ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2023: ಪಂಜಾಬ್ ಕಿಂಗ್ಸ್ ತಂಡಕ್ಕೆ ಸ್ಪಿನ್ ಬೌಲಿಂಗ್ ಕೋಚ್ ಆಗಿ ಕನ್ನಡಿಗ ಸುನಿಲ್ ಜೋಶಿ ನೇಮಕ

IPL 2023: Sunil Joshi appointed as spin-bowling coach of Punjab Kings for upcoming season

ಕಳೆದ ಎರಡ್ಮೂರು ಆವೃತ್ತಿಯಲ್ಲಿ ಹೆಚ್ಚು ಕನ್ನಡಿಗರನ್ನೇ ಹೊಂದಿದ್ದ ಪಂಜಾಬ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಗೂ ಮುನ್ನ ಸಾಕಷ್ಟು ಬದಲಾವಣೆ ಮಾಡಿಕೊಂಡಿದೆ. ಈ ಸಂದರ್ಭದಲ್ಲಿ ಮುಖ್ಯ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಅವಧಿ ಕೂಡ ಮುಕ್ತಾಯವಾಗಿದ್ದು ನಾಯಕನಾಗಿದ್ದ ಮಯಾಂಕ್ ಅಗರ್ವಾಲ್ ಕೂಡ ತಂಡದಿಂದ ಬೇರ್ಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಮತ್ತೋರ್ವ ಕರ್ನಾಟಕದ ದಿಗ್ಗಜ ಕ್ರಿಕೆಟಿಗ ಪಂಜಾಬ್ ಕಿಂಗ್ಸ್ ಪಾಳಯವನ್ನು ಸೇರಿಕೊಂಡಿದ್ದಾರೆ.

ಕರ್ನಾಟಕದ ಸ್ಪಿನ್ ದಿಗ್ಗಜ ಸುನಿಲ್ ಜೋಶಿ ಮುಂಬರುವ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಪಂಜಾಬ್ ಕಿಂಗ್ಸ್ ತಂಡ ಈ ವಿಚಾರವನ್ನು ಸಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದೆ.

ಮಹಿಳಾ ಐಪಿಎಲ್ ಪ್ರಸಾರದ ಹಕ್ಕು ವಯಕಾಮ್ 18 ಪಾಲು: ಉತ್ತಮ ಮೊತ್ತಕ್ಕೆ ಮಾರಾಟಮಹಿಳಾ ಐಪಿಎಲ್ ಪ್ರಸಾರದ ಹಕ್ಕು ವಯಕಾಮ್ 18 ಪಾಲು: ಉತ್ತಮ ಮೊತ್ತಕ್ಕೆ ಮಾರಾಟ

ಪಂಜಾಬ್ ಕಿಂಗ್ಸ್ ತಂಡದಲ್ಲಿ ಅನಿಲ್ ಕುಂಬ್ಳೆ ಮುಖ್ಯ ಕೋಚ್ ಹುದ್ದೆಯಿಮದ ನಿರ್ಗಮಿಸಿದ ಬಳಿಕ ಆಸ್ಟ್ರೇಲಿಯಾದ ಟ್ರೆವರ್ ಬೆಲಿಸ್ ಅವರನ್ನು ಮುಂಬರುವ ಆವೃತ್ತಿಗೆ ಮುಖ್ಯ ಕೋಚ್ ಆಗಿ ನೇಮಿಸಿಕೊಂಡಿದೆ. ಆಸ್ಟ್ರೇಲಿಯಾದ ಮಾಜಿ ಆಟಗಾರನ ನೇತೃತ್ವದ ಬೆಂಬಲ ಸಿಬ್ಬಂದಿಗಳ ಬಳಗಕ್ಕೆ ಈಗ ಕನ್ನಡಿಗ ಸುನಿಲ್ ಜೋಶಿ ಕೂಡ ಜೊತೆಯಾಗಲಿದ್ದಾರೆ.

ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕ ಪರವಾಗಿ ಅನೇಕ ದಾಖಲೆ ಹೊಂದಿರುವ ಸುನಿಲ್ ಜೋಶಿ ಭಾರತ ತಂಡದ ಪರವಾಗಿ 1996ರಿಂದ 2001ರಲ್ಲಿ ಆಡಿದ್ದಾರೆ. 15 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಸುನಿಲ್ ಜೋಶಿ 69 ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರವಾಗಿ ಆಡಿದ ಅನುಭವ ಹೊಂದಿದ್ದಾರೆ.

ಸುನಿಲ್ ಜೋಶಿ 2012ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದಲೂ ನಿವೃತ್ತಿ ಘೋಷಣೆ ಮಾಡಿದ್ದರು. ಕುತೂಹಲಕಾರಿ ಅಂಶವೆಂದರೆ 2008ರ ಚೊಚ್ಚಲ ಆವೃತ್ತಿಯ ಐಪಿಎಲ್‌ನಲ್ಲಿ ಸುನಿಲ್ ಜೋಶಿ ಬೆಂಗಳುರು ಮೂಲದ ಆರ್‌ಸಿಬಿ ತಂಡದ ಪರವಾಗಿ ಆಡಿದ್ದರು.

IND vs SL: ಹೀಗಾದರೆ ಮಾತ್ರ ವಿರಾಟ್ ಕೊಹ್ಲಿ 100 ಅಂತಾರಾಷ್ಟ್ರೀಯ ಶತಕ ಗಳಿಸುತ್ತಾರೆ; ಸುನಿಲ್ ಗವಾಸ್ಕರ್IND vs SL: ಹೀಗಾದರೆ ಮಾತ್ರ ವಿರಾಟ್ ಕೊಹ್ಲಿ 100 ಅಂತಾರಾಷ್ಟ್ರೀಯ ಶತಕ ಗಳಿಸುತ್ತಾರೆ; ಸುನಿಲ್ ಗವಾಸ್ಕರ್

ಇನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಈ ಬಾರಿ ಕೋಚಿಂಗ್ ವಿಭಾಗವನ್ನು ಬಲಿಷ್ಠಗೊಳಿಸಲು ಮುಂದಾಗಿದ್ದು ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಅವರನ್ನು ಮುಂಬರುವ ಆವೃತ್ತಿಗೆ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳಿಸಿದೆ. ಇನ್ನು ದಕ್ಷಿಣ ಆಪ್ರಿಕಾದ ಬೌಲರ್ ಚಾರ್ಲ್ ಲ್ಯಾಂಗ್‌ವೆಲ್ಟ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಿಸಿದೆ.

ಪಂಜಾಬ್ ಕಿಂಗ್ಸ್ ತಂಡ 2023ರ ಆವೃತ್ತಿಯಲ್ಲಿ ಶಿಖರ್ ಧವನ್ ನೇತೃತ್ವದಲ್ಲಿ ಕಣಕ್ಕಿಳಿಯಲಿದೆ. ಕನ್ನಡಿಗ ಮಯಾಂಕ್ ಅಗರ್ವಾಲ್ ಅವರನ್ನು ಕಳೆದ ಹರಾಜಿಗೂ ಮುನ್ನ ತಂಡದಿಂದ ಬಿಡುಗಡೆಗೊಳಿಸಿದ ಬಳಿಕ ಧವನ್‌ಗೆ ನಾಯಕತ್ವದ ಹೊಣೆಗಾರಿಗೆ ನೀಡಿದೆ. ಮಯಾಂಕ್ ಅಗರ್ವಾಲ್ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಿದ್ದು 8.25 ಕೋಟಿ ಮೊತ್ತಕ್ಕೆ ಹರಾಜಾಗಿದ್ದಾರೆ.

Story first published: Monday, January 16, 2023, 18:09 [IST]
Other articles published on Jan 16, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X