DC vs SRH: ಪಂದ್ಯದಲ್ಲಿ ಗೆಲ್ಲಲು ನಿಮ್ಮ ಡ್ರೀಮ್ ಟೀಮ್‌ನಲ್ಲಿ ಈ ಆಟಗಾರರನ್ನು ಆರಿಸಿ!

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 34ನೇ ಪಂದ್ಯ ಇಂದು ( ಏಪ್ರಿಲ್ 24 ) ನಡೆಯಲಿದ್ದು, ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.
ಈ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ರಾತ್ರಿ 7.30ಕ್ಕೆ ಶುರುವಾಗಲಿದೆ. ಎರಡೂ ತಂಡಗಳಿಗೂ ಸಹ ಈ ಪಂದ್ಯ ಟೂರ್ನಿಯಲ್ಲಿ ತಾವು ಆಡಲಿರುವ ಏಳನೇ ಪಂದ್ಯವಾಗಿದ್ದು, ಸದ್ಯಕ್ಕೆ ಟೂರ್ನಿಯಲ್ಲಿ ಅತಿ ಕಳಪೆ ತಂಡಗಳು ಎನಿಸಿಕೊಂಡಿರುವ ತಂಡಗಳ ನಡುವಿನ ಸೆಣಸಾಟ ಎನ್ನಬಹುದಾಗಿದೆ.
ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ 6 ಪಂದ್ಯಗಳನ್ನಾಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಕೇವಲ 2 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತಿದ್ದು, 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಹ ಟೂರ್ನಿಯಲ್ಲಿ ಇಲ್ಲಿಯವರೆಗೂ 6 ಪಂದ್ಯಗಳನ್ನಾಡಿದ್ದು, ಕೇವಲ ಒಂದೇ ಒಂದು ಪಂದ್ಯದಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು ಕೇವಲ 2 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಹೀಗೆ ಕಳಪೆ ತಂಡಗಳ ಕಾಳಗ ಎನಿಸಿಕೊಂಡಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಏರ್ಪಟ್ಟಿದ್ದು, ಯಾವ ಆಟಗಾರರು ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂಬ ಚರ್ಚೆಯೂ ಸಹ ನಡೆಯುತ್ತಿದೆ. ಇನ್ನು ಇಂದಿನ ಪಂದ್ಯದಲ್ಲಿ ಹಲವಾರು ಕ್ರಿಕೆಟ್ ಪ್ರೇಮಿಗಳು ಫ್ಯಾಂಟಸಿ ಕ್ರಿಕೆಟ್ ಗೇಮ್‌ನಲ್ಲಿ ಭಾಗವಹಿಸುವ ಸಲುವಾಗಿ ಡ್ರೀಮ್ ಟೀಮ್‌ಗಳನ್ನು ರಚಿಸುತ್ತಿದ್ದು, ಅಂತಹ ಕ್ರಿಕೆಟ್ ಪ್ರಿಯರು ಈ ಕೆಳಕಂಡ ರೀತಿಯಲ್ಲಿ ತಂಡಗಳನ್ನು ರಚಿಸುವುದು ಉತ್ತಮ ಎನ್ನಬಹುದು.
ಡ್ರೀಮ್ ಟೀಮ್ 1 : ವಿಕೆಟ್ ಕೀಪರ್ - ಹೆನ್ರಿಕ್ ಕ್ಲಾಸೆನ್, ಫಿಲಿಪ್ ಸಾಲ್ಟ್
ಬ್ಯಾಟ್ಸ್‌ಮನ್‌ಗಳು - ಡೇವಿಡ್ ವಾರ್ನರ್ (ನಾಯಕ), ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ
ಆಲ್ ರೌಂಡರ್‌ಗಳು - ಮಿಚೆಲ್ ಮಾರ್ಷ್, ಅಕ್ಸರ್ ಪಟೇಲ್ (ಉಪನಾಯಕ), ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್
ಬೌಲರ್‌ಗಳು - ಕುಲದೀಪ್ ಯಾದವ್, ಅನ್ರಿಚ್ ನಾರ್ಕಿಯಾ

ಡ್ರೀಮ್ ಟೀಮ್ 2:ವಿಕೆಟ್ ಕೀಪರ್ - ಹೆನ್ರಿಕ್ ಕ್ಲಾಸೆನ್
ಬ್ಯಾಟ್ಸ್‌ಮನ್‌ಗಳು - ಡೇವಿಡ್ ವಾರ್ನರ್, ಹ್ಯಾರಿ ಬ್ರೂಕ್ (ಉಪನಾಯಕ), ರಾಹುಲ್ ತ್ರಿಪಾಠಿ, ಮನೀಶ್ ಪಾಂಡೆ
ಆಲ್ ರೌಂಡರ್‌ಗಳು - ಮಿಚೆಲ್ ಮಾರ್ಷ್, ಅಕ್ಸರ್ ಪಟೇಲ್ (ನಾಯಕ), ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್
ಬೌಲರ್‌ಗಳು - ಕುಲದೀಪ್ ಯಾದವ್, ಅನ್ರಿಚ್ ನಾರ್ಕಿಯಾ
ಸಂಭಾವ್ಯ ಆಡುವ ಬಳಗಗಳು:
ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ಆಡುವ ಬಳಗ: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್
ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಫಿಲಿಪ್ ಸಾಲ್ಟ್, ಅಕ್ಷರ್ ಪಟೇಲ್, ಅಮನ್ ಖಾನ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಮುಖೇಶ್ ಕುಮಾರ್, ಇಶಾಂತ್ ಶರ್ಮಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications