IPL 2023: ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕನ ಹೆಸರು ಘೋಷಣೆಗೆ ಮುಹೂರ್ತ ನಿಗದಿ

ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ನಾಯಕನ ಹೆಸರು ಘೋಷಣೆ ಮಾಡಲು ಕೊನೆಗೂ ಮುಹೂರ್ತ ನಿಗದಿಯಾಗಿದೆ. ಫೆಬ್ರವರಿ 23, ಗುರುವಾರ ತಂಡದ ನಾಯಕನ ಹೆಸರು ಘೋಷಣೆ ಮಾಡುವುದಾಗಿ ತಿಳಿಸಿದೆ. ಈ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.
2023ರ ಐಪಿಎಲ್ ಮಿನಿ ಹರಾಜಿಗೆ ಮುನ್ನ ತಂಡದ ನಾಯಕರಾಗಿದ್ದ ಕೇನ್ ವಿಲಿಯಮ್ಸ್‌ರನ್ನೇ ಕೈಬಿಡುವ ಮೂಲಕ ಅಚ್ಚರಿಯ ನಿರ್ಧಾರ ತೆಗೆದುಕೊಂಡಿತ್ತು. ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ತಂಡದಲ್ಲಿ ಭಾರಿ ಬದಲಾವಣೆ ಮಾಡಲು ನಿರ್ಧರಿಸಿದ್ದ ಎಸ್‌ಆರ್‌ಹೆಚ್ ಹಲವು ಆಟಗಾರರನ್ನು ಬಿಡುಗಡೆ ಮಾಡಿತ್ತು.
2023ರ ಐಪಿಎಲ್ ಮಿನಿ ಹರಾಜಿನಲ್ಲಿ ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್, ಪಂಜಾಬ್ ಕಿಂಗ್ಸ್ ತಂಡದ ಮಾಜಿ ನಾಯಕ ಮಯಾಂಕ್ ಅಗರ್ವಾಲ್ ಸೇರಿದಂತೆ ಇತರೆ ಪ್ರಮುಖ ಆಟಗಾರರನ್ನು ಖರೀದಿ ಮಾಡಿತ್ತು.
ನಾಯಕ ಕೇನ್ ವಿಲಿಯಮ್ಸ್‌ರನ್ನೇ ಬಿಡುಗಡೆ ಮಾಡಿದ ಬಳಿಕ 2023ರ ಐಪಿಎಲ್‌ನಲ್ಲಿ ತಂಡಕ್ಕೆ ನಾಯಕ ಯಾರು ಎನ್ನುವ ಪ್ರಶ್ನೆ ಎದುರಾಗಿತ್ತು. ಈಗ ಎಲ್ಲಾ ಕುತೂಹಲಕ್ಕೆ ತೆರೆ ಎಳೆಯಲು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮುಂದಾಗಿದೆ.

ಮಾರ್ಕ್ರಾಮ್ ಆಯ್ಕೆ ಬಹುತೇಕ ಖಚಿತ
ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಏಡೆನ್ ಮಾರ್ಕ್ರಾಮ್ ನಾಯಕನಾಗುವುದು ಬಹುತೇಕ ಖಚಿತವಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆದ ಚೊಚ್ಚಲ ಎಸ್‌ಎ 20 ಲೀಗ್‌ನಲ್ಲಿ ಸನ್‌ರೈಸರ್ಸ್ ಕೇಪ್‌ಟೌನ್ ತಂಡಕ್ಕೆ ನಾಯಕರಾಗಿದ್ದರು, ಮಾರ್ಕ್ರಾಮ್ ನಾಯಕತ್ವದಲ್ಲಿ ತಂಡ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್ ಎನಿಸಿಕೊಂಡಿದೆ.
ಎಸ್‌ಎ 20 ಲೀಗ್‌ನಲ್ಲಿ ಯಶಸ್ವೀ ನಾಯಕರಾಗಿರುವ ಏಡೆನ್ ಮಾರ್ಕ್ರಾಮ್ ಬಹುತೇಕ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಏಡೆನ್ ಮಾರ್ಕ್ರಾಮ್ ನಾಯಕನಾದರೆ ಉತ್ತಮವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು.

ಮಯಾಂಕ್ ಅಗರ್ವಾಲ್ ಕೂಡ ರೇಸ್‌ನಲ್ಲಿ
ತಂಡದಲ್ಲಿ ನಾಯಕತ್ವದ ರೇಸ್‌ನಲ್ಲಿರುವ ಮತ್ತೊಬ್ಬ ಪ್ರಮುಖ ಆಟಗಾರ ಮಯಾಂಕ್ ಅಗರ್ವಾಲ್, ಪಂಜಾಬ್ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿರುವ ಅಗರ್ವಾಲ್ ಕೂಡ ನಾಯಕತ್ವಕ್ಕೆ ಅರ್ಹತೆ ಹೊಂದಿದ್ದಾರೆ. ಭಾರತೀಯ ಆಟಗಾರನ ಮೇಲೆ ಏನಾದರೂ ಫ್ರಾಂಚೈಸಿ ನಂಬಿಕೆ ಇಟ್ಟರೆ ಮಯಾಂಕ್‌ರನ್ನು ನಾಯಕತ್ವಕ್ಕೆ ಪರಿಗಣಿಸುವ ಸಾಧ್ಯತೆ ಇದೆ.
ಹೈದರಾಬಾದ್ ತಂಡ: ಅಬ್ದುಲ್ ಸಮದ್, ಐಡೆನ್ ಮಾರ್ಕ್ರಾಮ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್, ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್, ಆದಿಲ್ ರಶೀದ್, ಮಯಾಂಕ್ ಮಾರ್ಕಂಡೆ, ವಿವ್ರಾಂತ್ ಶರ್ಮಾ, ಸಮರ್ಥ್ ವ್ಯಾಸ್, ಸನ್ವಿರ್ ಸಿಂಗ್, ಉಪೇಂದ್ರ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಅನ್ಮೋಲ್‌ಪ್ರೀತ್ ಸಿಂಗ್, ಅಕೇಲ್ ಹೊಸೈನ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications