SRH Vs RR: ತವರಿನಲ್ಲಿ ಗೆಲುವು ಕಾಣುತ್ತಾ ಸನ್‌ರೈಸರ್ಸ್ ಹೈದರಾಬಾದ್? ಪ್ಲೇಯಿಂಗ್ 11, ಪಿಚ್ ವರದಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಭಾನುವಾರ ನಡೆಯುವ ಮೊದಲನೇ ಪಂದ್ಯದಲ್ಲಿ ಕಳೆದ ಆವೃತ್ತಿಯ ರನ್ನರ್ ಅಪ್ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಸೆಣೆಸಲಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3.30ಕ್ಕೆ ಪಂದ್ಯ ನಡೆಯಲಿದೆ. ತವರಿನ ಅಂಗಳದಲ್ಲಿ ಈ ಐಪಿಎಲ್‌ನ ಮೊದಲನೇ ಪಂದ್ಯವನ್ನು ತವರಿನಲ್ಲಿ ಆಡುತ್ತಿರುವ ಹೈದರಾಬಾದ್ ತಂಡ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ಕಳೆದ ಬಾರಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ರಾಜಸ್ಥಾನ ರಾಯಲ್ಸ್ ಉತ್ತಮ ಪ್ರದರ್ಶನ ನೀಡುವ ಉತ್ಸಾಹದಲ್ಲಿದೆ.
ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಬಳಿಕ ಸನ್‌ರೈಸರ್ಸ್ ಹೈದರಾಬಾದ್ ಈ ಬಾರಿಯ ಐಪಿಎಲ್‌ಗೆ ತಂಡದಲ್ಲಿ ಸಾಕಷ್ಟು ಬದಲಾವಣೆ ಮಾಡಿದೆ. ತಂಡದ ನಾಯಕರಾಗಿದ್ದ ಕೇನ್ ವಿಲಿಯಮ್ಸನ್‌ರನ್ನೇ ಕೈ ಬಿಟ್ಟು ಅಚ್ಚರಿ ಮೂಡಿಸಿತ್ತು. ಮಿನಿ ಹರಾಜಿನಲ್ಲಿ ಹ್ಯಾರಿ ಬ್ರೂಕ್, ಮಯಾಂಕ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್‌ರಂತಹ ಬ್ಯಾಟರ್ ಗಳನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಬ್ಯಾಟಿಂಗ್ ಬಲವನ್ನು ಹೆಚ್ಚಿಸಿಕೊಂಡಿದೆ.

ಈ ಬಾರಿಯ ಐಪಿಎಲ್‌ಗಾಗಿ ಸನ್‌ರೈಸರ್ಸ್ ಹೈದರಾಬಾದ್ ತಮ್ಮ ನಾಯಕನಾಗಿ ಐಡೆನ್ ಮಾರ್ಕ್ರಾಮ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದೆ. ದಕ್ಷಿಣ ಆಫ್ರಿಕಾ ನೆದರ್ಲ್ಯಾಂಡ್ಸ್ ಏಕದಿನ ಸರಣಿಯಲ್ಲಿ ಆಡುತ್ತಿದ್ದು, ಅವರು ಮೊದಲನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಮಾರ್ಕ್ರಾಮ್ ಅನುಪಸ್ಥಿತಿಯಲ್ಲಿ ಹಿರಿಯ ವೇಗದ ಬೌಲರ್ ಭುವನೇಶ್ವರ್ ಕುಮಾರ್ ತಂಡದ ನಾಯಕರಾಗಿದ್ದು, ಮೊದಲನೇ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಉಭಯ ತಂಡಗಳ ಸಮಬಲದ ಹಣಾಹಣಿ
ಎರಡೂ ತಂಡಗಳು ಐಪಿಎಲ್ ಪಂದ್ಯಾವಳಿಯಲ್ಲಿ ಒಟ್ಟು 16 ಬಾರಿ ಮುಖಾಮುಖಿಯಾಗಿವೆ. ಸನ್‌ರೈಸರ್ಸ್ ಹೈದರಾಬಾದ್ 8 ಬಾರಿ ಗೆದ್ದಿದ್ದರೆ, ರಾಜಸ್ಥಾನ ರಾಯಲ್ಸ್ ಕೂಡ 8 ಬಾರಿ ಗೆಲುವು ಸಾಧಿಸಿದೆ. ಎರಡೂ ತಂಡಗಳು ಬಲಿಷ್ಠವಾಗಿದ್ದು ಇಂದಿನ ಪಂದ್ಯದಲ್ಲಿ ರೋಚಕ ಹಣಾಹಣಿಯನ್ನು ನಿರೀಕ್ಷೆ ಮಾಡಬಹುದಾಗಿದೆ. ಹೈದರಾಬಾದ್ ತಂಡಕ್ಕೆ ಪ್ರಮುಖ ಆಟಗಾರರು ಅಲಭ್ಯವಾಗಿರುವುದು ಸ್ವಲ್ಪ ಹಿನ್ನಡೆ ಎನಿಸಿದರೂ ಬಲಿಷ್ಠ ಆಟಗಾರರು ಆ ಕೊರತೆಯನ್ನು ನೀಗಿಸುವ ಸಾಮರ್ಥ್ಯ ಹೊಂದಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ವಿಭಾಗ ಸಾಕಷ್ಟು ಬಲವಾಗಿದ್ದು, ರಾಜಸ್ಥಾನ ಬ್ಯಾಟಿಂಗ್ ಪಡೆಗೆ ಸವಾಲಾಕಲು ಸಿದ್ಧವಾಗಿದ್ದಾರೆ. ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ಫಜಲ್ಕ್ ಫಾರೂಕಿಯಂತಹ ಬೌಲಿಂಗ್ ಪಡೆ ಇದೆ. ರಾಜಸ್ಥಾನ ತಂಡದಲ್ಲಿ ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್, ಶಿಮ್ರಾನ್ ಹೆಟ್ಮೇರ್ ಅಂತಹ ಬ್ಯಾಟರ್ ಗಳು ಸವಾಲಿಗೆ ಸಿದ್ಧವಾಗಿದ್ದಾರೆ.
ಪಿಚ್ ವರದಿ ಮತ್ತು ಸಂಭಾವ್ಯ ಆಡುವ ಬಳಗ
ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಇದುವರೆಗೆ 64 ಐಪಿಎಲ್ ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟಿಂಗ್ ಮಾಡಿದ ತಂಡ 27 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 37 ಬಾರಿ ಚೇಸಿಂಗ್ ಮಾಡುವ ತಂಡ ಗೆಲುವು ಸಾಧಿಸಿದೆ. ವೇಗದ ಬೌಲರ್ ಗಳಿಗೆ ಪಿಚ್ ಹೆಚ್ಚಿನ ನೆರವು ನೀಡುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ. ಟಾಸ್ ಗೆಲ್ಲುವ ತಂಡ ಮೊದಲು ಬೌಲಿಂಗ್ ಮಾಡುವ ಸಾಧ್ಯತೆಯೇ ಹೆಚ್ಚಾಗಿದೆ. ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವುದರಿಂದ ಹೈ ಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದಾಗಿದೆ.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಸನ್‌ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಗ್ಲೆನ್ ಫಿಲಿಪ್ಸ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್(ನಾಯಕ), ಉಮ್ರಾನ್ ಮಲಿಕ್, ಫಜಲ್ಹಕ್ ಫಾರೂಕಿ, ಅಕೇಲ್ ಹೊಸೈನ್. ಇಂಪ್ಯಾಕ್ಟ್ ಪ್ಲೇಯರ್: ಟಿ ನಟರಾಜನ್, ಸಮರ್ಥ ವ್ಯಾಸ್, ಅನ್ಮೋಲ್‌ಪ್ರೀತ್ ಸಿಂಗ್, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ
ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರೋನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ನವದೀಪ್ ಸೈನಿ, ಜೇಸನ್ ಹೋಲ್ಡರ್. ಇಂಪ್ಯಾಕ್ಟ್ ಪ್ಲೇಯರ್: ಸಂದೀಪ್ ಶರ್ಮಾ, ಕುಲದೀಪ್ ಸೇನ್, ಕುಲದೀಪ್ ಯಾದವ್, ಮುರುಗನ್ ಅಶ್ವಿನ್, ಕುನಾಲ್ ಸಿಂಗ್ ರಾಥೋರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications