SRH Vs RR: ಬಟ್ಲರ್, ಜೈಸ್ವಾಲ್, ಸ್ಯಾಮ್ಸನ್ ಅಬ್ಬರ : ಸನ್‌ರೈಸರ್ಸ್ ಹೈದರಾಬಾದ್ ಗೆಲುವಿಗೆ 204 ರನ್‌ಗಳ ಗುರಿ
ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲರ್ ಗಳ ವಿರುದ್ಧ ರಾಜಸ್ಥಾನ ರಾಯಲ್ಸ್ ಬ್ಯಾಟರ್ ಗಳು ಅಬ್ಬರಿಸಿದ್ದಾರೆ. ಹೈದರಾಬಾದ್‌ನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 203 ರನ್ ಗಳಿಸಿದೆ.
ಕಳೆದ ಆವೃತ್ತಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಜೋಸ್ ಬಟ್ಲರ್ ಈ ಆವೃತ್ತಿಯ ಮೊದಲನೇ ಪಂದ್ಯದಲ್ಲಿ ಕೂಡ ಅದೇ ಫಾರ್ಮ್ ಮುಂದುವರೆಸಿದರು. ಆರಂಭದಲ್ಲೇ ಅಬ್ಬರಿಸಿದ ಬಟ್ಲರ್ ಮತ್ತು ಯಶಸ್ವಿ ಜೈಸ್ವಾಲ್ ಸನ್‌ರೈಸರ್ಸ್ ಹೈದರಾಬಾದ್ ಬೌಲರ್ ಗಳನ್ನು ಕಾಡಿದರು. ಪವರ್ ಪ್ಲೇನಲ್ಲಿ ಈ ಜೋಡಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ರಾಜಸ್ಥಾನ ರಾಯಲ್ಸ್ ಪರವಾಗಿ ಅತಿ ಹೆಚ್ಚು ರನ್ ಗಳಿಸಿದರು. 6 ಓವರ್ ಗಳಲ್ಲಿ ಈ ಜೋಡಿ 85 ರನ್ ಗಳಿಸಿದರು.

ಜೋಸ್ ಬಟ್ಲರ್ ಕೇವಲ 22 ಎಸೆತಗಳಲ್ಲಿ 7 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್ ಸಹಿತ 54 ರನ್ ಗಳಿಸಿದರು. ಪವರ್ ಪ್ಲೇನಲ್ಲಿ ಜೋಸ್ ಬಟ್ಲರ್ ಮೂರು ಅರ್ಧಶತಕ ಗಳಿಸುವ ಮೂಲಕ ಕ್ರಿಸ್‌ಗೇಲ್ ಸಾಧನೆಯನ್ನು ಸರಿಗಟ್ಟಿದರು. ಪವರ್ ಪ್ಲೇನಲ್ಲಿ 6 ಅರ್ಧಶತಕ ಗಳಿಸಿರುವ ಡೇವಿಡ್ ವಾರ್ನರ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಯಶಸ್ವೀ ಜೈಸ್ವಾಲ್, ಸಂಜು ಸ್ಯಾಮ್ಸನ್ ಅರ್ಧಶತಕ
ಜೋಸ್ ಬಟ್ಲರ್ ಔಟಾದ ಬಳಿಕ ಯಶಸ್ವೀ ಜೈಸ್ವಾಲ್ ಮತ್ತು ಸಂಜು ಸ್ಯಾಮ್ಸನ್ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಯಶಸ್ವೀ ಜೈಸ್ವಾಲ್ 37 ಎಸೆತಗಳಲ್ಲಿ 9 ಬೌಂಡರಿ ಸಹಿತ 37 ರನ್ ಗಳಿಸಿದರು. ನಾಯಕ ಸಂಜು ಸ್ಯಾಮ್ಸನ್ 32 ಎಸೆತಗಳಲ್ಲಿ 3 ಬೌಂಡರಿ 4 ಸಿಕ್ಸರ್ ಸಹಿತ 55 ರನ್ ಗಳಿಸಿದರು. ನಂತರ ಬಂದ ದೇವದತ್ ಪಡಿಕ್ಕಲ್ 2 ರನ್ ಗಳಿಸಿ ಔಟಾದರೆ, ರಿಯಾನ್ ಪರಾಗ್ ಕೂಡ 7 ರನ್ ಗಳಿಸಿ ಔಟಾದರು.

ಶಿಮ್ರಾನ್ ಹೆಟ್ಮೇರ್ 16 ಎಸೆತಗಳಲ್ಲಿ ಅಜೇಯ 22 ರನ್ ಗಳಿಸಿದರೆ, ಅಶ್ವಿನ್ ಅಜೇಯ 1 ರನ್ ಗಳಿಸಿದರು. ಅಂತಿಮವಾಗಿ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 203 ರನ್ ಗಳಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಫಜಲಕ್ ಫಾರ್‍ಹೂಕಿ ಮತ್ತು ಟಿ ನಟರಾಜನ್ ತಲಾ 2 ವಿಕೆಟ್ ಪಡೆದರೆ, ಉಮ್ರಾನ್ ಮಲಿಕ್ ಒಂದು ವಿಕೆಟ್ ಪಡೆದು ಮಿಂಚಿದರು. ಪಿಚ್‌ಗೆ ಬ್ಯಾಟಿಂಗ್ ಸಹಕಾರಿಯಾಗಿದ್ದು, ಈ ಬೃಹತ್ ಮೊತ್ತವನ್ನು ಬೆನ್ನಟ್ಟುವ ವಿಶ್ವಾಸದಲ್ಲಿದೆ ಸನ್‌ರೈಸರ್ಸ್ ಹೈದರಾಬಾದ್.
ಉಭಯ ತಂಡಗಳ ಆಡುವ ಬಳಗ
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ದೇವದತ್ ಪಡಿಕ್ಕಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಕೆಎಂ ಆಸಿಫ್, ಯುಜ್ವೇಂದ್ರ ಚಹಾಲ್. ಇಂಪ್ಯಾಕ್ಟ್ ಪ್ಲೇಯರ್: ಧ್ರುವ್ ಜುರೆಲ್, ಸಂದೀಪ್ ಶರ್ಮಾ, ಮುರುಗನ್ ಅಶ್ವಿನ್, ನವದೀಪ್ ಸೈನಿ, ಡೊನೆವೆನ್ ಫೆರೈರಾ.
ಸನ್ ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಹ್ಯಾರಿ ಬ್ರೂಕ್, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್(ವಿಕೆಟ್ ಕೀಪರ್), ಉಮ್ರಾನ್ ಮಲಿಕ್, ಆದಿಲ್ ರಶೀದ್, ಭುವನೇಶ್ವರ್ ಕುಮಾರ್(ನಾಯಕ), ಟಿ ನಟರಾಜನ್, ಫಜಲ್ಹಕ್ ಫಾರೂಕಿ. ಇಂಪ್ಯಾಕ್ಟ್ ಪ್ಲೇಯರ್: ಅಬ್ದುಲ್ ಸಮದ್, ವಿವ್ರಾಂತ್ ಶರ್ಮಾ, ಮಾಯಂಕ್ ಡಾಗರ್, ಉಪೇಂದ್ರ ಯಾದವ್, ಮಯಾಂಕ್ ಮಾರ್ಕಂಡೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications