IPL 2023 SRH vs PBKS: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸನ್‌ರೈಸರ್ಸ್ ಹೈದರಾಬಾದ್
ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ 14ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆಡಿದ ಮೊದಲ ಎರಡೂ ಪಂದ್ಯಗಳನ್ನು ಗೆದ್ದಿರುವ ಪಂಜಾಬ್ ಕಿಂಗ್ಸ್ ಹ್ಯಾಟ್ರಿಕ್ ಜಯ ಗಳಿಸುವ ವಿಶ್ವಾಸದಲ್ಲಿದ್ದರೆ, ಮೊದಲ ಎರಡೂ ಪಂದ್ಯಗಳಲ್ಲಿ ಸೋತಿರುವ ಸನ್‌ರೈಸರ್ಸ್ ಹೈದರಾಬಾದ್ ಹ್ಯಾಟ್ರಿಕ್ ಸೋಲನ್ನು ತಪ್ಪಿಸಿಕೊಳ್ಳಲು ನೋಡುತ್ತಿದೆ.
ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ತವರಿನ ಅಭಿಮಾನಿಗಳ ಮುಂದೆ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ ಸನ್‌ರೈಸರ್ಸ್ ಹೈದರಾಬಾದ್, ಟಾಸ್ ಗೆದ್ದ ನಾಯಕ ಐಡೆನ್ ಮಾರ್ಕ್ರಾಮ್ ಕೂಡ ಇದನ್ನೇ ಹೇಳಿದರು. ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಮೊದಲನೇ ಗೆಲುವು ಕಾಣುವ ವಿಶ್ವಾಸವಿದೆ ಎಂದರು.

ಇಂದಿನ ಪಂದ್ಯಕ್ಕಾಗಿ ಎರಡೂ ತಂಡಗಳಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಕಳೆದ ಪಂದ್ಯದಲ್ಲಿ ಚೆಂಡು ತಾಗಿ ಗಾಯಗೊಂಡಿದ್ದ ಪಂಜಾಬ್ ಕಿಂಗ್ಸ್ ತಂಡದ ಸ್ಫೋಟಕ ಬ್ಯಾಟರ್ ಭಾನುಕಾ ರಾಜಪಕ್ಸ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಾಗಿ ಆಸ್ಟ್ರೇಲಿಯಾದ ಮ್ಯಾಥ್ಯೂ ಶಾರ್ಟ್ ಅವರು ಮೊದಲ ಐಪಿಎಲ್ ಪಂದ್ಯವಾಡುವ ಅವಕಾಶ ಪಡೆದುಕೊಂಡಿದ್ದಾರೆ.
ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಿದೆ. ಸ್ಫೋಟಕ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ, ಸ್ಪಿನ್ನರ್ ಮಯಾಂಕ್ ಮಾರ್ಕಂಡೆ ಕೂಡ ಮೊದಲ ಬಾರಿಗೆ ಎಸ್‌ಆರ್ ಹೆಚ್ ಅವಕಾಶ ಪಡೆದುಕೊಂಡಿದ್ದಾರೆ.
ಹೈದರಾಬಾದ್ ಪಿಚ್ ಬ್ಯಾಟಿಂಗ್‌ಗೆ ಹೆಚ್ಚಿನ ಸಹಕಾರ ನೀಡುವುದರಿಂದ ಮತ್ತೊಂದು ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದಾಗಿದೆ. ಶಿಖರ್ ಧವನ್, ಪ್ರಭ್‌ಸಿಮ್ರಾನ್ ಸಿಂಗ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದು ಮತ್ತೊಂದು ದೊಡ್ಡ ಮೊತ್ತ ಕಲೆಹಾಕುವ ಉತ್ಸಾಹದಲ್ಲಿದ್ದಾರೆ. ಜಿತೇಶ್ ಶರ್ಮಾ ಕೂಡ ಸ್ಫೋಟಕ ಇನ್ನಿಂಗ್ಸ್ ಆಡುವ ಸಾಮರ್ಥ್ಯ ಹೊಂದಿದ್ದಾರೆ.

ಉಭಯ ತಂಡಗಳ ಆಡುವ ಬಳಗ
ಸನ್‌ರೈಸರ್ಸ್ ಹೈದರಾಬಾದ್ : ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್.
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಪ್ರಭ್‌ಸಿಮ್ರಾನ್ ಸಿಂಗ್, ಮ್ಯಾಥ್ಯೂ ಶಾರ್ಟ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಾರುಖ್ ಖಾನ್, ಸ್ಯಾಮ್ ಕರ್ರಾನ್, ನಾಥನ್ ಎಲ್ಲಿಸ್, ಮೋಹಿತ್ ರಥಿ, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications