SRH vs KKR: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್‌ನಲ್ಲಿ ಈ ಆಟಗಾರರನ್ನು ಆರಿಸಿ

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 47ನೇ ಪಂದ್ಯ ಇಂದು ( ಮೇ 4 ) ನಡೆಯಲಿದ್ದು, ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಡಲಿವೆ.
ಈ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾತ್ರಿ 7.30ಕ್ಕೆ ಶುರುವಾಗಲಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ಈ ಎರಡೂ ತಂಡಗಳು ಸಹ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿಲ್ಲ.
9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದರೆ, 8 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
ಹೀಗೆ ಎಲ್ಲಾ ತಂಡಗಳು ಪ್ಲೇಆಫ್ ಸುತ್ತಿಗೆ ಸನಿಹವಾಗುತ್ತಿದ್ದಾರೆ ಈ ಎರಡು ತಂಡಗಳು ಕೇವಲ ಆರು ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ತೀವ್ರ ಹಿನ್ನಡೆ ಅನುಭವಿಸಿವೆ. ಇತ್ತಂಡಗಳು ತಮ್ಮ ಪ್ಲೇಆಫ್ ಆಸೆಯನ್ನು ಜೀವಂತವಾಗಿ ಉಳಿಸಿಕೊಳ್ಳಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಇನ್ನು ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿರುವ ಈ ಬಾರಿಯ ಎರಡನೇ ಪಂದ್ಯ ಇದಾಗಿದ್ದು, ಇತ್ತಂಡಗಳು ಇಲ್ಲಿಯವರೆಗೂ ಒಟ್ಟು 24 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಸನ್ ರೈಸರ್ಸ್ ಹೈದರಾಬಾದ್ 9 ಪಂದ್ಯಗಳಲ್ಲಿ ಗೆದ್ದಿದ್ದರೆ, ಕೊಲ್ಕತ್ತಾ ನೈಟ್ ರೈಡರ್ಸ್ 15 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.
ಹೀಗೆ ಕುತೂಹಲ ಕೆರಳಿಸಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬ ಚರ್ಚೆಗಳು ಏರ್ಪಟ್ಟಿದ್ದು, ಮತ್ತೊಂದೆಡೆ ಫ್ಯಾಂಟಸಿ ಕ್ರಿಕೆಟ್ ಇಷ್ಟಪಡುವ ಕ್ರಿಕೆಟ್ ಪ್ರೇಮಿಗಳು ಈ ಪಂದ್ಯದಲ್ಲಿ ಯಾವ ಆಟಗಾರರು ಉತ್ತಮ ಪ್ರದರ್ಶನ ನೀಡಬಹುದು ಎಂಬುದನ್ನು ಊಹಿಸಿ ಡ್ರೀಮ್ ತಂಡಗಳನ್ನು ರಚಿಸುತ್ತಿದ್ದಾರೆ. ಅಂತಹ ಕ್ರಿಕೆಟ್ ಪ್ರೇಮಿಗಳು ಈ ಕೆಳಕಂಡಂತೆ ಡ್ರೀಮ್ ಟೀಮ್‌ಗಳನ್ನು ರಚಿಸಿದರೆ ಉತ್ತಮ ಅಂಕಗಳನ್ನು ರಚಿಸಬಹುದಾಗಿದೆ..
ಡ್ರೀಮ್ ಟೀಮ್ 1: ರಹಮಾನುಲ್ಲಾ ಗುರ್ಬಾಜ್ (ನಾಯಕ)
ಬ್ಯಾಟ್ಸ್‌ಮನ್‌ಗಳು - ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಜೇಸನ್ ರಾಯ್, ಅಭಿಷೇಕ್ ಶರ್ಮಾ
ಆಲ್ ರೌಂಡರ್‌ಗಳು - ಆಂಡ್ರೆ ರಸೆಲ್, ಐಡೆನ್ ಮಾರ್ಕ್ರಾಮ್ (ಉಪನಾಯಕ), ಮಾರ್ಕೊ ಜಾನ್ಸೆನ್, ಸುನಿಲ್ ನರೈನ್
ಬೌಲರ್‌ಗಳು- ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ
ಡ್ರೀಮ್ ಟೀಮ್ 2: ರಹಮಾನುಲ್ಲಾ ಗುರ್ಬಾಜ್
ಬ್ಯಾಟ್ಸ್‌ಮನ್‌ಗಳು - ವೆಂಕಟೇಶ್ ಅಯ್ಯರ್ (ಉಪನಾಯಕ), ನಿತೀಶ್ ರಾಣಾ, ಜೇಸನ್ ರಾಯ್, ಅಭಿಷೇಕ್ ಶರ್ಮಾ
ಆಲ್ ರೌಂಡರ್‌ಗಳು - ಆಂಡ್ರೆ ರಸೆಲ್, ಐಡೆನ್ ಮಾರ್ಕ್ರಾಮ್ (ನಾಯಕ), ಮಾರ್ಕೊ ಜಾನ್ಸೆನ್
ಬೌಲರ್‌ಗಳು- ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಮಯಾಂಕ್ ಮಾರ್ಕಂಡೆ
ಸಂಭಾವ್ಯ ಆಡುವ ಬಳಗಗಳು:
ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ಆಡುವ ಬಳಗ: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಭುವನೇಶ್ವರ್ ಕುಮಾರ್, ಅಕೇಲ್ ಹೊಸೈನ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್
ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಆಡುವ ಬಳಗ: ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಡೇವಿಡ್ ವೈಸ್, ಶಾರ್ದೂಲ್ ಠಾಕೂರ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಸುಯಶ್ ಶರ್ಮಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications