ಐಪಿಎಲ್‌ನಲ್ಲಿ ಇಂದು 25ನೇ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಈ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್‌ನಲ್ಲಿ ಈವರೆಗೆ ನಾಲ್ಕು ಪಂದ್ಯಗಳನ್ನು ಆಡದ್ದು ಇಂದು ಐದನೇ ಪಂದ್ಯವನ್ನು ಆಡಲು ಕಣಕ್ಕಿಳಿದಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಹೀಗಾಗಿ ನಾಲ್ಕು ಅಂಕಗಳನ್ನು ಹೊಂದಿದ್ದು ಅಂಕಪಟ್ಟಿಯಲ್ಲಿ ಮೇಲಕ್ಕೇರಲು ಎರಡು ತಂಡಗಳು ಕೂಡ ಇಂದು ಪ್ರಯತ್ನಿಸಲಿದೆ.

ಈವರೆಗೆ ಆಡಿರುವ ಪಂದ್ಯಗಳ ಫಲಿತಾಂಶಗಳಲ್ಲಿ ಎರಡು ತಂಡಗಳಲ್ಲಿಯೂ ಸಾಮ್ಯತೆಯಿದೆ. ಆರಂಭಿಕ ಎರಡು ಪಂದ್ಯಗಳನ್ನು ಸೋತು ಕಳಪೆ ಆರಂಭ ಪಡೆದುಕೊಂಡಿದ್ದ ಈ ಎರಡು ತಂಡಗಳು ಕೂಡ ಕಳೆದ ಎರಡು ಪಂದ್ಯಗಳಲ್ಲಿಯೂ ಭರ್ಜರಿ ಗೆಲುವು ಸಾಧಿಸಿ ಆತ್ಮವಿಶ್ವಾಸದಲ್ಲಿವೆ. ಹೀಗಾಗಿ ಈ ಗೆಲುವಿನ ಲಯವನ್ನು ಮುಂದುವರಿಸಿಕೊಂಡು ಮುನ್ನುಗ್ಗುವುದು ಎರಡು ತಂಡಗಳ ಗುರಿಯಾಗಿದೆ. ಇದರಲ್ಲಿ ಯಾವ ತಂಡಕ್ಕೆ ಯಶಸ್ಸು ದೊರೆಯಲಿದೆ ಎಂಬುದು ಈಗಿರುವ ಕುತೂಹಲ.
ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ: ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್
ಬೆಂಚ್: ಅಬ್ದುಲ್ ಸಮದ್, ವಿವ್ರಾಂತ್ ಶರ್ಮಾ, ಗ್ಲೆನ್ ಫಿಲಿಪ್ಸ್, ಮಯಾಂಕ್ ದಾಗರ್, ಉಮ್ರಾನ್ ಮಲಿಕ್, ಉಪೇಂದ್ರ ಯಾದವ್, ಅನ್ಮೋಲ್‌ಪ್ರೀತ್ ಸಿಂಗ್, ಆದಿಲ್ ರಶೀದ್, ಅಕೇಲ್ ಹೊಸೈನ್, ಸಮರ್ಥ ವ್ಯಾಸ್, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಕ್ಯಾಮೆರಾನ್ ಗ್ರೀನ್, ಅರ್ಜುನ್ ತೆಂಡೂಲ್ಕರ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್
ಬೆಂಚ್: ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ಕುಮಾರ್ ಕಾರ್ತಿಕೇಯ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ದುವಾನ್ ಜಾನ್ಸೆನ್, ಅರ್ಷದ್ ಖಾನ್, ಸಂದೀಪ್ ವಾರಿಯರ್, ಜೋಫ್ರಾ ಆರ್ಚರ್, ಆಕಾಶ್ ಮಾಧ್ವಲ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್