗ್ರೀನ್ ಜೋಡಿ ಅದ್ಭುತ ಜೊತೆಯಾಟ ನೀಡಿ ಮಿಂಚಿದರು. ಇಶಾನ್ ಕಿಶನ್ 38 ರನ್‌ಗಳಿಸಿ ವಿಕೆಟ್ ಕಳೆದುಕೊಂಡ ಬಳಿಕ ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ನಿರಾಸೆ ಅನುಭವಿಸಿದರು. ಖಳೆದ ಪಂದ್ಯದಲ್ಲಿ ಮಿಂಚಿದ್ದ ಸೂರ್ಯ ಈ ಪಂದ್ಯದಲ್ಲಿ 7 ರನ್‌ಗಳಿಸಿ ಔಟಾದರು.

ಆದರೆ ನಂತರ ಕ್ಯಾಮರೂನ್ ಗ್ರೀನ್‌ಗೆ ಜೊತೆಯಾದ ತಿಲಕ್ ವರ್ಮಾ ಅದ್ಭುತ ಇನ್ನಿಂಗ್ಸ್ ಕಟ್ಟಿದರು. ಈ ಜೊಡಿ ಅರ್ಧ ಶತಕದ ಜೊತೆಯಾಟ ನೀಡಿದ್ದಲ್ಲದೆ ರನ್ ವೇಗವನ್ನು ಹೆಚ್ಚಿಸುವಲ್ಲಿ ಯಶಸ್ವಿಯಾದರು. ತಿಲಕ್ ವರ್ಮಾ ಕೇವಲ 17 ಎಸೆತಗಳಲ್ಲಿ 37 ರನ್‌ಗಳಿಸಿ ಮುಂಬೈ ಪರ ಮತ್ತೊಮ್ಮೆ ಮಹತ್ವದ ಪ್ರದರ್ಶನ ನೀಡಿದರು. ಇನ್ನು ಕೊನೆಯವರೆಗೂ ಕ್ರೀಸ್‌ನಲ್ಲಿದ್ದ ಗ್ರೀನ್ 40 ಎಸೆತಗಳಲ್ಲಿ 64 ರನ್ ಬಾರಿಸಿ ಮಿಂಚಿದ್ದಾರೆ. ಟಿಮ್ ಡೇವಿಡ್ 16 ರನ್‌ಗಳ ಕೊಡುಗೆ ನೀಡಿದರು. ಹೀಗಾಗಿ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿ 192 ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.
ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ: ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್
ಬೆಂಚ್: ಅಬ್ದುಲ್ ಸಮದ್, ವಿವ್ರಾಂತ್ ಶರ್ಮಾ, ಗ್ಲೆನ್ ಫಿಲಿಪ್ಸ್, ಮಯಾಂಕ್ ದಾಗರ್, ಉಮ್ರಾನ್ ಮಲಿಕ್, ಉಪೇಂದ್ರ ಯಾದವ್, ಅನ್ಮೋಲ್‌ಪ್ರೀತ್ ಸಿಂಗ್, ಆದಿಲ್ ರಶೀದ್, ಅಕೇಲ್ ಹೊಸೈನ್, ಸಮರ್ಥ ವ್ಯಾಸ್, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಕ್ಯಾಮೆರಾನ್ ಗ್ರೀನ್, ಅರ್ಜುನ್ ತೆಂಡೂಲ್ಕರ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್
ಬೆಂಚ್: ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ಕುಮಾರ್ ಕಾರ್ತಿಕೇಯ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ದುವಾನ್ ಜಾನ್ಸೆನ್, ಅರ್ಷದ್ ಖಾನ್, ಸಂದೀಪ್ ವಾರಿಯರ್, ಜೋಫ್ರಾ ಆರ್ಚರ್, ಆಕಾಶ್ ಮಾಧ್ವಲ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್