Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

SRH vs LSG: ಕೈಹಿಡಿದ ಕ್ಲಾಸಿನ್, ಸಮದ್; ಲಕ್ನೋಗೆ ಪೈಪೋಟಿಯುತ ಗುರಿ ನೀಡಿದ ಹೈದರಾಬಾದ್

IPL 2023: Sunrisers Hyderbad sets the target of 183 runs to Lucknow Super Giants

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಇಂದು ( ಮೇ 13 ) ಎರಡು ಪಂದ್ಯಗಳು ಆಯೋಜನೆಗೊಂಡಿವೆ. ಲೀಗ್‌ನ 58ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸಂಜೆ ನಡೆಯಲಿರುವ 59ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಏಡನ್ ಮಾರ್ಕ್ರಮ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಮಾಡಿದ್ದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಸನ್ ರೈಸರ್ಸ್ ಹೈದರಾಬಾದ್ ಹೆನ್ರಿಚ್ ಕ್ಲಾಸಿನ್ ಹಾಗೂ ಅಬ್ದುಲ್ ಸಮದ್ ಕೈಹಿಡಿದ ಕಾರಣ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿದ್ದು, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 183 ರನ್‌ಗಳ ಗುರಿಯನ್ನು ನೀಡಿದೆ.

ಸನ್ ರೈಸರ್ಸ್ ಹೈದರಾಬಾದ್ ಪರ ಆರಂಭಿಕ ಆಟಗಾರರಾಗಿ ಅನ್‌ಮೋಲ್‌ಪ್ರೀತ್ ಸಿಂಗ್ ಹಾಗೂ ಅಭಿಷೇಕ್ ಶರ್ಮಾ ಕಣಕ್ಕಿಳಿದರು. ಅನ್‌ಮೋಲ್‌ಪ್ರೀತ್ ಸಿಂಗ್ 27 ಎಸೆತಗಳಲ್ಲಿ 36 ರನ್ ಗಳಿಸಿದರೆ, ಅಭಿಷೇಕ್ ಶರ್ಮಾ 5 ಎಸೆತಗಳಲ್ಲಿ 7 ರನ್ ಕಲೆಹಾಕಿದರು. ಇನ್ನುಳಿದಂತೆ ರಾಹುಲ್ ತ್ರಿಪಾಠಿ 13 ಎಸೆತಗಳಲ್ಲಿ 20 ರನ್, ಏಡನ್ ಮಾರ್ಕ್ರಮ್ 20 ಎಸೆತಗಳಲ್ಲಿ 28 ರನ್, ಗ್ಲೆನ್ ಫಿಲಿಪ್ಸ್ ಗೋಲ್ಡನ್ ಡಕ್ಔಟ್, ಹೆನ್ರಿಚ್ ಕ್ಲಾಸಿನ್ 29 ಎಸೆತಗಳಲ್ಲಿ 47 ರನ್, ಅಬ್ದುಲ್ ಸಮದ್ 25 ಎಸೆತಗಳಲ್ಲಿ ಅಜೇಯ 35 ರನ್ ಹಾಗೂ ಭುವನೇಶ್ವರ್ ಕುಮಾರ್ ಒಂದು ಎಸೆತದಲ್ಲಿ ಅಜೇಯ 2 ರನ್ ಬಾರಿಸಿದರು.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ನಾಯಕ ಕೃನಾಲ್ ಪಾಂಡ್ಯ ಎರಡು ವಿಕೆಟ್ ಪಡೆದರೆ, ಯುದ್ವೀರ್ ಸಿಂಗ್ ಚರಕ್, ಅವೇಶ್ ಖಾನ್, ಯಶ್ ಠಾಕೂರ್ ಹಾಗೂ ಅಮಿತ್ ಮಿಶ್ರಾ ತಲಾ ಒಂದೊಂದು ವಿಕೆಟ್ ಪಡೆದರು.


ಆಡುವ ಬಳಗಗಳು:

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ (ನಾಯಕ), ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಅಮಿತ್ ಮಿಶ್ರಾ, ಯಶ್ ಠಾಕೂರ್, ರವಿ ಬಿಷ್ಣೋಯ್, ಯುಧ್ವೀರ್ ಸಿಂಗ್ ಚರಕ್, ಅವೇಶ್ ಖಾನ್

ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ಅನ್ಮೋಲ್‌ಪ್ರೀತ್ ಸಿಂಗ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಅಬ್ದುಲ್ ಸಮದ್, ಟಿ ನಟರಾಜನ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ

ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಸನ್ ರೈಸರ್ಸ್ ಹೈದರಾಬಾದ್ 10 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡಗಳು 11 ಪಂದ್ಯಗಳನ್ನಾಡಿವೆ. ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ.

ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್ 5 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು ಉಳಿದೊಂದ ಪಂದ್ಯ ರದ್ದಾದ ಕಾರಣ ಒಂದು ಅಂಕ ಪಡೆದುಕೊಂಡು ಅಂಕಪಟ್ಟಿಯಲ್ಲಿ ಒಟ್ಟು 11 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಐದನೇ ಸ್ಥಾನದಲ್ಲಿದೆ.

ಅತ್ತ ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದು 4 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.

ಇನ್ನು ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆದ್ದರೆ ತನ್ನ ಪ್ಲೇಆಫ್ ಹಾದಿಯನ್ನು ಸುಗಮ ಮಾಡಿಕೊಳ್ಳಲಿದ್ದು, ಗೆಲ್ಲುವ ಯೋಜನೆಯಲ್ಲಿದೆ. ಅತ್ತ ಸನ್ ರೈಸರ್ಸ್ ಹೈದರಾಬಾದ್ ಈ ಪಂದ್ಯದಲ್ಲಿ ಸೋತರೆ ಪ್ಲೇಆಫ್ ಪ್ರವೇಶಿಸುವ ಅರ್ಹತೆಯನ್ನು ಬಹುತೇಕ ಕಳೆದುಕೊಳ್ಳಲಿದ್ದು, ಈ ಪಂದ್ಯವನ್ನು ಗೆಲ್ಲಲೇಬೇಕಿದೆ.

Story first published: Saturday, May 13, 2023, 17:29 [IST]
Other articles published on May 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+