For Quick Alerts
ALLOW NOTIFICATIONS  
For Daily Alerts
 

DC vs SRH: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

IPL 2023: Sunrisers Hyderabad vs Delhi Capitals toss report, playing 11 and live score

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 34ನೇ ಪಂದ್ಯ ಇಂದು ( ಏಪ್ರಿಲ್ 24 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಆರಿಸಿಕೊಂಡಿದ್ದಾರೆ.

ಆಡುವ ಬಳಗಗಳು:

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಸರ್ಫರಾಜ್ ಖಾನ್, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ರಿಪಾಲ್ ಪಟೇಲ್, ಅನ್ರಿಚ್ ನಾರ್ಟ್ಜೆ, ಕುಲದೀಪ್ ಯಾದವ್, ಇಶಾಂತ್ ಶರ್ಮಾ

ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ಹ್ಯಾರಿ ಬ್ರೂಕ್, ಐಡೆನ್ ಮಾರ್ಕ್ರಾಮ್(ನಾಯಕ), ಮಯಾಂಕ್ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್

ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ..

1
57089

ಇನ್ನು ಎರಡೂ ತಂಡಗಳಿಗೂ ಸಹ ಈ ಪಂದ್ಯ ಟೂರ್ನಿಯಲ್ಲಿ ತಾವು ಆಡಲಿರುವ ಏಳನೇ ಪಂದ್ಯವಾಗಿದ್ದು, ಸದ್ಯಕ್ಕೆ ಟೂರ್ನಿಯಲ್ಲಿ ಅತಿ ಕಳಪೆ ತಂಡಗಳು ಎನಿಸಿಕೊಂಡಿರುವ ತಂಡಗಳ ನಡುವಿನ ಸೆಣಸಾಟ ಎನ್ನಬಹುದಾಗಿದೆ.

ಹೌದು, ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಳಪೆ ತಂಡಗಳು ಎನಿಸಿಕೊಂಡಿವೆ.

ಟೂರ್ನಿಯಲ್ಲಿ ಇಲ್ಲಿಯವರೆಗೂ 6 ಪಂದ್ಯಗಳನ್ನಾಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಕೇವಲ 2 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತಿದ್ದು, 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.

ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಹ ಟೂರ್ನಿಯಲ್ಲಿ ಇಲ್ಲಿಯವರೆಗೂ 6 ಪಂದ್ಯಗಳನ್ನಾಡಿದ್ದು, ಕೇವಲ ಒಂದೇ ಒಂದು ಪಂದ್ಯದಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು ಕೇವಲ 2 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಹೀಗೆ ಈ ಬಾರಿಯ ಟೂರ್ನಿಯಲ್ಲಿ ಗೆಲುವಿಗಿಂತ ಸೋಲನ್ನೇ ಹೆಚ್ಚು ಕಂಡಿರುವ ಈ ತಂಡಗಳು ಮುಖಾಮುಖಿಯಾಗುತ್ತಿದ್ದು, ಕಳಪೆ ತಂಡಗಳ ಕಾಳಗದಲ್ಲಿ ಯಾವ ತಂಡ ಗೆಲ್ಲಲಿದೆ ಕಾದು ನೋಡಬೇಕಿದೆ.

ತಂಡಗಳು:
ಸನ್‌ರೈಸರ್ಸ್ ಹೈದರಾಬಾದ್ ತಂಡ: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್(ನಾಯಕ), ಕ್ಲಾಸೆನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್, ಮಯಾಂಕ್ ದಾಗರ್, ಆದಿಲ್ ರಶೀದ್, ಎಕೆ ಹೊಸೈನ್, ಟಿ ನಟರಾಜನ್, ಗ್ಲೆನ್ ಫಿಲಿಪ್ಸ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಉಪೇಂದ್ರ ಯಾದವ್, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಪೃಥ್ವಿ ಶಾ, ರಿಲೀ ರೋಸೌ, ಸರ್ಫರಾಜ್ ಖಾನ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಪ್ರವೀಣ್ ದುಬೆ, ಖಲೀಲ್ ಅಹ್ಮದ್, ರೋವ್‌ಮನ್ ಪೊವೆಲ್, ಪ್ರಿಯಮ್ ಗಾರ್ಗ್, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಅಭಿಷೇಕ್ ಪೊರೆಲ್

Story first published: Monday, April 24, 2023, 19:11 [IST]
Other articles published on Apr 24, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+